ಅಂಬಲಪಾಡಿ: ಸನಿವಾಸ ಶಿಬಿರ ಸಮಾಪನ

Team Udayavani, Feb 15, 2019, 1:20 AM IST

140219astro06.jpg

ಉಡುಪಿ: ಭವಿಷ್ಯತ್ತಿನ ಯೋಜನೆಗಳಿಗೆ ಸ್ಪಷ್ಟ ರೂಪುರೇಷೆ ನೀಡುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ವಿದ್ಯಾರ್ಥಿಗಳ ಕಲಿಕಾಸಕ್ತಿ ವೃದ್ಧಿಯಾಗುತ್ತದೆ ಎಂದು ಶ್ರೀ ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್‌ ಹೇಳಿದರು.

ಅಂಬಲಪಾಡಿಯ ಭವಾನಿ ಮಂಟಪದಲ್ಲಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಸಹಯೋಗದಲ್ಲಿ ವಿದ್ಯಾಪೋಷಕ್‌ ಯಕ್ಷಗಾನ ಕಲಾರಂಗ ಉಡುಪಿ ಆಯೋಜಿಸಿರುವ “ಅಂಬಲಪಾಡಿ ಸನಿವಾಸ ಶಿಬಿರ’ದ ಸಮಾರೋಪದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಬಿರದ ನಿರ್ದೇಶಕ ಪ್ರವೀಣ್‌ ಗುಡಿ ವಿದ್ಯಾರ್ಥಿಗಳಲ್ಲಿ ಸಾಧನೆಯ ಬೀಜ ಬಿತ್ತುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಕ್ಕಳು ಶಿಸ್ತುಬದ್ಧ ಜೀವನಕ್ರಮ ಅಳವಡಿಸಿಕೊಳ್ಳಬೇಕು. ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಜೀವನದಲ್ಲಿ ಸಂಭವಿಸುವ ಏರುಪೇರು ಗಳನ್ನು ಸಮರ್ಥ ರೀತಿಯಲ್ಲಿ ಎದುರಿಸಿ ಯಶಸ್ಸು ಪಡೆಯಬೇಕು ಎಂದರು. ಉದ್ಯಮಿ ವಸಂತಕುಮಾರ್‌ ಶೆಟ್ಟಿ ಯಕ್ಷಗಾನ ಕಲಾಸಂಸ್ಕೃತಿಯಂತಹ ಕಾರ್ಯಕ್ರಮಗಳನ್ನು ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಬೇಕು ಎಂದರು.

ಕಾಂತಾವರ ಕನ್ನಡ ಸಂಘದ ಅಧ್ಯಕ್ಷ ಡಾ| ನಾ. ಮೊಗಸಾಲೆ ಇಂದು ಸಮಾಜದಲ್ಲಿ ಮಾದರಿ ವ್ಯಕ್ತಿಗಳ ಸಂಖ್ಯೆ ಕಡಿಮೆ ಯಾಗುತ್ತಿದೆ. ನೂರಾರು ಮನೆಗಳನ್ನು  ಸೇರಿಸಿ ಒಂದು ಮಾಡು ವಂತಹ ಕಾರ್ಯಕ್ರಮ ಸನಿವಾಸ ಶಿಬಿರ ಎಂದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಬಳಿಕ ತರಬೇತಿದಾರರನ್ನು ಅಭಿನಂದಿಸಲಾಯಿತು.
 
5 ದಿನಗಳ ಕಾಲ ನಡೆದ ಈ ಶಿಬಿರದಲ್ಲಿ ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ 262 ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಡಾ| ನಾರಾಯಣ ಎಂ.ಹೆಗಡೆ, ಡಾ| ಯು.ಸಿ.ನಿರಂಜನ್‌, ವಿಶ್ವನಾಥ ಶೆಣೈ, ಕೆ.ಬಾಬಣ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೇಕಾರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ನಿರೂಪಿಸಿದರು.

ಟಾಪ್ ನ್ಯೂಸ್

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.