“ಆವಂತಿಪೋರಾ ಸ್ಫೋಟಕ್ಕೆ ನಾವಿದ್ದ ಪ್ರದೇಶ ಕಂಪಿಸಿತ್ತು’​​​​​​​

Team Udayavani, Feb 16, 2019, 12:30 AM IST

1502slkp15.jpg

ಕೆಯ್ಯೂರು: ಗುರುವಾರ ಬಿಎಸ್‌ಎಫ್‌ ಯೋಧರು ಶ್ರೀನಗರದಿಂದ ಜಮ್ಮುವಿಗೆ ತೆರಳಬೇಕಿತ್ತು. ಆದರೆ ಹಿಮದ ಕಾರಣಕ್ಕೆ ಬಸ್‌ ಓಡಾಟ ಅಸಾಧ್ಯವಾಗಿ ಪ್ರಯಾಣ ಮೊಟಕುಗೊಂಡಿತ್ತು. ಸಿಆರ್‌ಪಿಎಫ್ ಯೋಧರಿದ್ದ ಬಸ್‌ಗಳು ಸಂಚರಿಸುತ್ತಿದ್ದ ರಸ್ತೆಯಲ್ಲೇ ಉಗ್ರರ ದಾಳಿ ನಡೆಯಿತು…

ಸಿಆರ್‌ಪಿಎಫ್‌ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ ಆವುಂತಿಪೋರಾದಿಂದ 40 ಕಿ.ಮೀ.ದೂರದಲ್ಲಿ ಕರ್ತವ್ಯ ನಿರತರಾಗಿರುವ ಬಿಎಸ್‌ಎಫ್‌ ಯೋಧ, ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಪಿದಪಟ್ಲ ನಿವಾಸಿ ಮಹೇಶ್‌ ಪಿ. “ಉದಯವಾಣಿ’ಯೊಂದಿಗೆ ಘಟನೆ ಬಗ್ಗೆ ವಿವರಿಸಿದ್ದು ಹೀಗೆ.

ನಾವಿರುವುದು ಶ್ರೀನಗರ ವ್ಯಾಪ್ತಿಯ ಪಂಥ್‌ಚೌಕಾದಲ್ಲಿ. ನ್ಪೋಟದ ತೀವ್ರತೆ ಎಷ್ಟಿತ್ತೆಂದರೆ ಭೂಮಿ ಕಂಪಿಸಿದ ಅನುಭವ ನಾವಿದ್ದಲ್ಲಿಯೂ ಆಗಿತ್ತು. ಏನಾಯಿತೋ ಎಂದು ಕೊಳ್ಳುವಷ್ಟರಲ್ಲಿ ದುರಂತ ನಡೆದಿರುವ ಸುದ್ದಿ ತಿಳಿಯಿತು ಎಂದರು ಮಹೇಶ್‌.

ಜಮ್ಮುವಿಗೆ ತೆರಳಲು ಅದು ಏಕೈಕ ಹೆದ್ದಾರಿ. ಎಲ್ಲರೂ ಅದೇ ರಸ್ತೆಯಲ್ಲಿಯೇ ಸಾಗಬೇಕು. ಉಗ್ರರ ದಾಳಿ ನಡೆದ ಸ್ಥಳಕ್ಕೆ ಬಿಎಸ್‌ಎಫ್‌ ಯೋಧರಾದ ನಾವು ಹೋಗಿಲ್ಲ. ಸಿಆರ್‌ಪಿಎಫ್‌ ಯೋಧರ ತಂಡ ಅಲ್ಲಿ ಕರ್ತವ್ಯದಲ್ಲಿದೆ. ಸುಧಾರಿತ ಸ್ಫೋಟಕವಾದ ಕಾರಣ ಎರಡೇ ಕೆ.ಜಿ. ಇದ್ದರೂ ಬಸ್‌ ಚಿಂದಿಯಾಗುತ್ತಿತ್ತು. ಆದರೆ ನೂರಾರು ಕೆಜಿ ಇದ್ದುದರಿಂದ ಊಹಿಸುವುದಕ್ಕೂ ಸಾಧ್ಯವಾಗದಷ್ಟು ಅನಾಹುತ ಸಂಭವಿಸಿದೆ ಎಂದಿದ್ದಾರೆ ಅವರು. 

ಘಟನೆ ನಡೆದ ಕೂಡಲೇ ಎಲ್ಲರಿಗೂ ಕಟ್ಟೆಚ್ಚರದಿಂದ ಇರುವಂತೆ ಸೂಚನೆ ನೀಡಲಾಯಿತು. ಇದು ಉಗ್ರರ ಪೂರ್ವನಿಯೋಜಿತ ಕೃತ್ಯ ಎಂಬ ಶಂಕೆ ವ್ಯಕ್ತವಾಗಿದೆ. ಕೃತ್ಯದಲ್ಲಿ ಸ್ಥಳೀಯರು ಸೇರಿರುವ ಸಂಶಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮಹೇಶ್‌ ಹೇಳಿದ್ದಾರೆ.

ಮಹೇಶ್‌ 2003ರಲ್ಲಿ ಬಿಎಸ್‌ಎಫ್‌ ಯೋಧರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದರು. ಅಸ್ಸಾಂ, ಗುಜರಾತ್‌, ರಾಜಸ್ಥಾನ, ಜಮ್ಮು ಕಾಶ್ಮೀರ ಮೊದಲಾದೆಡೆ ಸೇವೆ ಸಲ್ಲಿಸಿ ಈಗ ಶ್ರೀನಗರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಯ್ಯೂರಿನ ಪಿದಪಟ್ಲದ ಜಿನ್ನಪ್ಪ ಪೂಜಾರಿ ಮತ್ತು ಬೇಬಿ ಜೆ. ಪೂಜಾರಿ ಅವರ ಪುತ್ರ. ಪತ್ನಿ ಸುಜಾತಾ ಮತ್ತು ಇಬ್ಬರು ಮಕ್ಕಳಿದ್ದಾರೆ.

– ಗೋಪಾಲಕೃಷ್ಣ ಸಂತೋಷ್‌ನಗರ

ಟಾಪ್ ನ್ಯೂಸ್

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.