ವೀರಪುತ್ರನಿಗೆ ಮಿಡಿದ ಕಂಬನಿ
Team Udayavani, Feb 17, 2019, 7:34 AM IST
ಜಿಲ್ಲೆಯ ಯೋಧ ಎಚ್.ಗುರು ವೀರಮರಣಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ರಾಜ್ಯದ ಜನತೆ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳು ಸೇರಿದಂತೆ ಗಣ್ಯರು ಗುರು ಪರಿವಾರಕ್ಕೆ ಸಾಂತ್ವನ ಹೇಳಿದ್ದು, ಯೋಧನ ಅಂತ್ಯಕ್ರಿಯೆಯನ್ನು ಸಕಲ ಗೌರವಗಳೊಂದಿಗೆ ಸಲ್ಲಿಸಿದ್ದಾರೆ. ಹಾಗೆಯೆ ಪಾಕಿಸ್ತಾನದ ಕ್ರೌರ್ಯವನ್ನು ಹಿಮ್ಮೆಟ್ಟಿಸಲು ಇಡೀ ದೇಶವೇ ಒಂದಾಗಿ ತಕ್ಕ ಉತ್ತರ ನೀಡಲು ಒತ್ತಾಯಸಿದ್ದಾರೆ.
ಮದ್ದೂರು: ಉಗ್ರರ ದಾಳಿಯಿಂದ ಬಲಿಯಾದ ವೀರಯೋಧ ಎಚ್. ಗುರು ಅವರಿಗೆ ತಾಲೂಕಿನಾದ್ಯಂತ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಬಲಿಯಾದ ವೀರಯೋಧ ಎಚ್. ಗುರು ಸೇರಿದಂತೆ 44 ಮಂದಿ ಯೋಧರಿಗೆ ತಾಲೂಕಿನ ವಿವಿಧ ಸಂಘಟನೆಗಳು ಮೇಣದ ದೀಪ ಹಿಡಿದು ಮೆರವಣಿಗೆ ನಡೆಸುವ ಮೂಲಕ ಯೋಧನ ಆತ್ಮಕ್ಕೆ ಶಾಂತಿ ಕೋರಿದರು.
ತಾಲೂಕಿನ ಕೆಸ್ತೂರು, ಕೆ. ಹೊನ್ನಲಗೆರೆ, ಕೊಪ್ಪ, ಬೆಸಗರಹಳ್ಳಿ ಸೇರಿದಂತೆ ಪಟ್ಟಣದ ವಿವಿಧೆಡೆ ಯೋಧ ಎಚ್. ಗುರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ತಾಲೂಕಿನ ಕೊಪ್ಪ ಸಂತೆ ಮೈದಾನದಲ್ಲಿ ಜಯಕರ್ನಾಟಕ ಸಂಘಟನೆ ವತಿಯಿಂದ ಯೋಧ ಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎರಡು ನಿಮಿಷಗಳ ಕಾಲ ಮೌನಾಚರಣೆ ಕೈಗೊಳ್ಳಲಾಯಿತು.
ಬಳಿಕ ಮಾತನಾಡಿದ ಜಯಕರ್ನಾಟಕ ಸಂಘಟನೆ ಪ್ರಧಾನ ಕಾರ್ಯದರ್ಶಿ ಮಹಮದ್ ಇಲಿಯಾಜ್ ದೇಶದ ರಕ್ಷಣೆಯಲ್ಲಿ ಮುಂದಾಗಿರುವ ಯೋಧರಿಗೆ ರಕ್ಷಣೆ ಇಲ್ಲದಂತಾಗಿರುವುದು ದುರಾದೃಷ್ಟಕರ ಸಂಗತಿಯಾಗಿದ್ದು ಮುಂದಿನ ದಿನಗಳಲ್ಲಾದರೂ ಯೋಧರ ರಕ್ಷಣೆಗೆ ಸೂಕ್ತ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದರು.
ಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಸಂಘದ ಕಚೇರಿಯಲ್ಲಿ ಯೋಧರ ಭಾವಚಿತ್ರಕ್ಕೆ ಪುಷ್ಪನ ನಮನ ಸಲ್ಲಿಸಿ ನಂತರ ಮೇಣದ ದೀಪ ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಈ ವೇಳೆ ರೈತ ಸಂಘ ಜಿಲ್ಲಾಧ್ಯಕ್ಷ ಶಂಕರೇಗೌಡ, ಮುಖಂಡರಾದ ನ.ಲಿ.ಕೃಷ್ಣ, ರಾಜೇಶ್, ಮಹಲಿಂಗು, ಮೂರ್ತಿ, ನಾಗರಾಜು, ಗುಂಡಣ್ಣ, ಬಸವರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.