ಗಣಿಗಾರಿಕೆಯಿಂದ ಪರಿಸರಕ್ಕೆ ಆಗದಿರಲಿ ಧಕ್ಕೆ
Team Udayavani, Feb 15, 2019, 6:00 AM IST
ಕಲಬುರಗಿ: ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಗಣಿ ಗುತ್ತಿಗೆ ಪಡೆದವರು ಪರಿಸರ ಹಾಳು ಮಾಡದಂತೆ ಎಚ್ಚರಿಕೆ ವಹಿಸಿ ಗಣಿಗಾರಿಕೆಯಲ್ಲಿ ತೊಡಗಬೇಕಾದ ಅವಶ್ಯಕತೆಯಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಹೇಳಿದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಜಿಲ್ಲಾಧಿಕಾರಿ ಕಾರ್ಯಾಲಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಗಣಿ ಗುತ್ತಿಗೆ ಪಡೆದವರಿಗೆ ಗಣಿ-ಭೂವಿಜ್ಞಾನ ಇಲಾಖೆ ಕಾಯ್ದೆ ಮತ್ತು ನಿಯಮ, ಗಣಿ ಸುರಕ್ಷತೆ ವಿಧಾನ, ಸ್ಫೋಟಕ ವಿಧಾನ ಮತ್ತು ಪರಿಸರ ಸಂರಕ್ಷಣೆ ಕುರಿತು ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆ ಸಮನಾಗಿ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಲಬುರಗಿ ವಿಭಾಗದಲ್ಲಿ ಹೆಚ್.ಕೆ.ಆರ್.ಡಿ.ಬಿ.ಯಿಂದ ಭೃಹತ್ ಕಾಮಗಾರಿಗಳನ್ನು ಹಮ್ಮಿಕೊಂಡಿದ್ದು, ಅವುಗಳಿಗೆ ಅವಶ್ಯಕವಿರುವ ಮರಳು, ಜೆಲ್ಲಿ, ಕಲ್ಲುಗಳಂತಹ ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ.
ಗಣಿ ಗುತ್ತಿಗೆ ಪಡೆದವರು ಗಣಿ ಮತ್ತು ಭೂ ವಿಜ್ಞಾನಗಳ ಅಧಿನಿಯಮ ಪರಿಪಾಲಿಸಬೇಕು. ಈ ಹಿಂದೆ ಪರಿಸರಕ್ಕೆ ಸಂಬಂಧಪಟ್ಟ ಕಾಳಜಿ ಕಡಿಮೆ ಇತ್ತು. ಇತ್ತೀಚೆಯ ಎರಡು ದಶಕಗಳಿಂದ ಪರಿಸರ ಜಾಗೃತಿ ಹೆಚ್ಚಾಗಿದ್ದು, ವಿವಿಧ ಸಂಸ್ಥೆಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿವೆ. ರಾಷ್ಟ್ರೀಯ ಹಸಿರು ಟ್ರಿಬುನಲ್ ಸಹಿತ ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುತ್ತಿದೆ ಎಂದರು.
ಜಿಲ್ಲೆಯಲ್ಲಿ 16 ಬೃಹತ್ ಮತ್ತು 180 ಸಣ್ಣ ಗಣಿ ಗುತ್ತಿಗೆಗೆ ಪರವಾನಗಿ ನೀಡಲಾಗಿದೆ. ಗಣಿ ಗುತ್ತಿಗೆ ಪಡೆದವರು ಗಣಿ ನಿಯಮ ಪಾಲಿಸದಿದ್ದಲ್ಲಿ ಗಣಿ ನಿಯಮಗಳ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ವಹಿಸಲಾಗುವುದು. ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸೂಕ್ತ ರೀತಿಯಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ನ್ಯಾಯಯುತವಾಗಿ ಮರಳು ಗಣಿಗಾರಿಕೆ ಮಾಡುವವರಿಗೆ ಯಾವುದೇ ತೊಂದರೆಯಿಲ್ಲ.
ಅಕ್ರಮ ಮರಳು ಸಾಗಾಣಿಕೆ ತಡೆಯಲು ಕಟ್ಟಿಸಂಗಾವಿ ಹತ್ತಿರ ಚೆಕ್‌ಪೋಸ್ಟ್ ನಿರ್ಮಿಸಲಾಗಿದ್ದು, ದೇವದುರ್ಗ, ಶಹಾಪುರ ಕಡೆಗಳಿಂದ ಜಿಲ್ಲೆಗೆ ಆಗಮಿಸುವ ಮರಳಿನ ಮೇಲೆ ನಿಗಾ ಇಡಲಾಗಿದೆ ಎಂದರು.
ಬಳ್ಳಾರಿ ವಲಯದ ಮೈನ್ಸ್ ಸೇಫ್ಟ ನಿರ್ದೇಶಕ ಮನೀಶ ಮುರುಕುಟೆ ಮಾತನಾಡಿ, ಗಣಿ ವ್ಯವಸ್ಥಾಪಕರು ಗಣಿಯಲ್ಲಿ ಸಣ್ಣ ಪ್ರಮಾಣದ ಸ್ಪೋಟಕ ಬಳಸಲು ಸಶಕ್ತರಾಗಿರುತ್ತಾರೆ. 33 ಮಿಲಿ ಮೀಟರ್ ವ್ಯಾಸ ಹಾಗೂ ಎರಡು ಮೀಟರ್‌ಗಿಂತ ಹೆಚ್ಚಿನ ಆಳದಲ್ಲಿ ಸ್ಪೋಟಕ ಬಳಸುವವರು ಡಿ.ಜಿ.ಎಂ. ಎಸ್.ದಿಂದ ವಿಶೇಷ ಪರವಾನಗಿ ಪಡೆಯಬೇಕು. ಪರವಾನಗಿ ಇಲ್ಲದೇ ಸ್ಪೋಟಕ ಬಳಸುವುದು ಗಂಭೀರ ಅಪರಾಧವಾಗಿದೆ ಎಂದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪಿ. ರೇಣುಕಾದೇವಿ, ಭೂ ವಿಜ್ಞಾನಿಗಳು, ಗಣಿ ಗುತ್ತಿಗೆ ಪಡೆದವರು ಹಾಜರಿದ್ದರು. ಪರವಾನಗಿ ಕಡ್ಡಾಯ ದೇಶದಲ್ಲಿ 89 ತರಹದ ಖನಿಜಗಳ ಗಣಿಗಾರಿಕೆ ನಡೆಯುತ್ತಿದೆ. ದೇಶದ ಒಟ್ಟು ದೇಶಿಯ ಉತ್ಪಾದನೆಯ ಶೇ. 2.5ರಷ್ಟು ಭಾಗ ಖನಿಜ ಗಣಿಗಾರಿಕೆಯದ್ದಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಬಳ್ಳಾರಿಯ ಡಿ.ಜಿ.ಎಂ.ಎಸ್. ಕಚೇರಿಯಿಂದ 13 ಲೈಮ್ ಸ್ಟೋನ್ ಹಾಗೂ ಎರಡು ಸ್ಟೋನ್ ಪಾಲಿಶ್ ಗಣಿಗಾರಿಕೆಗೆ ಪರವಾನಗಿ ನೀಡಲಾಗಿದೆ. ಪರವಾನಗಿ ಪಡೆದ ಗಣಿಗಳ ಮೇಲೆ ಡಿ.ಜಿ.ಎಂ.ಎಸ್. ಕಚೇರಿ ಕಾಲಕಾಲಕ್ಕೆ ತಪಾಸಣೆ ಕೈಗೊಂಡು ಪರಿಶೀಲಿಸುತ್ತದೆ. ಪರವಾನಗಿ ಪಡೆಯದ ಗಣಿಗಳ ಮೇಲೆ ರಾಜ್ಯ ಸರ್ಕಾರ ರಾಜ್ಯದ ಖನಿಜ ಕಳುವು ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುತ್ತದೆ. ಕಾರಣ ಗಣಿಗಾರಿಕೆಯಲ್ಲಿ ತೊಡಗಿರುವ ಎಲ್ಲರೂ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಮನೀಶ ಮುರುಕುಟೆ, ಬಳ್ಳಾರಿ ವಲಯದ ಮೈನ್ಸ್ ಸೇಫ್ಟಿ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.