ಉ.ಪ್ರ. ಯೋಗಿ ಸರಕಾರದ ನಿರ್ಲಕ್ಷ್ಯ: ಸಚಿವ ಪದ ತ್ಯಜಿಸಿದ ರಾಜಭಾರ್
Team Udayavani, Feb 14, 2019, 10:19 AM IST
ಲಕ್ನೋ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಚಿವ ಸಂಪುಟದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿರುವ ಮತ್ತು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ನಾಯಕರಾಗಿರುವ ಓಂ ಪ್ರಕಾಶ್ ರಾಜಭಾರ್ ಅವರು ‘ನನ್ನನ್ನು ಸರಕಾರ ಅಲಕ್ಷಿಸುತ್ತಿದೆ’ ಎಂಬ ಕಾರಣಕ್ಕೆ ಅಸಮಾಧಾನ ತೋರ್ಪಡಿಸಿ ಸಚಿವ ಪದವನ್ನು ಬಿಟ್ಟುಕೊಟ್ಟಿದ್ದಾರೆ.
‘ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ವಿತರಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಮತ್ತು ಸಾಮಾಜಿಕ ನ್ಯಾಯ ಸಮಿತಿಯು ಹಿಂದುಳಿದ ತಮ್ಮ ಸಮುದಾಯಕ್ಕೆ ಕೊಟ್ಟಿರುವ ಶೇ.27ರ ಮೀಸಲಾತಿಯ ಶಿಫಾರಸನ್ನು ರಾಜ್ಯ ಸರಕಾರ ಅನುಷ್ಠಾನಿಸಿಲ್ಲ’ ಎಂಬ ಕಾರಣ ನೀಡಿ ರಾಜಭಾರ್ ತಮ್ಮ ಹುದ್ದೆಯನ್ನು ತ್ಯಜಿಸಿದ್ದಾರೆ.
ರಾಜಭಾರ್ ಅವರು ಪೂರ್ವ ಉತ್ತರ ಪ್ರದೇಶದ ಗಾಜೀಪುರದ ಜಹೂರಾಬಾದ್ ಕ್ಷೇತ್ರದ ಶಾಸಕರು. ಇವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ರಾಜ್ಯದಲ್ಲಿನ ಬಿಜೆಪಿ ಸರಕಾರದ ಮಿತ್ರ ಪಕ್ಷವಾಗಿದೆ. ರಾಜಭಾರ್ ಅವರು ಜನರ ಸಶಕ್ತೀಕರಣ ಮತ್ತು ವಿಕಲಾಂಗರ ಅಭ್ಯುದಯ ಇಲಾಖೆಯ ಹೊಣೆಗಾರಿಕೆಯನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
MUST WATCH
ಹೊಸ ಸೇರ್ಪಡೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Lockdown Days: ಲಾಕ್‌ಡೌನ್ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.