ನಗರದ 2515 ಕಡೆ ಮಳೆನೀರುಗಾಲುವೆ ಒತ್ತುವರಿ

Team Udayavani, Feb 14, 2019, 9:34 AM IST

blore-6.jpg

ಬೆಂಗಳೂರು: ನಗರದ 2,515 ಕಡೆ ಮಳೆ ನೀರು ಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿದ್ದು, ಆ ಪೈಕಿ ಮೂರು ವರ್ಷದಲ್ಲಿ 479 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಬುಧವಾರ ಹೈಕೋರ್ಟ್‌ಗೆ ಪ್ರಮಾಣಪತ್ರ (ಅಫಿಡವಿಟ್‌) ಸಲ್ಲಿಸಿದೆ.

ನಗರದಲ್ಲಿ ಮಳೆ ನೀರು ಕಾಲುವೆಗಳ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ಸಿಟಿಜನ್‌ ಆ್ಯಕ್ಷನ್‌ ಗ್ರೂಪ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್‌.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ.ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠಕ್ಕೆ ಬಿಬಿಎಂಪಿ ಮುಖ್ಯ ಇಂಜಿನಿಯರ್‌ (ಮಳೆ ನೀರು ಕಾಲುವೆ ವಿಭಾಗ) ಬಿ.ಎಸ್‌. ಪ್ರಹ್ಲಾದ್‌ ಮಳೆ ನೀರು ಕಾಲುವೆಗಳ ಕುರಿತ ವಸ್ತುಸ್ಥಿತಿ ವರದಿಯನ್ನು ಪ್ರಮಾಣಪತ್ರ ರೂಪದಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಫೆ.22ಕ್ಕೆ ಮುಂದೂಡಿತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 2,515 ಕಡೆ ಮಳೆ ನೀರು ಕಾಲುವೆ ಒತ್ತುವರಿ ಗುರುತಿಸಲಾಗಿದೆ. ಇದರಲ್ಲಿ 2016-17 ಮತ್ತು 2017-18ರಲ್ಲಿ 428 ಮತ್ತು 2018-19ರಲ್ಲಿ 51 (ಇದುವರೆಗೆ) ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಉಳಿದಂತೆ 450 ಒತ್ತುವರಿಗಳ ಸರ್ವೆ ಪೂರ್ಣಗೊಳಿಸಿ, 399 ಪ್ರಕರಣಗಳ ತೆರವಿಗೆ ಗುರುತಿಸಲಾಗಿದೆ. 1,637 ಕಡೆ ಸರ್ವೆ ಕೈಗೊಳ್ಳಬೇಕಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದ “ಅಂತರ್‌ ಇಲಾಖಾ ಸಮನ್ವಯ ಸಮಿತಿ’ ತೆರವು ಕಾರ್ಯಾಚರಣೆಯ ಪರಿಶೀಲನೆ ನಡೆಸುತ್ತಿದೆ.

ಪಾಲಿಕೆ ವ್ಯಾಪ್ತಿಯ ಎಂಟು ಕಾರ್ಯನಿರ್ವಾಹಕ ಇಂಜಿನಿಯರುಗಳು, ಕೋರಮಂಗಲ ವ್ಯಾಲಿಯ ಒಬ್ಬ ಕಾರ್ಯನಿರ್ವಾಹಕ ಅಭಿಯಂತರರು ತಮ್ಮ ವಲಯಗಳ ವ್ಯಾಪ್ತಿಯಲ್ಲಿ ಮಳೆ ನೀರು ಕಾಲುವೆಗಳ ಒಂದಾವರ್ತಿ ಹೂಳು ತೆಗೆಯಲು ಟೆಂಡೆರ್‌ ಕರೆದಿದ್ದಾರೆ. ಈ ಟೆಂಡರ್‌ಗಳಿಗೆ 2018ರ ಡಿ.24ರಂದು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಈಗಾಲೇ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿದ್ದು, ಕಾರ್ಯಾದೇಶ ಪಡೆದ 45 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಿದೆ.

ಇದಲ್ಲದೇ 842 ಕಿ.ಮೀ. “ಲೈನ್‌ ಕ್ಯಾನಲ್‌’ (ಎರಡು ಬದಿಗಳಲ್ಲಿ ತಡೆಗೋಡೆಗಳು ಇರುವ ಮಳೆ ನೀರು ಕಾಲುವೆ) ಪೈಕಿ 400 ಕಿ.ಮೀ ವಿಸ್ತೀರ್ಣದ ವಾರ್ಷಿಕ ನಿರ್ವಹಣೆಗೆ 2018ರ ಅ.10ರಂದು ಟೆಂಡರ್‌ ಕರೆಯಲಾಗಿದೆ. ಇದರ ಅನುಮೋದನೆಗಾಗಿ 2019ರ ಜ.17ರಂದು ಸರ್ಕಾರಕ್ಕೆ ಕಳಿಸಿಕೊಡಲಾಗಿದೆ. ಸರ್ಕಾರದ ಅನುಮೋದನೆ ಸಿಕ್ಕ ಬಳಿಕ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗುವುದು ಎಂದು ಪ್ರಮಾಣಪತ್ರದಲ್ಲಿ ಬಿಬಿಎಂಪಿ ಹೇಳಿದೆ.

ಟಾಪ್ ನ್ಯೂಸ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.