ಶಿಕ್ಷಕರ ವರ್ಗಾವಣೆ ವಿಧೇಯಕ ಅಂಗೀಕಾರ
Team Udayavani, Feb 14, 2019, 1:21 AM IST
ವಿಧಾನಸಭೆ: ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆಯಲ್ಲಿ ನಿಯಮಗಳ ಸಡಿಸಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೆಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ವಿಧೇಯಕ ಗದ್ದಲದ ನಡುವೆ ಅಂಗೀಕಾರಗೊಂಡಿತು. ಶಿಕ್ಷಕರ ವಿವಿಧ ವೃಂದಗಳ ವಲಯದಲ್ಲಿ ವರ್ಗಾವಣೆಗೆ ಇರುವ ಸೇವಾವಧಿ 5 ವರ್ಷದಿಂದ ಮೂರು ವರ್ಷಕ್ಕೆ ಕಡಿಮೆಗೊಳಿಸುವುದು.
ಪದವಿ ಪೂರ್ವ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ನಗರಪಾಲಿಕೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳನ್ನು ನಗರ ಪ್ರದೇಶದ ವ್ಯಾಪ್ತಿಯಿಂದ ಹೊರಗಿಡಲು ಅವಕಾಶ ಕಲ್ಪಿಸಲಾಗಿದೆ. ಒಬ್ಬ ಶಿಕ್ಷಕ ಅಥವಾ ಆ ಶಿಕ್ಷಕರ ಪತಿ ಅಥವಾಪತ್ನಿ ಅಥವಾ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಮತ್ತು ಅದಕ್ಕೆ ವೈದ್ಯಕೀಯ ಚಿಕಿತ್ಸೆಯು ಎಲ್ಲಿಯೂ ದೊರೆಯದಿದ್ದಲ್ಲಿ, ಪತಿ ಮತ್ತು ಪತ್ನಿ ಪ್ರಕರಣದಲ್ಲಿ ಒಂದೇ ಸ್ಥಳದಲ್ಲಿ ನಿಯುಕ್ತಿಗಾಗಿ ಕಡ್ಡಾಯ ವರ್ಗಾವಣೆಯಿಂದ ವಿನಾಯತಿ ನೀಡಲು ತಿದ್ದುಪಡಿ ತರಲಾಗಿದೆ. ಶಿಕ್ಷಕರಿಗೆ ಆ ಶಿಕ್ಷಕರ ಪತಿ ಅಥವಾ ಪತ್ನಿ ಸರ್ಕಾರಿ ಅಥವಾ ಸಾರ್ವಜನಿಕ ವಲಯದ ಉದ್ಯಮದಲ್ಲಿ ಕೆಲಸ ಮಾಡುತ್ತಿರುವ ಸ್ಥಳಗಳಿಗೆ ವರ್ಗಾವಣೆಗೆ ಅವಕಾಶ ಕಲ್ಪಿಸಲು ಕಾಯ್ದೆಗೆ ತಿದ್ದುಪಡಿ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.