ಹುತಾತ್ಮ ಯೋಧನಿಗೆ ಗೌರವಪೂರ್ವಕ ವಿದಾಯ

Team Udayavani, Feb 17, 2019, 6:23 AM IST

yodhan.jpg

ಬೆಂಗಳೂರು: “ವೀರಯೋಧ ಗುರು ಅಮರ್‌ ರಹೇ… ಅಮರ್‌ ರಹೇ… ಹುತಾತ್ಮ ಯೋಧ ಗುರುಗೆ ಜಿಂದಾಬಾದ್‌.’ ಎಚ್‌ಎಎಲ್‌ ವಿಮಾನ ನಿಲ್ದಾಣ ರಸ್ತೆಯಲ್ಲಿ ಕಟ್ಟಡಗಳ ಮೇಲೆ ನಿಂತವರು ವಾಹನ ಸವಾರರು ಶನಿವಾರ ಒಕ್ಕೊರಲಿನಿಂದ ಮೊಳಗಿಸಿದ ಘೋಷಣೆಗಳಿವು.

ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧ ಗುರು ಪಾರ್ಥೀವ ಶರೀರವನ್ನು ಶನಿವಾರ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತರಲಾಯಿತು. ಬಳಿಕ ರಸ್ತೆ ಮಾರ್ಗವಾಗಿ ಹುಟ್ಟೂರಿಗೆ ಕೊಂಡೊಯ್ಯುವಾಗ ರಾಜಧಾನಿಯಲ್ಲಿ ಗೌರವಪೂರ್ವಕ ವಿದಾಯ ದೊರೆಯಿತು.

ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ಸೇನಾ ವಾಹನದಲ್ಲಿ ಹುತಾತ್ಮ ಯೋಧ ಗುರು ಅವರ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ಕೊಂಡೊಯ್ಯುವ ವೇಳೆ ಸಾರ್ವಜನಿಕರು ಅಂತಿಮ ದರ್ಶನ ಪಡೆದರು. ಪಾರ್ಥೀವ ಶರೀರ ಹೊತ್ತ ಸೇನಾ ವಾಹನ ತೆರಳುತ್ತಿದ್ದಾಗ ರಸ್ತೆಗಳ ಇಕ್ಕೆಲಗಳಲ್ಲಿ ನಿಂತಿದ್ದ ಸಾವಿರಾರು ಮಂದಿ, ಸೆಲ್ಯೂಟ್‌ ಹೊಡೆದು, ಕೈ ಮುಗಿದು, ಘೋಷಣೆ ಕೂಗುವ ಮೂಲಕ ಗೌರವ ಸೂಚಿಸಿದರು.

ಅಪಾರ್ಟ್‌ಮೆಂಟ್‌ಗಳು, ಕಂಪನಿ ಕಟ್ಟಡಗಳ ಮೇಲೆ ನಿಂತ ಸಾವಿರಾರು ಮಂದಿ ದೂರದಿಂದಲೇ ಸೆಲ್ಯೂಟ್‌ ಮೂಲಕ ಗೌರವ ಸೂಚಿಸುತ್ತಿದ್ದರು. ಮಾರ್ಗದ ಉದ್ದಕ್ಕೂ ಒಕ್ಕೊರಲ ಮೂಲಕ ಯೋಧ ಗುರು ಅಮರ್‌ರಹೇ ಎಂದು ಘೋಷಣೆ ಮೊಳಗಿಸಿದರು. ಗೌರವ ಸಲ್ಲಿಸುವಾಗ ಪ್ರತಿಯೊಬ್ಬರ ಕಣ್ಣಾಲಿಗಳು ತೇವಗೊಂಡಿದ್ದವು.

ಸೇನಾ ವಾಹನ ಸಾಗಿದಂತೆಲ್ಲ ಹಲವರು ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಹುತಾತ್ಮ ಯೋಧನಿಗೆ ಗೌರವಪೂರ್ವಕವಾಗಿ ವಿದಾಯ ಹೇಳಿದರು. ಟೌನ್‌ಹಾಲ್‌ ಮುಂಭಾಗ ಸೇನಾ ವಾಹನ ಬಂದಾಗ ಬಿಬಿಎಂಪಿ ಮೇಯರ್‌ ಗಂಗಾಂಬಿಕೆ, ಪಾಲಿಕೆ ಅಧಿಕಾರಿಗಳು, ನೂರಾರು ಮಂದಿ ಗೌರವಸೂಚಿಸಿದರು. ಕೆಲ ಕ್ಷಣ ನಿಲ್ಲಿಸಿದ ಸೇನಾವಾಹನ ಸಾರ್ವಜನಿಕರ ಗೌರವ ಸ್ವೀಕರಿಸಿ ತೆರಳಿತು.

ಎಚ್‌ಎಎಲ್‌ ವಿಮಾನ ನಿಲ್ದಾಣ ರಸ್ತೆಯಿಂದ ಹೊರಟ ಸೇನಾವಾಹನ ಎಂಜಿ ರಸ್ತೆ, ಟೌನ್‌ಹಾಲ್‌ ಮೂಲಕ ಸಾಗಿ ಮೈಸೂರು ರಸ್ತೆ ಮಾರ್ಗವಾಗಿ ಮಂಡ್ಯದ ಕಡೆ ಸಾಗಿತು. ಮಾರ್ಗದ ಉದ್ದಕ್ಕೂ ಅಪಾರ ಸಂಖ್ಯೆಯ ಜನರು ಯೋಧಗುರುವಿನ ಪಾರ್ಥೀವ ಶರೀರಕ್ಕೆ ದೂರದಿಂದಲೇ ನಮಿಸಿ ಗೌರವ ಸೂಚಿಸಿದರು. ಮಂಡ್ಯ ತಲುಪುವ ತನಕ ವೀರಯೋಧನಿಗೆ  ಗೌರವ ವಂದನೆ ದೊರೆಯಿತು.

ಮೃತ ಯೋಧನ ಪಾರ್ಥಿವ ಶರೀರ ಬೆಂಗಳೂರಿನಿಂದ ಹುಟ್ಟೂರಿಗೆ ರವಾನೆ ಮಾಡಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಸೇನಾ ಹೆಲಿಕಾಪ್ಟರ್‌ಗಾಗಿ ರಕ್ಷಣಾ ಇಲಾಖೆಗೆ ಮನವಿ ಮಾಡಿದ್ದರು. ಆದರೆ, ಲಭ್ಯತೆ ಇಲ್ಲದ ಕಾರಣ ಸಿಗಲಿಲ್ಲ ಎಂದು ಹೇಳಲಾಗಿದೆ.

ಗಣ್ಯರಿಂದ ಅಂತಿಮ ಗೌರವ: ಶನಿವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ಸೇನಾ ವಿಮಾನದ ಮೂಲಕ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಹುತಾತ್ಮ ಯೋಧ ಗುರು ಪಾರ್ಥೀವ ಶರೀರವನ್ನು ತರಲಾಯಿತು.

ಎಚ್‌ಎಎಲ್‌ನಲ್ಲಿ ಸಿಎಂ ಕುಮಾರಸ್ವಾಮಿ, ಗೃಹ ಸಚಿವ ಎಂ.ಬಿ.ಪಾಟೀಲ್‌, ಸಂಸದರಾದ ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌, ಪಿ.ಸಿ.ಮೋಹನ್‌, ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಸೇರಿದಂತೆ ಹಲವು ಗಣ್ಯರು ಹುತಾತ್ಮ ಯೋಧ ಗುರುಗೆ ಅಂತಿಮ ನಮನ ಸಲ್ಲಿಸಿದರು. ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌. ರಾಜು, ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌, ಸೇನಾ ಅಧಿಕಾರಿಗಳು ಗೌರವ ವಂದನೆ ಸಲ್ಲಿಸಿದರು.

ಟಾಪ್ ನ್ಯೂಸ್

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.