ಕಬಡ್ಡಿಗೆ ಪ್ರೋತ್ಸಾಹ ಅಗತ್ಯ: ಬಸರಗಿ
Team Udayavani, Feb 13, 2019, 9:54 AM IST
ಅಥಣಿ: ಆಧುನಿಕತೆಯ ಭರಾಟೆಯಲ್ಲಿ ಅಳಿವಿನಂಚಿನಲ್ಲಿರುವ ಗ್ರಾಮೀಣ ಸೊಗಡಿನ ದೇಶಿ ಕ್ರೀಡೆ ಕಬಡ್ಡಿಗೆ ಎಲ್ಲರೂ ಪ್ರೋತ್ಸಾಹ ನೀಡುವುದು ಅತ್ಯವಶ್ಯ ಎಂದು ಅಥಣಿ ವಲಯ ಡಿವೈಎಸ್‌ಪಿ ಆರ್.ಬಿ. ಬಸರಗಿ ಹೇಳಿದರು.
ಇಲ್ಲಿನ ಶ್ರೀಮಂತ ಭೋಜರಾಜ ಕ್ರೀಡಾಂಗಣದಲ್ಲಿ ಜಾಧವಜಿ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ಮೂರು ದಿನಗಳ ರಾಷ್ಟ್ರಮಟ್ಟದ ಆಹ್ವಾನಿತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರೂ ಕ್ರೀಡಾ ಮನೋಭಾವದೊಂದಿಗೆ ಸ್ಫೂರ್ತಿದಾಯಕ ಆಟವನ್ನಾಡಿ ಕ್ರೀಡೆಯ ವೈಭವ ಹೆಚ್ಚಿಸಬೇಕು. ಪಟ್ಟಣದಲ್ಲಿ ಮೂದಲಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ನಡೆಸುತ್ತಿರುವ ಜೆ.ಇ.ಸಂಸ್ಥೆಯ ಕಾರ್ಯ ಶ್ಲಾಘನೀಯ ಮತ್ತು ಹೆಮ್ಮೆಯ ವಿಷಯ ಎಂದರು.
ಸಂಸ್ಥೆಯ ಕಾರ್ಯಾಧ್ಯಕ್ಷ ಅರವಿಂದ ದೇಶಪಾಂಡೆ ಮಾತನಾಡಿ, ಪ್ರೊ ಕಬಡ್ಡಿ ಪಂದ್ಯಾವಳಿಯಿಂದ ಕಬಡ್ಡಿಗೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಸಿಗುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಮೂರು ದಿನಗಳ ಪಂದ್ಯಾವಳಿಗಳಿಂದ ಸಂಸ್ಥೆಯ ವಿದ್ಯಾರ್ಥಿಗಳು ಪ್ರೊ| ಕಬಡ್ಡಿವರೆಗೆ ಹೋಗುವಂತಾಗಲಿ ಎಂದರು.
ಪ್ರೋ ಕಬಡ್ಡಿ ಆಟಗಾರ ಕಾಸಿಲಿಂಗ ಅಡಿಕೆ ಮಾತನಾಡಿ, ದೇಶಿ ಕ್ರೀಡೆಯಾದ ಕಬ್ಬಡಿಗೆ ಸಾರ್ವಜನಿಕರೊಂದಿ ಸಂಘ ಸಂಸ್ಥೆಗಳು ಪ್ರೋತ್ಸಾಹ ನೀಡುವುದು ಅತ್ಯವಶ್ಯವಾಗಿದೆ. ಕಬಡ್ಡಿಯಿಂದ ಮನೋಬಲ ಹೆಚ್ಚಿಸಿಕೊಳ್ಳಬಹುದು ಎಂದರು.
ಪಂದ್ಯಾವಳಿಯ ಸಂಘಟನಾ ಸಮಿತಿ ಅಧ್ಯಕ್ಷ ಆರ್.ಬಿ. ದೇಶಪಾಂಡೆ ಮಾತನಾಡಿ, ಪಟ್ಟಣದ ಜನರಲ್ಲಿ ಕಬಡ್ಡಿ ಪಂದ್ಯಾವಳಿಯ ಕುರಿತು ಹೆಚ್ಚಿನ ಆಸಕ್ತಿ ಬೆಳೆಯಲಿ ಮತ್ತು ವಿದ್ಯಾರ್ಥಿಗಳು ಈ ದೇಶ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲಿ ಎಂಬ ಉದ್ದೇಶಕ್ಕಾಗಿ ಕಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದರು. ಡಾ| ರಾಮ.ಕುಲಕರ್ಣಿ, ಶ್ರೀಮಂತ ಉಜ್ವಲಸಿಂಗ ಪವಾರದೇಸಾಯಿ, ಸಿ.ಎಸ್.ಬರಗಾಲಿ, ಡಾ| ಪಿ.ಪಿ. ಮಿರಜಕರ, ಸಿ.ಬಿ. ಪಡನಾಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
ಬೆಳಗಾವಿ: ಪ್ರಾಚೀನ ಕಾಲದ ಬಾವಿಗಳಿಂದ ಪ್ರಸಿದ್ಧಿ ಹೊಂದಿದ ಅರಭಾಂವಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.