ಯುವಕರಲ್ಲಿ ಆರೋಗ್ಯ ಜಾಗೃತಿಗಾಗಿ ಮಹಾರನ್
Team Udayavani, Feb 14, 2019, 12:20 PM IST
ಹುಬ್ಬಳ್ಳಿ: ಮುಂದಿನ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯಬೇಕು ಹಾಗೂ ಯುವಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಬೇಕು ಎನ್ನುವ ಕಾರಣಕ್ಕಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ “ಮಹಾರನ್’ ಹಮ್ಮಿಕೊಂಡಿದ್ದೇವೆ ಎಂದು ಕುಮಾರ ಮಲ್ಲಪ್ಪ ನೀರಗುಂದ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಯಾವುದೇ ಪಕ್ಷ, ಸಂಘಟನೆಗೂ ಸೇರಿದವರಲ್ಲ. ಕೇವಲ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳು, ದೇಶದ ಪ್ರಗತಿಯ ದೃಷ್ಟಿಯಿಂದ ಮೋದಿಯವರು ಪ್ರಧಾನಿ ಆಗಬೇಕು ಎನ್ನುವ ಕಾರಣಕ್ಕೆ ಈ ಓಟ ಕೈಗೊಂಡಿದ್ದೇವೆ. ಇಂದಿನ ಯುವಕರಲ್ಲಿ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ವಿವಿಧ ರೋಗಗಳಿಂದ ನರಳುತ್ತಿದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಮಹಾರನ್‌ಗೆ ಸುಮಾರು 35-40 ಲಕ್ಷ ರೂ. ಖರ್ಚಾಗಬಹುದು ಎನ್ನುವ ನಿರೀಕ್ಷೆಯಿದೆ. ಯಾರಿಂದಲೂ ಇದಕ್ಕಾಗಿ ಹಣ ನಿರೀಕ್ಷಿಸದೆ ಸ್ವಂತ ಖರ್ಚಿನಲ್ಲಿ ಮಾಡುತ್ತಿದ್ದೇವೆ. ಚಾಲಕ ಸೇರಿದಂತೆ 6 ಜನರ ತಂಡವಿದ್ದು, ದಂಪತಿಗಳಿಬ್ಬರು ಮಾತ್ರ ಓಡುತ್ತಿದ್ದೇವೆ. ಮೂಲತಃ ಕೊಡಗಿನವರಾದರೂ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದೇವೆ. 2014ರಲ್ಲಿ ಮಹಾರನ್ ಮಾಡುಬೇಕು ಎನ್ನುವ ಪ್ರಯತ್ನಕ್ಕೆ ಮುಂದಾಗಿದ್ದೇವು. ಹಲವು ಕಾರಣಗಳಿಂದ ಇದು ಯಶಸ್ವಿಯಾಗಿರಲಿಲ್ಲ. ಹೀಗಾಗಿ 2016ರಿಂದ ನಿತ್ಯವೂ ದೈಹಿಕ ಕಸರತ್ತು ನಡೆಸಿದ್ದೇವೆ ಎಂದು ವಿವರಿಸಿದರು.
ರೂಪಾ ಕುಮಾರ ಮಾತನಾಡಿ, ದೇಶದ ಜನರಿಂದ ಹಣ ಸಂಗ್ರಹಿಸಿ ಸೈನಿಕರ ಕಲ್ಯಾಣ
ನಿಧಿಗೆ ನೀಡಬೇಕು ಎನ್ನುವ ಮಹತ್ವದ ಉದ್ದೇಶ ಹೊಂದಿದ್ದೇವೆ. ಇದೀಗ ಕನ್ಯಾಕುಮಾರಿಯಿಂದ ಇಲ್ಲಿಯವರೆಗೆ ಸುಮಾರು 54 ಸಾವಿರ ರೂ. ಸೈನಿಕರ ಕಲ್ಯಾಣ ನಿಧಿಗೆ ಹಣ ನೀಡಿದ್ದಾರೆ. ಕಾಶ್ಮೀರದವರೆಗೂ ಈ ಹಣ ಸಂಗ್ರಹಿಸಿ ಪ್ರಧಾನಿ ಮೋದಿ ಮೂಲಕ ಕಲ್ಯಾಣ ನಿಧಿಗೆ ನೀಡಲಾಗುವುದು. ಜ.26ರಿಂದ ಆರಂಭವಾಗಿರುವ ಈ ಓಟ ಏಪ್ರಿಲ್ 10ರಂದು ಕಾಶ್ಮೀರ ತಲುಪುವ ನಿರೀಕ್ಷೆಯಿತ್ತು. ನಿತ್ಯ 60 ಕಿ.ಮೀ. ಬದಲು 80 ಕಿ.ಮೀ. ಕ್ರಮಿಸುತ್ತಿರುವುದರಿಂದ ಏ.1ರಂದು ಕಾಶ್ಮೀರ ತಲುಪುವ ಸಾಧ್ಯತೆಯಿದೆ ಎಂದು ತಿಳಿಸಿದರು. ಟೀಂ ಮೋದಿ ಜಿಲ್ಲಾ ಸಂಚಾಲಕ ಸುಭಾಸಸಿಂಗ್ ಜಮಾದಾರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.