ಇಂದು ನಾರ್ವೆಯಲ್ಲಿ ಕ್ಷಮಿಸಿ
Team Udayavani, Feb 15, 2019, 12:30 AM IST
ಕನ್ನಡದ ಅನೇಕ ಚಿತ್ರಗಳು ವಿದೇಶಗಳಲ್ಲಿ ಪ್ರದರ್ಶನವಾಗಿವೆ. ಅದರಲ್ಲೂ ಬಿಡುಗಡೆ ನಂತರ ಪ್ರದರ್ಶನಗೊಂಡಿರುವುದೇ ಹೆಚ್ಚು. ಈಗ ಹೊಸಬರ ಚಿತ್ರವೊಂದು ನಾರ್ವೆ ದೇಶದಲ್ಲಿ ಪೂರ್ವಭಾವಿ ಪ್ರದರ್ಶನವಾಗುತ್ತಿದೆ. ಭರತ್ ಎಸ್.ನಾವುಂದ ನಿರ್ದೇಶನದ “ಅಡಚಣೆಗಾಗಿ ಕ್ಷಮಿಸಿ’ ಚಿತ್ರದ ಪ್ರೀಮಿಯರ್ ಶೋ ಫೆಬ್ರವರಿ 16 ರಂದು ನಾರ್ವೆ ದೇಶದ ಓಸ್ಲೋ ನಗರದಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಕನ್ನಡದ ಚಿತ್ರವೊಂದು ಬಿಡುಗಡೆ ಮುನ್ನವೇ ನಾರ್ವೆ ದೇಶದಲ್ಲಿ ಪೂರ್ವಭಾವಿ ಪ್ರದರ್ಶನ ಕಾಣುತ್ತಿರುವುದು ವಿಶೇಷ.
ಅಂದಹಾಗೆ, “ಅಡಚಣೆಗಾಗಿ ಕ್ಷಮಿಸಿ’ ಚಿತ್ರದ ಪೂರ್ವಭಾವಿ ಪ್ರದರ್ಶನದ ಉಸ್ತುವಾರಿಯನ್ನು ಚಿತ್ರದ ಕಾರ್ಯಕಾರಿ ನಿರ್ಮಾಪಕ ಹಾಗು ನಾರ್ವೆ ದೇಶದ ಪ್ರಜೆಯಾಗಿರುವ ಮಧುಸೂದನ್ ಶ್ರೀನಿವಾಸ್ ಅವರು ವಹಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಸದ್ಗುಣ ಮೂರ್ತಿ ನಿರ್ಮಾಪಕರು. ಪ್ರದೀಪ್ ವರ್ಮ ನಾಯಕರಾಗಿರುವ ಈ ಚಿತ್ರದಲ್ಲಿ ವಿದ್ಯಾ ಕುಲಕರ್ಣಿ, ಕೆ.ಎಸ್.ಶ್ರೀಧರ್, ಶ್ರೀನಿವಾಸ್ ಪ್ರಭು, ಪ್ರೀತುಪೂಜಾ, ಮೇಘ, ಸುಶೀಲ್‌ಕುಮಾರ್, ಶಿವಮಂಜು, ಅಗಸ್ತ್ಯ, ಹರಿಪ್ರಸಾದ್ ನಟಿಸಿದ್ದಾರೆ. ಎಸ್.ಪ್ರದೀಪ್ ವರ್ಮ ಸಂಗೀತವಿದೆ. ರವಿವರ್ಮ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.