ಜೋಡಿ ಕೊಲೆ: ಇಬ್ಬರಿಗೆ ಪೊಲೀಸ್ ಕಸ್ಟಡಿ
Team Udayavani, Feb 16, 2019, 12:30 AM IST
ಕುಂದಾಪುರ: ಕೋಟ ಚಿಕ್ಕನಕೆರೆಯ ಜೋಡಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಕುಂದಾಪುರದ ಹೆಚ್ಚುವರಿ ಜೆಎಂ ಎಫ್‌ಸಿ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದ್ದು, ಈ ಪೈಕಿ ಇಬ್ಬರಿಗೆ ಪೊಲೀಸ್ ಕಸ್ಟಡಿ ಹಾಗೂ 14 ಮಂದಿಗೆ ಮಾ.1 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶ ಶ್ರೀಕಾಂತ ಎನ್. ಎ. ಆದೇಶಿಸಿದ್ದಾರೆ.
ಪ್ರಮುಖ ಆರೋಪಿಗಳಲ್ಲಿ ಒಬ್ಬ ನಾದ ಚಂದ್ರಶೇಖರ್ ರೆಡ್ಡಿ ಹಾಗೂ ಮತ್ತೂಬ್ಬ ಆರೋಪಿ ಸುಜಯ್‌ಎಂಬಾ ತ ನಿಗೆ ಫೆ.20ರ ವರೆಗೆ ಪೊಲೀಸ್ ಕಸ್ಟಡಿ ವಿಧಿಸಲಾಗಿದೆ. ಇತರ ಆರೋಪಿಗಳಾದ ಚಂದ್ರ ಶೇಖರ್ ರೆಡ್ಡಿ, ಹರೀಶ್ ರೆಡ್ಡಿ, ಮೆಡಿಕಲ್ ರವಿ, ಮಹೇಶ್ ಗಾಣಿಗ, ರವಿಚಂದ್ರ, ಜಿ.ಪಂ. ಬಿಜೆಪಿ ಸದಸ್ಯ ರಾಘವೇಂದ್ರ ಕಾಂಚನ್, ಅಭಿಷೇಕ (ಅಭಿ ಪಾಲನ್), ಹನೆಹಳ್ಳಿ ನಿವಾಸಿ ಸಂತೋಷ್ ಕುಂದರ್, ನಾಗರಾಜ ರೊಟ್ಟಿ, ಶಂಕರ್ ಮೊಗವೀರ, ರತೀಶ್ ಎಂ. ಕರ್ಕೇರ, ಭದ್ರಾವತಿಯ ನಿವಾಸಿ, ವಿದ್ಯಾರ್ಥಿ ಪ್ರಣವ್ ರಾವ್, ಪೊಲೀಸ್ ಸಿಬಂದಿಯಾದ ಪವನ್ ಅಮೀನ್ ಮತ್ತು ವೀರೇಂದ್ರ ಆಚಾರ್ಯ ಅವರಿಗೆ ಮಾ.1ರ ವೆರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.
ಶುಕ್ರವಾರ ಮಧ್ಯಾಹ್ನದ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾ ಗಿದ್ದು, ಈ ವೇಳೆ ನ್ಯಾಯಾಲಯದ ಹೊರಗೆ ಭಾರೀ ಜನ ಸೇರಿದ್ದರು.
ತನಿಖಾಧಿಕಾರಿ ಆಗಿರುವ ಉಡುಪಿ ಡಿವೈಎಸ್‌ಪಿ ಜೈಶಂಕರ್ ನೇತೃತ್ವದಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಇಬ್ಬರ ಜಾಮೀನು
ಅರ್ಜಿ ಶನಿವಾರ ವಿಚಾರಣೆ
ಈ ಪೈಕಿ ಪವನ್ ಅಮೀನ್, ವೀರೇಂದ್ರ ಆಚಾರ್ಯ ಹಾಗೂ ಪ್ರಣವ್ ರಾವ್‌ಗೆ ಜಾಮೀನು ನೀಡಬೇಕು ಎಂದು ಅವರ ವಕೀಲರಾದ ರವಿಕಿರಣ್ ಮುಡೇìಶ್ವರ ವಾದಿಸಿದ್ದು, ಇದಕ್ಕೆ ಸಹಾಯಕ ಸರಕಾರಿ ಅಭಿಯೋಜಕಿ ಸುಮಂಗಲಾ ನಾಯ್ಕ ಆಕ್ಷೇಪಣೆ ಸಲ್ಲಿಸಿದ್ದಾರೆ. ಇದರ ವಾದವನ್ನು ನ್ಯಾಯಾಧೀಶರು ಶನಿವಾರಕ್ಕೆ ಮುಂದೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.