ಸಮಸ್ಯಾತ್ಮಕ ಹಳ್ಳಿಗಳಿಗೆ ನೀರು ಒದಗಿಸಲು ಸೂಚನೆ
Team Udayavani, Feb 12, 2019, 10:36 AM IST
ರಾಯಚೂರು: ಬರದ ಜತೆಗೆ ಬೇಸಿಗೆ ಸಮೀಪಿಸುತ್ತಿದ್ದು, ತೀವ್ರ ಸಮಸ್ಯೆ ಎದುರಿಸುತ್ತಿರುವ ಹಳ್ಳಿಗಳಿಗೆ ತಕ್ಷಣಕ್ಕೆ ಕುಡಿಯುವ ನೀರು ಸರಬರಾಜಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಯಾವ ಹಳ್ಳಿಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕುಡಿಯುವ ನೀರು ವಿಭಾಗದ ಅಧಿಕಾರಿ, ಜಿಲ್ಲೆಯ 9 ಹಳ್ಳಿಗಳಲ್ಲಿ ಸಮಸ್ಯೆ ಇರುವುದಾಗಿ ತಿಳಿಸಿದರು.
ಬೇಸಿಗೆ ಸಮಿಪಿಸುತ್ತಿದ್ದು, ಜನರಿಗೆ ಟ್ಯಾಂಕರ್ ಮೂಲಕ ಅಥವಾ ಆಯಾ ಹಳ್ಳಿಗಳ ಗ್ರಾಮಸ್ಥರ ಸಲಹೆಗಳನ್ನು ಪಡೆದು ಬೋರ್‌ವೆಲ್ ಮೂಲಕ ನೀರು ಪೂರೈಸಿ. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯಾವುದೇ ಇಲಾಖೆ ಅಧಿಕಾರಿಗಳು ಸಭೆಗೆ ಬರುವ ಮುನ್ನ ದಾಖಲೆಗಳ ಸಮೇತ ಬರಬೇಕು ಎಂದ ಅವರು, ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು. ಸರ್ಕಾರದ ವಿವಿಧ ಇಲಾಖೆಗಳ ನಿಗದಿಯಂತೆ ಭೌತಿಕ ಗುರಿ ಸಾಧಿಸಬೇಕು. ಪ್ರಸಕ್ತ ವರ್ಷದ ಅಂತ್ಯದೊಳಗೆ ಗುರಿ ಸಾಧಿಸುವತ್ತ ಎಲ್ಲರೂ ಶ್ರಮ ವಹಿಸಿ ಕೆಲಸ ಮಾಡುವಂತೆ ತಾಕೀತು ಮಾಡಿದರು.
ಯೋಜನಾಧಿಕಾರಿ ಡಾ| ರೋಣಿ ಮಾತನಾಡಿ, ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿ ವಾರದಲ್ಲಿ ಎರಡು ಬಾರಿ ಆಯಾ ಇಲಾಖೆಗಳಲ್ಲಿ ಮತದಾರರ ಜಾಗೃತಿ ಜಾಥಾ, ಘೋಷಣೆ, ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ನಂತರ ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆ ಪ್ರಗತಿ ವರದಿ ವಿವರಿಸಿದರು. ಜಿಪಂ ಉಪಾಧ್ಯಕ್ಷೆ ಗೀತಾ ಕರಿಯಪ್ಪ ವಜ್ಜಲ್, ಉಪ ಕಾರ್ಯದರ್ಶಿ ಮಹ್ಮದ್ ಯೂಸೂಫ್, ಜಿಲ್ಲಾ ಯೋಜನಾ ನಿರ್ದೇಶಕ ಕೆ.ಶರಣಬಸವ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Siddapura: ಕಂಟೇನರ್ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.