ಕರಾವಳಿಯ ಮಹಿಳಾ ಲೋಕೋ ಪೈಲಟ್‌!

Team Udayavani, Feb 14, 2019, 12:30 AM IST

1302mlr44-vanithashri.jpg

ಮಂಗಳೂರು: ಪ್ರತೀ ಕ್ಷೇತ್ರದಲ್ಲಿಯೂ ಮಹಿಳೆಯರು ತಮ್ಮ ಸಾಧನೆಯ ಮೂಲಕ ಶ್ರೇಯಸ್ಸುಕಾಣುತ್ತಿದ್ದಾರೆ. ಕಾರು, ಜೀಪು, ಬಸ್ಸು ಬಿಡುತ್ತಿದ್ದ ಮಹಿಳೆಯರು ವಿಮಾನಗಳಲ್ಲಿ ಪೈಲಟ್‌ ಆಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಇದಕ್ಕೆ ಸೇರ್ಪಡೆ ಎಂಬಂತೆ ರೈಲನ್ನು ಕೂಡ ಬಿಡುವ ಮೂಲಕ ಕರಾವಳಿ ಮೂಲದ ಮಹಿಳೆಯೊಬ್ಬರು ರೈಲ್ವೇ ಇಲಾಖೆಯಲ್ಲಿ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. 

ದ.ಕ. ಜಿಲ್ಲೆಯವಿಟ್ಲ ನಿವಾಸಿ ವನಿತಾಶ್ರೀ ಕರಾವಳಿ ಕರ್ನಾಟಕದ “ಏಕೈಕ ಮಹಿಳಾ ಲೋಕೋ ಪೈಲಟ್‌’ (ರೈಲು ಚಲಾಯಿಸುವವರು) ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಪ್ರಸ್ತುತ ಅವರು ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ “ಶಂಟಿಂಗ್‌’ ಹುದ್ದೆ ನಿರ್ವಹಿಸುತ್ತಿದ್ದಾರೆ.

ನಿರ್ದಿಷ್ಟ ನಿಲ್ದಾಣ ವ್ಯಾಪ್ತಿಯಲ್ಲಿ ರೈಲುಗಳನ್ನು ಚಲಾಯಿಸುವುದು, ಎಂಜಿನ್‌ ಅಥವಾ ಬೋಗಿಗಳನ್ನು ಬದಲಾಯಿಸುವುದು, ತಂಗುವ ಅಥವಾ ತಡವಾಗಿ ಹೊರಡುವ ರೈಲುಗಳನ್ನು ಪ್ರತ್ಯೇಕ ಹಳಿಯಲ್ಲಿ ತಂದು ನಿಲ್ಲಿಸುವುದು ಮುಂತಾದ ಕೆಲಸಗಳನ್ನು “ಶಂಟಿಂಗ್‌’ ವೃತ್ತಿಯಲ್ಲಿ ಇರುವವರು ನಿಭಾಯಿಸುತ್ತಾರೆ. ಈ ವಿಭಾಗದ ಸಿಬಂದಿ ಒಂದು ನಿಲ್ದಾಣದಿಂದ ಇನ್ನೊಂದು ನಿಲ್ದಾಣಕ್ಕೆ ರೈಲು ಚಲಾಯಿಸುವುದಿಲ್ಲ. ಸದ್ಯ ವನಿತಾಶ್ರೀ ಇದೇ ಕೆಲಸ ನಿರ್ವ ಹಿಸುತ್ತಿದ್ದಾರೆ. ವನಿತಾಶ್ರೀ “ಲೋಕೋ ಪೈಲಟ್‌’ ಆಗಿದ್ದರೂ ಇಬ್ಬರು ಚಿಕ್ಕ ಮಕ್ಕಳು ಇರುವ ಕಾರಣದಿಂದ ದೂರದ ಊರುಗಳಿಗೆ ರೈಲು ಚಲಾಯಿಸಲು ಅವಕಾಶ ಬೇಡ ಎಂದು ಇಲಾಖೆಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ದೂರದ ರೈಲು ಓಡಾಟ ನಡೆಸುತ್ತಿಲ್ಲ.

ಡಿಪ್ಲೊಮಾ ಪದವಿ
ಮಂಗಳೂರು ಕೆಪಿಟಿಯಲ್ಲಿ ಅಟೋಮೊಬೈಲ್‌ ಡಿಪ್ಲೊಮಾ ಮುಗಿಸಿದ ಸಂದರ್ಭ ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಅವಕಾಶ ಇರುವ ಬಗ್ಗೆ ತಿಳಿದಿದ್ದರು. ಆ ಬಳಿಕ ಪರೀಕ್ಷೆ ಬರೆದು, ವನಿತಾಶ್ರೀ 2006ರಲ್ಲಿ ಚೆನ್ನೈಯಲ್ಲಿ ಅಸಿಸ್ಟೆಂಟ್‌ ಲೋಕೋ ಪೈಲಟ್‌ ಆಗಿ ವೃತ್ತಿ ಜೀವನ ಆರಂಭಿಸಿದ್ದರು.ವನಿತಾಶ್ರೀ ಪತಿ ಸತೀಶ್‌ ಪೊಲೀಸ್‌ ಇಲಾಖೆ ಉದ್ಯೋಗಿ. ಇಬ್ಬರು ಗಂಡುಮಕ್ಕಳಿದ್ದು, ಓರ್ವ ಐದನೇ ತರಗತಿ. ಇನ್ನೋರ್ವ ಒಂದನೇ ತರಗತಿ. ತಂದೆ ವಿಟ್ಲ ನಾರಾಯಣ ನಾಯ್ಕ ಪಶುಸಂಗೋಪನೆ ಇಲಾಖೆಯಲ್ಲಿ ನಿವೃತ್ತ ಕಾಂಪೌಂಡರ್‌. ತಾಯಿ ಜಯಶ್ರೀ ಮಂಗಳೂರು ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ಬೆಂಗಳೂರು ಕಚೇರಿಗೆ ವರ್ಗಾವಣೆಗೊಂಡಿದ್ದಾರೆ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.