ಉಗ್ರರಿಗೆ ಕಂಡಲ್ಲಿ ಗುಂಡಿಕ್ಕಿ
Team Udayavani, Feb 17, 2019, 7:57 AM IST
ಶಹಾಬಾದ: ದೇಶ ವಿರೋಧ ಚಟುವಟಿಕೆ ನಡೆಸುವ ಉಗ್ರರ ಮೇಲೆ ಕಂಡಲ್ಲಿ ಗುಂಡಿಕ್ಕುವ ಆದೇಶ ಹೊರಡಿಸಬೇಕು ಎಂದು ಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆ ಕಾರ್ಯದರ್ಶಿ ಭೀಮಾಶಂಕರ ಮುತ್ತಟ್ಟಿ ಆಗ್ರಹಿಸಿದರು.
ಜಮ್ಮು ಕಾಶ್ಮೀರಲ್ಲಿ ಉಗ್ರರು ನಡೆಸಿದ ದಾಳಿ ಖಂಡಿಸಿ ಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಲವಾರು ವರ್ಷಗಳಿಂದಲೂ ಪಾಕಿಸ್ತಾನದ ಉಗ್ರ ಸಂಘಟನೆಗಳು ದೇಶದ ಸೈನಿಕರ ಮೇಲೆ ಅಟ್ಟಹಾಸ ಮೆರೆಯುತ್ತಿವೆ. ಇದರ ಪರಿಣಾಮ ಸೈನಿಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇವರನ್ನೇ ನಂಬಿ ಜೀವನ ಸಾಗಿಸುತ್ತಿರುವ ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಪ್ರಪಂಚದ ಎಲ್ಲ ದೇಶಗಳನ್ನು ಭಯೋತ್ಪಾದನೆ ಭೂತ ಬೆನ್ನತ್ತಿ ಕಾಡುತ್ತಿದ್ದರೂ ಹತ್ತಿಕ್ಕುವ ಕೆಲಸಗಳು ಆಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಪದವಿ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ, ಶಕುಂತಲಾ ಹೋಳಿ, ಬಿ.ಎಚ್. ಹೊಸಕೇರಿ, ಪ್ರೌಢಶಾಲೆ ಮುಖ್ಯಶಿಕ್ಷಕಿ ಸಾವಿತ್ರಿ ಕಾಡಲೂರ, ಪ್ರಾಥಮಿಕ ಮುಖ್ಯಶಿಕ್ಷಕಿ ಮೀನಾಕ್ಷಿ, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು.
ಎಸ್.ಜಿ.ವರ್ಮಾ ಶಾಲೆ: ಶಿಕ್ಷಕ ಶರಣು ತುಂಗಳ ಮಾತನಾಡಿ, ಕಾಶ್ಮೀರದ ಫುಲ್ವಾಮಾದಲ್ಲಿ ನಡೆದ ದಾಳಿಯನ್ನು ಖಂಡಿಸಿ, ಉಗ್ರರಿಗೆ ಪಾಠ ಕಲಿಸಬೇಕು ಎಂದು ಹೇಳಿದರು.
ಮುಖ್ಯಶಿಕ್ಷಕಿ ದಮಯಂತಿ ಸೂರ್ಯವಂಶಿ, ಶಿಕ್ಷಕರಾದ ಚನ್ನಬಸಪ್ಪ ಕೊಲ್ಲೂರ, ಮಹೇಶ್ವರಿ ಗುಳಿಗಿ, ವಿಜಯಲಕ್ಷ್ಮೀ ವೆಂಕಟೇಶ, ರಾಜೇಶ್ವರಿ ಎಂ., ಗೀತಾ ಪುಂಡಲಿಕ್, ಸಲಿನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.