ಬಿಜೆಪಿಯಿಂದಲೇ ಅವ್ಯವಹಾರ ತನಿಖೆ
Team Udayavani, Feb 14, 2019, 1:10 AM IST
ವಿಧಾನಪರಿಷತ್: ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸ್ವತಃ ಬಿಜೆಪಿ ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲು ನಿರ್ಧರಿಸಿದೆ. ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಅವ್ಯವಹಾರದ ತನಿಖೆಗೆ ಸದನ ಸಮಿತಿ ರಚನೆಗೆ ಒತ್ತಾಯಿಸಿ ಬಾವಿಗಿಳಿದು ಪ್ರತಿಪಕ್ಷದ ಸದಸ್ಯರು ಪ್ರತಿಭಟನೆ ಮುಂದು ವರಿಸಿದರು. ಆದರೆ, ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಮಂಗಳವಾರವೇ ಸ್ಪಷ್ಟಪಡಿ ಸಿದ್ದಾರೆ. “ನಿಮ್ಮ ಮೂಗಿನ ನೇರಕ್ಕೆ ಎಲ್ಲವೂ ನಡೆಯಬೇಕು ಎಂದು ಬಯಸುವುದು ತಪ್ಪು. ಪ್ರಶ್ನೋತ್ತರಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಹೇಳಿದರು.
ಆಗ ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ ಪೂಜಾರಿ, “ಸುಮಾರು 1,800 ಕೋಟಿ ವೆಚ್ಚದ ಯೋಜನೆ ಇದಾಗಿದೆ. ಅಂದಾಜು 18 ಸಾವಿರ ಘಟಕಗಳ ಪೈಕಿ ಅರ್ಧ ಕ್ಕರ್ಧ ಕಾರ್ಯನಿರ್ವಹಿಸುತ್ತಿಲ್ಲ. ಇದರಲ್ಲಿ ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಆದರೆ, ತನಿಖೆ ನಡೆಸಲು ಸರ್ಕಾರಕ್ಕೆ ಇಷ್ಟವಿಲ್ಲ. ಹಾಗಂತ, ನಾವು ಇದನ್ನು ಕೈಬಿಡುವುದಿಲ್ಲ. ಸಾರ್ವಜನಿಕರ ಹಿತಾಸಕ್ತಿಯಿಂದ ಸ್ವತಃ ಬಿಜೆಪಿಯಿಂದಲೇ ಹಳ್ಳಿ-ಹಳ್ಳಿಗೆ ತೆರಳಿ ತನಿಖೆ ನಡೆಸಿ, ವರದಿಯನ್ನು ಸರ್ಕಾರದ ಮುಖಕ್ಕೆ ಹಿಡಿಯುತ್ತೇವೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.