ಸಮರ್ಪಕ ವಿದ್ಯುತ್ ಪೂರೈಸಲು ಆಗ್ರಹ
Team Udayavani, Feb 12, 2019, 9:39 AM IST
ಶೃಂಗೇರಿ: ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೈತರು ಮತ್ತು ಸಣ್ಣ ಉದ್ಯಮಕ್ಕೆ ತೀವ್ರ ತೊಂದರೆ ಉಂಟಾಗಿದೆ ಎಂದು ರೈತ ಸಂಘದ ಅಧ್ಯಕ್ಷ ಕಾನುವಳ್ಳಿ ಚಂದ್ರಶೇಖರ್ ಹೇಳಿದರು. ಮೆಸ್ಕಾಂ ಕಚೇರಿಯಲ್ಲಿ ಸೋಮವಾರ ತಾಲೂಕಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮನವಿ ಸಲ್ಲಿಸಿ ಅವರು ಮಾತನಾಡಿದರು.
ತೋಟಗಾರಿಕೆ ಬೆಳೆಗಳಿಗೆ ಈಗ ನೀರು ಅಗತ್ಯವಾಗಿದ್ದು, ವಿದ್ಯುತ್ ಮೋಟಾರ್‌ನಿಂದ ತೋಟಗಳಿಗೆ ನೀರು ಒದಗಿಸಲು ಸಮರ್ಪಕ ವಿದ್ಯುತ್ ಪೂರೈಸಬೇಕು. ಕಳೆದ ಒಂದೂವರೆ ತಿಂಗಳಿಂದ ವಿದ್ಯುತ್ ಪೂರೈಕೆಯಲ್ಲಿ ತೀವ್ರ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪೂರೈಕೆಯಾಗುತ್ತಿರುವ ವಿದ್ಯುತ್ ವೋಲ್ಟೇಜ್‌ನ ಏರುಪೇರುನಿಂದ ಮೋಟಾರ್‌ಗಳು ಸುಟ್ಟು ಹೋಗುತ್ತಿವೆ. ಇದರಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ನೂತನ ವಿದ್ಯುತ್ ಮಾರ್ಗ ನಿರ್ಮಾಣಕ್ಕಾಗಿ ವಾರದಲ್ಲಿ ಮೂರು ದಿನ ವಿದ್ಯುತ್ ಸ್ಥಗಿತಗೊಳಿಸುತ್ತಿದ್ದು, ಇದನ್ನು ಒಂದು ದಿನಕ್ಕೆ ಇಳಿಸಬೇಕು. ಅಕ್ರಮ ಸಕ್ರಮ ಯೋಜನೆಯಡಿ ನಾಲ್ಕು ವರ್ಷದಿಂದ ರೈತರಿಂದ ಹಣ ಪಾವತಿಸಿಕೊಂಡಿರುವ ಮೆಸ್ಕಾಂ ವಿದ್ಯುತ್ ಸಂಪರ್ಕ ಮತ್ತು ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಳವಡಿಸಿಲ್ಲ ಎಂದು ಆರೋಪಿಸಿದರು.
ರೈತ ಮುಖಂಡ ಮೆಣಸೆ ಚನ್ನಕೇಶವ ಮಾತನಾಡಿ, ಪ್ರತಿ ದಿನ ಬೆಳಗ್ಗೆ 6ಕ್ಕೆ ವಿದ್ಯುತ್ ನಿಲುಗಡೆ ಮಾಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಗೃಹಿಣಿಯರಿಗೆ ತೊಂದರೆಯಾಗುತ್ತಿದೆ. ಇದನ್ನು ಕನಿಷ್ಠ 8 ಗಂಟೆಯ ನಂತರವಷ್ಟೇ ವಿದ್ಯುತ್ ಕಡಿತ ಮಾಡಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಸ್. ಮಂಜುನಾಥ್, ಚಿಕ್ಕಮಗಳೂರು-ಆಲ್ದೂರು-ಶೃಂಗೇರಿ ಮಾರ್ಗದ ವಿದ್ಯುತ್ ಮಾರ್ಗಕ್ಕೆ ನೂತನ ಟವರ್ ಗೋಪುರ ನಿರ್ಮಾಣ ಭರದಿಂದ ನಡೆದಿದೆ. ವಾರದಲ್ಲಿ ಮೂರು ದಿನ ಇದಕ್ಕಾಗಿ ವಿದ್ಯುತ್ ಕಡಿತ ಮಾಡುತ್ತಿದ್ದು, ಪ್ರತಿ ದಿನ 7 ಟವರ್ ನಿರ್ಮಾಣ ಮಾಡಿ ಲೈನ್ ಎಳೆಯಲಾಗುತ್ತಿದೆ. ಒಟ್ಟು 168 ಟವರ್ ನಿರ್ಮಾಣ ಕೈಗೊಳ್ಳಬೇಕಿದೆ. ಇದು ಪೂರ್ಣಗೊಂಡ ಕೂಡಲೇ ಸಮರ್ಪಕ ವಿದ್ಯುತ್ ವೋಲ್ಟೇಜ್ ದೊರಕಲಿದೆ. ಇದುವರೆಗೆ ಇದ್ದ ಸಮಸ್ಯೆಯೂ ಬಗೆಹರಿಯಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಏಪ್ರಿಲ್ ಒಳಗಾಗಿ ಕಾಮಗಾರಿ ಮುಗಿಯುವ ನಿರೀಕ್ಷೆಯಿದ್ದು, ಪ್ರತಿ ದಿನ 150ಕ್ಕೂ ಹೆಚ್ಚು ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಳಗ್ಗೆ ವಿದ್ಯುತ್ ಕಡಿತ ಮಾಡುವ ಅವಧಿಯನ್ನು 7:30 ರ ನಂತರ ಮಾಡುವ ಭರವಸೆ ನೀಡಿದರು.
ಮೆಸ್ಕಾಂ ಸಹಾಯಕ ಅಭಿಯಂತರ ಪ್ರಶಾಂತ ಕುಮಾರ್, ಜಿ. ವೀರಣ್ಣಗೌಡ, ರೈತ ಮುಖಂಡರಾದ ಗುಂಡಪ್ಪ, ಮೆಣಸೆ ಅನಂತಯ್ಯ, ಚಂದ್ರಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.