241 ಅಂಕ ನಷ್ಟಕ್ಕೆ ಗುರಿಯಾದ ಸೆನ್ಸೆಕ್ಸ್,ನಿಫ್ಟಿ 10,831ರ ಮಟ್ಟಕ್ಕೆ
Team Udayavani, Feb 12, 2019, 11:39 AM IST
ಮುಂಬಯಿ : ಹಣದುಬ್ಬರ, ಕೈಗಾರಿಕಾ ಉತ್ಪಾದನೆಯೇ ಮೊದಲಾದ ಪ್ರಮುಖ ಆರ್ಥಿಕ ಅಂಕಿ ಅಂಶಗಳನ್ನು ಸರಕಾರ ಇಂದು ಬಿಡುಗಡೆ ಮಾಡುವ ಮುನ್ನವೇ ನಿರಾಶೆ ಕವಿದಂತೆ ಕಂಡು ಬಂದ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ವಹಿವಾಟನ್ನು 241.41 ಅಂಕಗಳ ನಷ್ಟದೊಂದಿಗೆ 36,153.62 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 57.40 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,831.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಕಳೆದ ಮೂರು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ ಒಟ್ಟು 580 ಅಂಕಗಳನ್ನು ಕಳೆದುಕೊಂಡಿದೆ.
ಇಂದು ಟಾಪ್ ಲೂಸರ್ಗಳಾಗಿ ಮೂಡಿ ಬಂದ ಹೀರೋ ಮೋಟೋ ಕಾರ್ಪ್, ಎಚ್ ಡಿ ಎಫ್ ಸಿ, ಎಸ್ಬಿಐ, ಇನ್ಫೋಸಿಸ್, ಎಚ್ ಸಿ ಎಲ್ ಟೆಕ್ , ಐಸಿಐಸಿಐ ಬ್ಯಾಂಕ್, ಬಜಾಜ್ ಫಿನಾನ್ಸ್ , ಒಎನ್ಜಿಸಿ, ಬಜಾಜ್ ಆಟೋ ಮತ್ತು ಇಂಡಸ್ ಇಂಡ್ ಬ್ಯಾಂಕ್ ಶೇರುಗಳು ಶೇ.2.63 ರ ನಷ್ಟವನ್ನು ಅನುಭವಿಸಿದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,670 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,023 ಶೇರುಗಳು ಮುನ್ನಡೆ ಸಾಧಿಸಿದವು; 1,516 ಶೇರುಗಳು ಹಿನ್ನಡೆಗೆ ಗುರಿಯಾದವು; 131 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.