ಮುಲ್ಲಾಮಾರಿ ನೀರು ಸೇಡಂಗ
Team Udayavani, Feb 15, 2019, 6:38 AM IST
ಚಿಂಚೋಳಿ: ತಾಲೂಕಿನ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿ ಬಿಡಲಾಗಿದ್ದ ನೀರು ಸೇಡಂ ಪಟ್ಟಣಕ್ಕೆ ಇನ್ನೆರಡು ದಿನಗಳಲ್ಲಿ ತಲುಪಲಿವೆ ಎಂದು ಯೋಜನೆ ಎಇಇ ವಿಕಾಸರಾವ್ ಕುಲಕರ್ಣಿ ತಿಳಿಸಿದ್ದಾರೆ.
ಚಿಂಚೋಳಿ ಮತ್ತು ಸೇಡಂ ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾದ ಹಿನ್ನಲೆಯಲ್ಲಿ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ ಆದೇಶದ ಮೇರೆಗೆ ನಾಗರಾಳ ಗ್ರಾಮದ ಬಳಿ ಇರುವ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಫೆ.7ರಂದು ಒಂದು ಗೇಟು ಮೇಲೆತ್ತಿ ಪ್ರತಿನಿತ್ಯ 275 ಕ್ಯೂಸೆಕ್ ನೀರು ಬಿಡಲಾಗಿದೆ.
ಹೀಗಾಗಿ ಕನಕಪುರ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಂದಾಪುರ, ಗರಗಪಳ್ಳಿ, ಸೇಡಂ ತಾಲೂಕಿನ ಲಾವಾಡಿ ಬ್ಯಾರೇಜ್‌ಗಳಲ್ಲಿ ಹೆಚ್ಚು ನೀರಿನ ಸಂಗ್ರಹವಾಗಿದೆ. ಇದರಿಂದ ಬೇಸಿಗೆ ದಿನಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಉಪಯೋಗ ಆಗಲಿದೆ. ಅಲ್ಲದೆ ಬಾವಿ, ಕೊಳವೆಬಾವಿಗಳಲ್ಲಿ ಅಂರ್ತಜಲ ಹೆಚ್ಚಳ ಅಗಲಿದೆ ಎಂದು ತಿಳಿಸಿದ್ದಾರೆ. ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚು ಇರುವುದರಿಂದ ಯಾವುದೇ ಸಮಸ್ಯೆ ಇಲ್ಲ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿಯೂ ನೀರು ಹರಿ ಬಿಡಬಹುದಾಗಿದೆ.
ಮುಲ್ಲಾಮಾರಿ ನದಿಗೆ ನೀರು ಹರಿದು ಬಿಟ್ಟಿದ್ದರಿಂದ ಬತ್ತಿದ್ದ ಪಂಚಲಿಂಗೇಶ್ವರ ಬುಗ್ಗಿಯಲ್ಲಿ ನೀರು ಹರಿಯುತ್ತಿದೆ. ನದಿ ದಂಡೆಯಲ್ಲಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.