ಭಗವಾನ್‌ ಆಹ್ವಾನಿಸಿದ್ದಕ್ಕೆ ವಿರೋಧ


Team Udayavani, Feb 16, 2019, 7:26 AM IST

sahiti.jpg

ರಾಮನಗರ: ಕೆಂಗಲ್‌ ಹನುಮಂತಯ್ಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ಉದ್ಘಾಟನೆ ಹಾಗೂ ರಾಜರ್ಷಿ ಕೆಂಗಲ್‌ ಭಾಷಣಗಳು ಗ್ರಂಥ ಬಿಡುಗಡೆ ಸಮಾರಂಭಕ್ಕೆ ಸಾಹಿತಿ ಪ್ರೊ.ಕೆ.ಎಸ್‌. ಭಗವಾನ್‌ ಅವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ಮತ್ತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪ್ರತಿಭಟಿಸಿದರು. 

ಇಲ್ಲಿನ ಬಿಜಿಎಸ್‌ ಅಂಧರ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ಬೆಳಗ್ಗೆ ಟ್ರಸ್ಟ್‌ ಹಾಗೂ ಕೆ.ಎಸ್‌.ಭಗವಾನ್‌ ಅವರು ರಚಿಸಿರುವ ಕೆಂಗಲ್‌ ಭಾಷಣಗಳು ಗ್ರಂಥ ಬಿಡುಗಡೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕೆ.ಎಸ್‌.ಭಗವಾನ್‌ ಅವರು ಗ್ರಂಥದ ಬಗ್ಗೆ ಮಾತನಾಡಲು ಆಹ್ವಾನಿಸಲಾಗಿತ್ತು. ಅವರ ಆಗಮನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.

ಸಮಾರಂಭ ಉದ್ಘಾಟಿಸಿದ ಜಿಪಂ ಅಧ್ಯಕ್ಷ ಎಂ.ಎನ್‌.ನಾಗರಾಜು ಭಾಷಣ ಮುಗಿಸಿದ ನಂತರ ಟ್ರಸ್ಟ್‌ ಅಧ್ಯಕ್ಷ ಪ್ರೊ.ಎಂ.ಶಿವನಂಜಯ್ಯ ಟ್ರಸ್ಟಿನ ಧ್ಯೇಯೊದ್ದೇಶಗಳ ಕುರಿತು ಮಾತು ಆರಂಭಿಸುತ್ತಿದ್ದಂತೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರೊಬ್ಬರು ಕೆ.ಎಸ್‌.ಭಗವಾನ್‌ರನ್ನು ಆಹ್ವಾನಿಸಿರುವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಮಠಗಳನ್ನು, ಹಿಂದೂ ದೇವರುಗಳನ್ನು ತೆಗಳುವ ಜಾಯಮಾನದ ಕೆ.ಎಸ್‌.ಭಗವಾನ್‌ ಆದಿ ಚುಂಚನಗರಿ ರಾಮನಗರ ಶಾಖಾ ಮಠದ ಆವರಣಕ್ಕೆ ಬರುವುದು ಬೇಡ ಎಂದು ಪಟ್ಟು ಹಿಡಿದ ಕಾರ್ಯಕರ್ತರು, ಕೆ.ಎಸ್‌.ಭಗವಾನ್‌ ವಿರುದ್ಧ ಧಿಕ್ಕಾರ ಕೂಗಿದರು. ಹಿಂದೂ ವಿರೋಧಿಯೊಬ್ಬರನ್ನು ಮಠದ ಆವರಣಕ್ಕೆ ಆಹ್ವಾನಿಸಿರುವ ಅಯೋಜಕರನ್ನು ತರಾಟೆಗೆ ತೆಗೆದುಕೊಂಡರು. 

ಮಠಮಾನ್ಯಗಳು ಹಿಂದೂ ಸಂಸ್ಕೃತಿಯ ಪ್ರತೀಕ. ಹಿಂದೂ ಧರ್ಮ ಮತ್ತು ಸಂಸ್ಕೃತಿಯ ವಿರೋಧಿ ಹಾಗೂ ಒಕ್ಕಲಿಗರನ್ನು ವಿರೋಧಿಸುವ ಪ್ರೊ.ಕೆ.ಎಸ್‌.ಭಗವಾನ್‌ ಅವರನ್ನು ಸಮಾರಂಭಕ್ಕೆ ಏಕೆ ಆಹ್ವಾನಿಸಿದ್ದೀರಿ. ಒಕ್ಕಲಿಗರ ಮಠದ ಆಶ್ರಯದಲ್ಲಿಯೇ ಏಕೆ ಕಾರ್ಯಕ್ರಮ ಆಯೋಜಿಸಿದ್ದೀರಿ? ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರು ಇಡಲು ಸಹ ಅವರು ವಿರೋಧ ವ್ಯಕ್ತಪಡಿಸಿದ್ದರು ಎಂದು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡರು.

ಭಗವಾನ್‌ ಅವರನ್ನು ಆಹ್ವಾನಿಸಿರುವುದಕ್ಕೆ ಸಾರ್ವಜನಿಕರ ಕ್ಷಮೆಯಾಚಿಸಿ ಎಂದು ಪಟ್ಟು ಹಿಡಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಮಾಜಿ ಶಾಸಕ ಕೆ.ರಾಜು ಮಾಡಿಕೊಂಡ ಮನವಿಗೂ ಪ್ರತಿಭಟನಾಕಾರರು ಮಣಿಯಲಿಲ್ಲ. ಇನ್ನೊಂದೆಡೆ ಟ್ರಸ್ಟ್‌ ಅಧ್ಯಕ್ಷ ಪ್ರೊ.ಎಂ.ಶಿವನಂಜಯ್ಯ ಅವರು ಕ್ಷಮೆಯಾಚನೆಗೆ ನಿರಾಕರಿಸಿದರು. ಭಗವಾನ್‌ ಅವರು ಕಾರ್ಯಕ್ರಮಕ್ಕೆ ಬರಲಿಲ್ಲ. ಹೀಗಾಗಿ ಕ್ಷಮೆಯಾಚಿಸುವುದು ಅಪ್ರಸ್ತುತ ಎಂದರು. 

ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಭಟನಾಕಾರು, ತಾವು ಕಾರ್ಯಕ್ರಮದ ವಿರೋಧಿಗಳಲ್ಲ. ಮಠಗಳು ಹಿಂದೂ ಧರ್ಮದ ಕಿರೀಟ ಇದ್ದಂತೆ. ಹಿಂದೂ ಧರ್ಮವನ್ನು ಅವಹೇಳನ ಮಾಡುವ ವ್ಯಕ್ತಿಗಳನ್ನು ಮಠದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಆಹ್ವಾನಿಸಬಾರದು ಎಂದು ಕ್ಷಮೆಯಾಚನೆಗೆ ಪಟ್ಟು ಹಿಡಿದರು. ಕೊನೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. 

ಕೆಂಗಲ್‌ ಹನುಮಂತಯ್ಯ ಉತ್ತಮ ಆಡಳಿತಗಾರ
ರಾಮನಗರ:
ಕೆಂಗಲ್‌ ಹನುಮಂತಯ್ಯ ಅವರು ದಕ್ಷತೆ, ಪ್ರಾಮಾಣಿಕತೆ ಮತ್ತು ಕಠಿಣ ನಿರ್ಧಾರಗಳನ್ನು ತೆಗದುಕೊಳ್ಳುತ್ತಿದ್ದ ಉತ್ತಮ ಆಡಳಿತಗಾರ ಎಂದು ಎಂಎಲ್‌ಸಿ ಸಿ.ಎಂ.ಲಿಂಗಪ್ಪ ಸ್ಮರಿಸಿದರು. ಬಿಜಿಎಸ್‌ ಅಂಧರ ಶಾಲೆಯ ಸಭಾಂಗಣದಲ್ಲಿ ದಿ. ಸಿಎಂ ಕೆಂಗಲ್‌ ಹನುಮಂತಯ್ಯ 111ನೇ ಜಯಂತಿ, ಕೆಂಗಲ್‌ ಹನುಮಂತಯ್ಯ ಸಾಮಾಜಿಕ ಹಾಗೂ ಸಾಂಸ್ಕತಿಕ ಟ್ರಸ್ಟ್ ಉದ್ಘಾಟನೆ ಮತ್ತು ರಾಜರ್ಷಿ ಕೆಂಗಲ್‌ ಭಾಷಣಗಳು ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ,

ಇಂದು ರಾಜ್ಯದ ಆಡಳಿತದ ಶಕ್ತಿ ಕೇಂದ್ರವಾಗಿರುವ ಬೆಂಗಳೂರಿನ ವಿಧಾನಸೌಧವನ್ನು ನಿರ್ಮಿಸಿ ಇಡೀ ವಿಶ್ವವೇ ಬೆಂಗಳೂರು ಕಡೆಗೆ ತಿರುಗಿ ನೋಡುವಂತೆ ಮಾಡಿದ್ದಾರೆ. ಆದರೆ, ತಾವೇ ಕಾರಣರಾದ ವಿಧಾನಸೌಧದಲ್ಲಿ ಒಂದು ದಿನವೂ ಆಡಳಿತ ನಡೆಸಲು ಅವರಿಗೆ ಆಗಲಿಲ್ಲ ಎಂದು ವಿಷಾದಿಸಿದರು.

ಸಚಿವ ಸ್ಥಾನಕ್ಕೆ ರಾಜೀನಾಮೆ: ಕೆಂಗಲರು ಕೇಂದ್ರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ರೈಲು ಅಪಘಾತ ಉಂಟಾಯಿತು. ಅದರ ಹೊಣೆ ಹೊತ್ತು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂತಹ ರಾಜಕರಣಗಳು ಅಪರೂಪ ಎಂದರು. 

ಕೆಂಗಲ್‌ ಆದರ್ಶ ರಾಜಕಾರಣಿ: ಮಾಜಿ ಶಾಸಕ ಕೆ. ರಾಜು ಮಾತನಾಡಿ, ಅನ್ಯಾಯ, ಅಕ್ರಮ ಮಾಡುವವರು ಅಧಿಕಾರ ಹಿಡಿದಿರುವ ಈ ದಿನಗಳಲ್ಲಿ ಕೆಂಗಲ್‌ ಹನುಮಂತಯ್ಯರಂತಹ ರಾಜಕಾರಣಿಗಳು ನಮಗೆ ಆದರ್ಶವಾಗಬೇಕಿದೆ ಎಂದರು.

ಲೇಖಕರನ್ನು ಕರೆಯುವುದು ವಾಡಿಕೆ: ಟ್ರಸ್ಟ್‌ ಅಧ್ಯಕ್ಷ ಪ್ರೊ.ಎಂ.ಶಿವನಂಜಯ್ಯ ಮಾತನಾಡಿ, ಕೆಂಗಲ್‌ ಹನುಮಂತಯ್ಯ ಅವರ ಇಂಗ್ಲಿಷ್‌ ಭಾಷಣಗಳನ್ನು ಕೆ.ಎಸ್‌.ಭಗವಾನ್‌ ಅವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಇದು ಕೆಂಗಲ್‌ ಅವರ ಸ್ಮರಣೆಯ ಕಾರ್ಯಕ್ರಮ. ಮೇಲಾಗಿ ಕೃತಿ ಬಿಡುಗಡೆಯಾಗುತ್ತಿದ್ದು, ಅದರ ಲೇಖಕರನ್ನು ಸಭೆಗೆ ಕರೆಯುವುದು ವಾಡಿಕೆ. ಸುಖಾಸುಮ್ಮನೆ ಹಿಂದೂ ಪರ ಸಂಘಟನೆಗಳು ಗದ್ದಲವೆಬ್ಬಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. 

ಈ ಸಂದರ್ಭ ರಾಜರ್ಷಿ ಕೆಂಗಲ್‌ ನೆನಪುಗಳು ಕೃತಿಯನ್ನು ಬಿಡುಗಡೆ ಮಾಡಲಾಯಿತು. ಜಿಪಂ ಅಧ್ಯಕ್ಷ ಎಂ.ಎನ್‌ ನಾಗರಾಜು ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಪಂ ಅಧ್ಯಕ್ಷ ಗಾಣಕಲ್‌ ನಟರಾಜು. ನಗರಸಭೆ ಅಧ್ಯಕ್ಷೆ ರತ್ನಮ್ಮ ಪಾಪಣ್ಣ, ಸಾಹಿತಿ ಸು.ಚಿ. ಗಂಗಾಧರ, ಟ್ರಸ್ಟ್‌ ಕಾರ್ಯದರ್ಶಿ ಚೂಡಲಿಂಗೇಶ್ವರಯ್ಯ, ಸಹ ಕಾರ್ಯದರ್ಶಿ ಎಂ. ರೇವಣ್ಣ, ಉಪಾಧ್ಯಕ್ಷ ಚೂಡಯ್ಯ, ಖಜಾಂಚಿ ಎಂ.ಟಿ.ಶ್ರೀನಿವಾಸಯ್ಯ, ಪ್ರಕಾಶಕ ಎಚ್‌.ಎಂ. ಬೋರಯ್ಯ ಹಾಜರಿದ್ದರು.

ಟಾಪ್ ನ್ಯೂಸ್

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

5-gokarna

Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.