ಬಿಎಸ್ವೈ ವಿರುದ್ಧ ಎಸಿಬಿಗೆ ದೂರು
Team Udayavani, Feb 12, 2019, 6:37 AM IST
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಹಣ ಹಾಗೂ ಅಧಿಕಾರದ ಆಮಿಷವೊಡ್ಡಿ ಭ್ರಷ್ಟಾಚಾರ ಎಸಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಇಬ್ಬರು ಸಾಮಾಜಿಕ ಕಾರ್ಯಕರ್ತರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಗೆ ಸೋಮವಾರ ಪ್ರತ್ಯೇಕ ದೂರುಗಳನ್ನು ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಎನ್.ಹನುಮೇಗೌಡ ಮತ್ತು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಎಸಿಬಿಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ರಾಜೀನಾಮೆ ನೀಡಿ ಬಂದರೆ ಹಣ ಮತ್ತು ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಆಮಿಷವೊಡ್ಡಿದ್ದಾರೆ.
ಶಾಸಕ ನಾಗನಗೌಡ ಪುತ್ರ ಶರಣಗೌಡ ಅವರಿಗೆ 10 ಕೋಟಿ ರೂ. ಮತ್ತು ಸಚಿವ ಸ್ಥಾನದ ಆಮಿಷವೊಡ್ಡಿರುವ ಧ್ವನಿ ಮುದ್ರಿಕೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದರು. ಈ ಆಡಿಯೋದಲ್ಲಿ ವಿಧಾನಸಭಾಧ್ಯಕ್ಷರು ಹಾಗೂ ನ್ಯಾಯಾಧೀಶರ ಬಗ್ಗೆಯೂ ಉಲ್ಲೇಖೀಸಲಾಗಿದೆ.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆ ನಡೆಸಬೇಕು. ಜತೆಗೆ ಯಡಿಯೂರಪ್ಪ ಅವರಿಗೆ ಸಹಕಾರ ನೀಡಿದ ಶಾಸಕರಾದ ಶಿವನಗೌಡನಾಯಕ, ನಾಗನಗೌಡ ಪುತ್ರ ಶರಣಗೌಡ ವಿರುದ್ಧವೂ ಕ್ರಮಕೈಗೊಳ್ಳಬೇಕು ಎಂದು ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಕೋರಿದ್ದಾರೆ.
ಐದು ಕೋಟಿ ರೂ. ಆಮಿಷ: ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ ಅವರು ಬಿಜೆಪಿ ಮುಖಂಡರಿಂದ ಮುಂಗಡವಾಗಿ ಐದು ಕೋಟಿ ರೂ. ಪಡೆದು ಭ್ರಷ್ಟಾಚಾರ ಎಸಗಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಎಂಬುವರು ಸೋಮವಾರ ಎಸಿಬಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಶಾಸಕರಾದ ಅಶ್ವತ್ಥನಾರಾಯಣ, ವಿಶ್ವನಾಥ್, ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಹಾಗೂ ಹಣ ಪಡೆದ ಶ್ರೀನಿವಾಸಗೌಡ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.
ಬಂಧಿಸಿ, ವಿಚಾರಣೆಗೆ ಒಳಪಡಿಸಿ: ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಹಣ ಹಾಗೂ ಅಧಿಕಾರದ ಆಮಿಷವೊಡ್ಡುವ ಮೂಲಕ ವ್ಯಾಪಕ ಭ್ರಷ್ಟಾಚಾರ ಎಸಗಿದ್ದಾರೆ. ಜತೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ ಸಿಡಿಯಲ್ಲಿರುವುದು ತಮ್ಮದೆ ಧ್ವನಿ ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎನ್.ಹನುಮೇಗೌಡ ಎಸಿಬಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.