‘ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ  ಮಟ್ಟದ ಈಜುಕೊಳ ನಿರ್ಮಾಣ’

Team Udayavani, Feb 17, 2019, 5:23 AM IST

17-february-3.jpg

ಮಹಾನಗರ : ಮಂಗಳೂರು ನಗರದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಮಟ್ಟದ ನೂತನ ಈಜುಕೊಳ ನಿರ್ಮಾಣ ಮಾಡಲು ಚಿಂತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಹೇಳಿದರು. ಲೇಡಿಹಿಲ್‌ನಲ್ಲಿರುವ ಮಂಗಳಾ ಈಜುಕೊಳದ ಆಧುನಿಕ ನೀರು ಶುದ್ಧೀಕರಣ ಸ್ಥಾವರ ಹಾಗೂ ನವೀಕೃತ ಈಜುಕೊಳವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ನೂತನ ಈಜುಕೊಳ ನಿರ್ಮಾಣಕ್ಕೆ ಮಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ಥಳ ಗುರುತಿಸಲಾಗುವುದು. ಅಲ್ಲದೆ, ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯನ್ನು ಏರ್ಪಡಿಸಲಾಗುವುದು ಎಂದರು.

ಮಂಗಳಾ ಈಜುಕೊಳ ಈಗ ಹೈಟೆಕ್‌ ಆಗಿದ್ದು, ನೂತನ ತಂತ್ರಜ್ಞಾನ ವ್ಯವಸ್ಥೆಯನ್ನು ಹೊಂದಿದೆ. ವಿದ್ಯಾರ್ಥಿಗಳು ಅತ್ಯಾಧುನಿಕ ಸೌಲಭ್ಯಗಳನ್ನು ಪಡೆದು ಈಜು ಕಲಿತು, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು. ನಾನು ಕೂಡ ಈಜು ಪಟು. ನನ್ನ ಶಾಲಾ ದಿನಗಳಲ್ಲಿ ಮಂಗಳಾ ಈಜುಕೋಳದಲ್ಲಿ ಈಜು ಕಲಿತಿದ್ದೆ ಎಂದರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯ ದರ್ಶಿ ಐವನ್‌ ಡಿ’ಸೋಜಾ ಮಾತನಾಡಿ, ಮಂಗಳಾ ಈಜುಕೊಳವು ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡಿದೆ. ಮಂಗಳಾ ಈಜು ಕೊಳವು ರಾಜ್ಯದಲ್ಲಿಯೇ ಅತ್ಯಾಧುನಿಕ ಸೌಲಭ್ಯ ಹೊಂದಿರುವುದು ಹೆಮ್ಮೆಯ ಸಂಗತಿ ಎಂದು ವಿವರಿಸಿದರು.
ನೂತನ ತಂತ್ರಜ್ಞಾನ
ನೂತನ ತಂತ್ರಜ್ಞಾನದ ಮೂಲಕ ಮಂಗಳಾ ಈಜುಕೊಳದಲ್ಲಿ ನೀರನ್ನು ಓಝೋನ್‌ ಘಟಕದಲ್ಲಿ ಸಂಸ್ಕರಿಸುವ ನೂತನ ತಂತ್ರಜ್ಞಾನ ಪರಿಚಯಿಸಲಾಗಿದೆ. ಈ ನೂತನ ಘಟಕದಲ್ಲಿ ಸ್ವಯಂ ಚಾಲಿತ ನೀರು ಶುದ್ಧೀಕರಣವಾಗಲಿದೆ. ನಾಲ್ಕು ಪಂಪ್‌ ಮತ್ತು ನಾಲ್ಕು ಡ್ರಮ್‌ ಅಳವಡಿಸಿ ನೀರು ಶುದ್ಧೀಕರಣ ನಡೆಸಲಾಗುವುದು. ಶುದ್ಧೀಕರಣಗೊಂಡ ನೀರು ಪುನಃ ಬರಲು ಈಜುಕೊಳದ ಒಳಗೆ ಎರಡೂ ಬದಿಗಳಲ್ಲಿ ಪೈಪ್‌ ಅಳವಡಿಸಲಾಗಿದೆ. ನೂತನ ತಂತ್ರಜ್ಞಾನದಿಂದ ಶುದ್ಧೀಕರಣವಾದ ನೀರು ಪ್ರಬಲ ರೋಗ ನಿರೋಧಕ ಶಕ್ತಿ ಹೊಂದಿರಲಿದೆ. 
ವೇದಿಕೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್‌, ಪಾಲಿಕೆ ಮೇಯರ್‌ ಭಾಸ್ಕರ್‌ ಕೆ., ಉಪ ಮಹಾಪೌರ ಕೆ. ಮಹಮ್ಮದ್‌, ಪಾಲಿಕೆ ಆಯುಕ್ತ ಮೊಹಮ್ಮದ್‌ ನಜೀರ್‌, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯೀ ಸಮಿತಿ ಅಧ್ಯಕ್ಷ ಟಿ. ಪ್ರವೀಣ್‌ಚಂದ್ರ ಆಳ್ವ, ತೆರಿಗೆ ನಿರ್ವಹಣೆ ಹಣಕಾಸು ಮತ್ತು ಅಪೀಲು ಸ್ಥಾಯೀ ಸಮಿತಿ ಅಧ್ಯಕ್ಷ ರಾಧಕೃಷ್ಣ ಕೆ., ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ಸ್ಥಾಯೀ ಸಮಿತಿ ಅಧ್ಯಕ್ಷ ನವೀನ್‌ ಆರ್‌. ಡಿ’ಸೋಜಾ, ಲೆಕ್ಕಪತ್ರ ಸ್ಥಾಯೀ ಸಮಿತಿ ಅಧ್ಯಕ್ಷೆ ಲತಾ ಸಾಲ್ಯಾನ್‌, ಪಾಲಿಕೆ ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ, ಪ್ರತಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯೆ ಜಯಂತಿ ಆಚಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.