ಆರೋಗ್ಯ ಕಾಳಜಿ ವಹಿಸುವುದು ಅಗತ್ಯ
Team Udayavani, Feb 17, 2019, 7:34 AM IST
ಹಾಸನ: ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬೃಹತ್ ಆರೋಗ್ಯ ಮೇಳದಲ್ಲಿ 25 ಸಾವಿರಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆಗೊಳಗಾಗಿ ಉಚಿತ ಔಷಧ ಹಾಗೂ ವೈದ್ಯಕೀಯ ನೆರವು ಪಡೆದುಕೊಂಡರು. ಆರೋಗ್ಯ ತಪಾಸಣೆಗೊಳಗಾದವರಿಗೆ ಉಚಿತವಾಗಿ 4 ಕೋಟಿ ರೂ. ಔಷಧ ವಿತರಿಸಲಾಯಿತು.
ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಎಚ್.ಡಿ. ರೇವಣ್ಣ ಅವರ ಆಶಯದಂತೆ ಹಮ್ಮಿಕೊಂಡಿದ್ದ ಆರೋಗ್ಯ ಮೇಳದಲ್ಲಿ ಜಿಲ್ಲೆಯ ವಿವಿಧ ಆಸ್ಪತ್ರೆಗಳ ವೈದ್ಯರ ಜೊತೆಗೆ ಬೆಂಗಳೂರು ಮತ್ತು ಮೈಸೂರಿನ ವಿವಿಧ ವೈದ್ಯಕೀಯ ಸಂಸ್ಥೆಗಳ 600 ತಜ್ಞ ವೈದ್ಯರು, ವೈದ್ಯರು, 2 ಸಾವಿರ ಪ್ಯಾರಾಮೆಡಿಕಲ್ ಸಿಬ್ಬಂದಿ ಪಾಲ್ಗೊಂಡು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು.
ಜಿಲ್ಲಾ ಹಾಕಿ ಕ್ರೀಡಾಂಗಣ, ವಾಲಿಬಾಲ್ ಕ್ರೀಡಾಂಗಣ ಮತ್ತು ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ರೋಗಳ ತಪಾಸಣೆಗೆ ಪ್ರತ್ಯೇಕ ಮಳಿಗೆಗಳನ್ನು ತೆರೆಯಲಾಗಿತ್ತು 12ಕ್ಕೂ ಹೆಚ್ಚು ಮಳಿಗೆಗಳಲ್ಲಿ ವೈದ್ಯರು ತಪಾಸಣೆ ನಡೆಸಿ ಬರೆದುಕೊಟ್ಟ ಚೀಟಿಗೆ ಸರ್ಕಾರಿ ಕಾನೂಕು ಕಾಲೇಜು ಪಕ್ಕದ ಮೈದಾನದಲ್ಲಿ ಔಷಧ ವಿತರಣೆ ಮಾಡಲಾಯಿತು. ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಹಾಜರಿದ್ದು ಔಷಧ ವಿತರಣೆಗೆ ಫಾರ್ಮಾಸಿಸ್ಟ್‌ಗಳಿಗೆ ಸಹಕರಿಸಿದರು.
ಆರೋಗ್ಯ ಮೇಳ ಉದ್ಘಾಟನೆ: ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಆರೋಗ್ಯ ಮೇಳವನ್ನು ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಹಾಸನ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ. ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಂಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ, ಉಪಕಾರ್ಯದರ್ಶಿ ನಾಗರಾಜ್ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರಿನ ನಿಮಾನ್ಸ್, ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಗ್ರಂಥಿ ಆಸ್ಪತ್ರೆ, ಸ್ಪರ್ಶ ಆಸ್ಪತ್ರೆ, ಬೆಂಗಳೂರು ದಂತ ಚಿಕಿತ್ಸಾಲಯ, ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಹಾಸನ ನಗರದ ಹಲವು ಖಾಸಗಿ ಆಸ್ಪತ್ರೆಗಳ ವೈದ್ಯರು ಆರೋಗ್ಯ ಮೇಳದಲ್ಲಿ ಪಾಲ್ಗೊಂಡು ವೈದ್ಯಕೀಯ ಸೇವೆ ಒದಗಿಸಿದರು. ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣೆಗಾಗಿ ವಿಶೇಷ ಸಾಧನಗಳನ್ನು ಅಳವಡಿಸಿದ್ದ ಬಸ್ ಕೂಡ ಆರೋಗ್ಯ ಮೇಳಕ್ಕೆ ಆಗಮಿಸಿತ್ತು.
20 ಸಾವಿರಕ್ಕೂ ಅಧಿಕ ಮಂದಿ ಅಧಿಕೃತ ನೋಂದಣಿ ಮಾಡಿಸಿ ಆರೋಗ್ಯ ತಪಾಸಣೆಗೆ ಒಳಪಟ್ಟರು. ಸಾವಿರಾರು ಮಂದಿ ಸಾಮಾನ್ಯ ತಪಾಸಣೆಗೆ ಒಳಪಟ್ಟರು. 2 ಸಾವಿರ ಮಂದಿಗೆ ಇಸಿಜಿ, 500 ಮಂದಿಗೆ ಹೃದ್ರೋಗ ತಪಾಸಣೆ, 550 ಮಂದಿಗೆ ಟಿಎಂಟಿ ತಪಾಸಣೆ 8ಸಾವಿರ ಮಂದಿಗೆ ಮಧುಮೇಹ ತಪಾಸಣೆ ಮಾಡಲಾಗಿದೆ. ಶಂಕಿತ 50 ಪ್ರಕರಣಗಳಲ್ಲಿ ಕ್ಯಾನ್ಸರ್ ಸ್ಕ್ರೀನಿಂಗ್ ನಡೆಸಲಾಗಿದೆ.
1,350 ಮಂದಿ ಆಯುಷ್ ಚಿಕಿತ್ಸೆ ಹಾಗೂ 4ಸಾವಿರ ಮಂದಿ ದಂತ ತಪಾಸಣೆ ಹಾಗೂ ಚಿಕಿತ್ಸೆ ಪಡೆದಿದ್ದಾರೆ. ಸರ್ಕಾರಿ ದಾಸ್ತಾನು ಜೊತೆಗೆ ಖಾಸಗಿ ಔಷಧ ಸರಬರಾಜುದಾರರ ಮೂಲಕ ಕೊಡುಗೆ ರೂಪದಲ್ಲಿ ಸುಮಾರು 3 ಕೋಟಿ ರೂ. ವೆಚ್ಚದ ಔಷಧ ಪೂರೈಕೆಯಾಗಿದ್ದು, ವೈದ್ಯರ ತಪಾಸಣೆ ಚೀಟಿಯಾನುಸಾರ ಅವುಗಳನ್ನು ಸಾರ್ವಜನಿಕರಿಗೆ ತರಿಸಲಾಯಿತು.
ವಾರ್ತಾ ಇಲಾಖೆ ಮಳಿಗೆ: ಆರೋಗ್ಯ ಮೇಳದ ಮಳಿಗೆಗಳ ಜೊತೆಯಲ್ಲಿಯೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಿರ್ಮಿಸಿದ್ದ ರಾಜ್ಯ ಸರ್ಕಾರದ ಯೋಜನೆಗಳ ಹಾಗೂ ಸಾಧನೆಗಳನ್ನು ಬಿಂಬಿಸುವ ಮಾಹಿತಿ ಮಳಿಗೆಯಲ್ಲಿ ಸಾರ್ವಜನಿಕರಿಗೆ ಕಿರುಪುಸ್ತಿಕೆ ಹಾಗೂ ಕರಪತ್ರಗಳನ್ನು ವಿತರಿಸಲಾಯಿತು.
ಸಚಿವ ರೇವಣ್ಣ ಕೃತಜ್ಞತೆ: ಆರೋಗ್ಯ ತಪಾಸಣಾ ಶಿಬಿರದ ಮುಕ್ತಾಯದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಅವರು ಯಶಸ್ಸಿಗೆ ಸಹಕರಿಸಿದ ಮತ್ತು ಶ್ರಮಿಸಿದ ಎಲ್ಲಾ ವೈದ್ಯಾಧಿಕಾರಿಗಳಿಗೂ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಹಾಗೂ ಔಷಧ ಪೂರೈಸಿದ ಸಂಸ್ಥೆಗಳ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Arseekere: ಈಡೇರದ ಹೈಟೆಕ್ ಬಸ್ ನಿಲ್ದಾಣದ ಕನಸು
Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ
Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.