ಸರ್ಕಾರಿ ಕಚೇರಿಗಳಲ್ಲಿ ಇಂಟರ್ನ್ ಶಿಪ್
Team Udayavani, Feb 15, 2019, 1:55 AM IST
ಬೆಂಗಳೂರು: ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿಗಳಲ್ಲಿ ಇಂಟರ್ನ್ಶಿಪ್ (ತರಬೇತಿ) ಮಾಡಲು ಅವಕಾಶ ಕಲ್ಪಿಸಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಸಮಾಜದಲ್ಲಿ ಹೊಸ ಚಿಂತನೆ, ಆಲೋಚನೆಗಳು, ಪ್ರಕ್ರಿಯೆಗಳು ನಡೆಯುತ್ತಿದ್ದು, ಸರ್ಕಾರಿ ವ್ಯವಸ್ಥೆಯಲ್ಲಿ ಇನ್ನೂ ಹಳೆಯ ಮಾದರಿ ಮುಂದುವರೆಯುತ್ತಿರುವುದರಿಂದ ಹೊಸ ಆಲೋಚನೆ ಹೊಂದಿರುವ ಸ್ನಾತಕೋತ್ತರ ಹಾಗೂ ಸಂಶೋಧನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಕಚೇರಿಗಳಲ್ಲಿ ಇಂಟರ್ನ್ಶಿಪ್ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಸರ್ಕಾರದ 27 ವಿವಿಧ ಇಲಾಖೆಗಳಲ್ಲಿ ಎರಡು ತಿಂಗಳು ತರಬೇತಿ ಪಡೆಯಬಹುದು ಎಂದು ಹೇಳಿದರು.
ಕೃಷಿ, ಗ್ರಾಮೀಣಾಭಿವೃದ್ದಿ, ನಗರಾಭಿವೃದ್ದಿ, ಕಂದಾಯ ಸೇರಿದಂತೆ ಪ್ರಮುಖ ವಲಯದಲ್ಲಿ ಇಂಟರ್ನ್ಶಿಪ್ ಕೈಗೊಳ್ಳಲು ಅವಕಾಶ ನೀಡಲಾಗುವುದು. ಆಸಕ್ತರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆಯ್ಕೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಆಯ್ಕೆಯಾದವರಿಗೆ ಯಾವುದೇ ರೀತಿಯ ಗೌರವ ಧನ ಇರುವುದಿಲ್ಲ ಎಂದು ಹೇಳಿದರು.
ಪ್ರಮುಖ ತೀರ್ಮಾನಗಳು
ಬ್ರಾಹ್ಮಣ ಅಭಿವೃದಿಟಛಿ ಮಂಡಳಿ ಸ್ಥಾಪನೆಗೆ ಒಪ್ಪಿಗೆ ಹಾಸನ ಕೆಎಸ್‌ಆರ್‌ಟಿಸಿ ತರಬೇತಿ ಕೇಂದ್ರ 42 ಕೋಟಿ ವೆಚ್ಚದಲ್ಲಿ ಪ್ರಾದೇಶಿಕ ತರಬೇತಿ ಕೇಂದ್ರ ಮೇಲ್ದರ್ಜೆಗೇರಿಸುವುದು
ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದಲ್ಲಿ 27 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು, 97 ಕೋಟಿ ವೆಚ್ಚದಲ್ಲಿ ಒಳ ಚರಂಡಿ ಯೋಜನೆಗೆ ಒಪ್ಪಿಗೆ
ಮೈಸೂರು ನಗರ ಹಾಗೂ 92 ಗ್ರಾಮಗಳಿಗೆ ಕಾವೇರಿ ನದಿಯಿಂದ 340 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ತೀರ್ಮಾನ
ಸರ್ಕಾರಿ ನೌಕರರು ನೇಮಕಗೊಂಡ 3 ವರ್ಷದ ಒಳಗೆ ಕಡ್ಡಾಯವಾಗಿ ವಯೋಮಿತಿ ಪ್ರಮಾಣ ಪತ್ರ ನೀಡಲು ಸೂಚಿಸಲು ನಿರ್ಧಾರ
ಅಕ್ರಮ ಗಣಿಗಾರಿಕೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅವಧಿಯನ್ನು 2 ವರ್ಷಕ್ಕೆ ವಿಸ್ತರಿಸಲು ನಿರ್ಧಾರ
ಚಾಮರಾಜನಗರದಲ್ಲಿ ಸರ್ಕಾರಿ ಕಾನೂನು ಮಹಾವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ
ಬಳ್ಳಾರಿಯ ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 65 ಕೋಟಿ ವೆಚ್ಚದಲ್ಲಿ ಮಹಿಳಾ ಹಾಗೂ ಪುರುಷರ ಹಾಸ್ಟೆಲ್ ನಿರ್ಮಾಣಕ್ಕೆ ಒಪ್ಪಿಗೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.