ಇನ್ಮುಂದೆ ಕೌನ್ಸೆಲಿಂಗ್ ಇಲ್ಲದೆಯೂ ಶಿಕ್ಷಕರ ವರ್ಗಾವಣೆ ನಡೆಯುತ್ತೆ
Team Udayavani, Feb 15, 2019, 1:44 AM IST
ಬೆಂಗಳೂರು: ಬಹುನಿರೀಕ್ಷಿತ ಶಿಕ್ಷಕ್ಷರ ವರ್ಗಾವಣೆ ಕುರಿತ “ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ) ಮಸೂದೆ-2018 ಆಡಳಿತ ಪಕ್ಷದ ಸದಸ್ಯರ ವಿರೋಧದ ನಡು ವೆಯೂ ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು, ಕೌನ್ಸೆಲಿಂಗ್ ಮೂಲಕ ಭರ್ತಿ ಯಾಗದ ನಿರ್ದಿಷ್ಟ ಹುದ್ದೆ ಗಳನ್ನು ಸರಕಾರದಿಂದ ಭರ್ತಿ ಮಾಡುವುದು, ನಗರ ಪ್ರದೇಶದಲ್ಲಿ 10 ವರ್ಷ ಪೂರೈಸಿದವರನ್ನು ಗ್ರಾಮೀಣ ಪ್ರದೇಶಕ್ಕೆ ಕಡ್ಡಾಯ ವರ್ಗಾವಣೆ ಮಾಡುವ ವಿಚಾರದಲ್ಲಿ ಸಾಕಷ್ಟು ಪ್ರತಿರೋಧ ವ್ಯಕ್ತವಾಗಿದೆ.
ಇದು ಭ್ರಷ್ಟಾಚಾರಕ್ಕೆ ನೇರ ಅವಕಾಶ ಮಾಡಿಕೊಡುತ್ತದೆ ಮತ್ತು ಬಲಿಷ್ಠ ಶಿಕ್ಷಕರು ಸುಲಭದಲ್ಲಿ ವರ್ಗಾವಣೆ ಪಡೆಯಲಿದ್ದಾರೆ. ಈ ಹುದ್ದೆಯ ವರ್ಗಾವಣೆಗಾಗಿಯೇ ದಲ್ಲಾಳಿಗಳು ಹುಟ್ಟಿಕೊಳ್ಳಲಿದ್ದಾರೆ ಎಂದು ಮೇಲ್ಮನೆಯಲ್ಲಿ ಆಡಳಿತ ಪಕ್ಷದ ಸದಸ್ಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಮಸೂದೆಗೆ ಪಕ್ಷಭೇದ ಮರೆತು ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಅನುಮತಿ ಲಭಿಸುವುದೇ?
ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಯಲ್ಲಿ ಸಾರ್ವಜನಿಕ ಹಿತಾಸಕ್ತಿಯಲ್ಲಿ ತುಂಬುವ ಅಗತ್ಯವಿರುವ ಒಂದು ಸ್ಥಳವನ್ನು ಯಾವೊಬ್ಬ ಶಿಕ್ಷಕನೂ ಆಯ್ಕೆ ಮಾಡಿಕೊಳ್ಳದೇ ಇದ್ದಾಗ ಸರಕಾರವೇ ಇದನ್ನು ಭರ್ತಿ ಮಾಡಲಿದೆ. ಕನಿಷ್ಠ ಸೇವಾ ವಧಿಯನ್ನು ಪೂರೈಸಿರುವ ಶಿಕ್ಷಕರನ್ನು ಈ ಹುದ್ದೆಗೆ ಷರತ್ತುಗಳನ್ನು ನಿಯಮಗಳ ಮೂಲಕ ವರ್ಗಾಯಿಸಲು ಸರಕಾರಕ್ಕೆ ಅಧಿಕಾರ ನೀಡಲಾಗಿದೆ. ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆಯುವುದೇ ಎಂಬ ಅನುಮಾನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.