ಉದ್ಯೋಗಮೇಳಕ್ಕೆ 200 ಕಂಪನಿ ಆಹ್ವಾನ: ಜಿಲ್ಲಾಧಿಕಾರಿ
Team Udayavani, Feb 17, 2019, 8:25 AM IST
ಕಲಬುರಗಿ: ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯನ್ನೊಳಗೊಂಡು ಹಮ್ಮಿಕೊಂಡಿರುವ ಬೃಹತ್ ಉದ್ಯೋಗ ಮೇಳದಲ್ಲಿ ಕನಿಷ್ಠ 200ಕ್ಕಿಂತಲೂ ಹೆಚ್ಚು ಕಂಪನಿಗಳನ್ನು ಆಹ್ವಾನಿಸುವ ಮೂಲಕ ಅವುಗಳು ಭಾಗಹಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ ಆಯೋಜನೆ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉದ್ಯೋಗ ಮೇಳಗಳ ಯಶಸ್ಸು ಅಭ್ಯರ್ಥಿಗಳಿಗೆ ಸಿಗುವ ಉದ್ಯೋಗಾವಕಾಶದ ಮೇಲೆ ಅವಲಂಬಿತವಾಗುತ್ತದೆ ಎಂದರು.
ಈ ಭಾಗದ ಹೆಚ್ಚಿನ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಸಿಗಬೇಕಾದರೆ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗ ನೀಡುವ ಹೆಚ್ಚಿನ ಕಂಪನಿಗಳು ಭಾಗವಹಿಸಿದರೆ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಚೇಂಬರ್ ಆಫ್ ಕಾಮರ್ಸ್, ಉದ್ಯೋಗ ಮತ್ತು ತರಬೇತಿ, ಜಿಲ್ಲಾ ಕೈಗಾರಿಕಾ ಕೇಂದ್ರದವರು ಕಂಪನಿಗಳನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಮುಂಬರುವ ಲೋಕಸಭೆ ಚುನಾವಣೆ ಅಧಿಸೂಚನೆಗಿಂತಲೂ ಮುಂಚಿತವಾಗಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಬೇಕು. ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕಾ ತರಬೇತಿ ಸಂಸ್ಥೆ ಅಧಿಕಾರಿಗಳು ಸಹಾಯಕ ಆಯುಕ್ತರೊಂದಿಗೆ ಜಂಟಿಯಾಗಿ ಉದ್ಯೋಗ ಮೇಳ ಕೈಗೊಳ್ಳಲು ಸ್ಥಳ ಪರಿಶೀಲನೆ ಮಾಡುವ ಮೂಲಕ ವರದಿ ಸಲ್ಲಿಸಬೇಕು. ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ಎನ್.ವಿ. ಮೈದಾನ, ಪಿಡಿಎ ಇಂಜಿನಿಯರಿಂಗ್ ಕಾಲೇಜುಗಳ ಸ್ಥಳ ಪರಿಶೀಲಿಸಬೇಕು ಎಂದು ಹೇಳಿದರು.
ಮೇಳದ ಮೇಲುಸ್ತುವಾರಿಯು ಉದ್ಯೋಗ ಮತ್ತು ತರಬೇತಿ ಇಲಾಖೆಯದ್ದಾಗಿದ್ದು, ಈ ಇಲಾಖೆ ಅಧಿಕಾರಿಗಳು ಆಸಕ್ತಿ ತೋರದಿರುವುದು ವಿಷಾದನೀಯವಾಗಿದೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಉದ್ಯೋಗ ಮೇಳದ ಮೇಲುಸ್ತುವಾರಿಯನ್ನು ವಹಿಸಿಕೊಳ್ಳಬೇಕು ಎಂದರು.
ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರವನ್ನು ಮುಂಚಿತವಾಗಿ ಪಡೆದುಕೊಳ್ಳಬೇಕು. ಕಂಪನಿಗಳ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಸೂಕ್ತ ಸೂಚನೆ ನೀಡಲು ಸಾಧ್ಯವಾಗುತ್ತದೆ. ಉದ್ಯೋಗ ಮೇಳದ ಕುರಿತಂತೆ ವೆಬ್ ಸೈಟ್ ಪ್ರಾರಂಭಿಸಿ ಅಭ್ಯರ್ಥಿಗಳ ನೋಂದಣಿ ಪ್ರಾರಂಭಿಸಬೇಕು. ಮೇಳದ ಆಯೋಜನೆಗೆ ಸ್ವಾಗತ ಮತ್ತು ಶಿಷ್ಠಾಚಾರ, ವೇದಿಕೆ, ಮುದ್ರಣ ಪ್ರಚಾರ, ಕಾರ್ಯ ನಿರ್ವಹಣೆ, ಆಹಾರ, ಆರೋಗ್ಯ-ಸ್ವತ್ಛತೆ-ಸುರಕ್ಷತೆ, ಸಮನ್ವಯ ಸಮಿತಿಗಳನ್ನು ರಚಿಸುವ ಮೂಲಕ ಆಯಾ ಸಮಿತಿಗಳ ಕರ್ತವ್ಯಗಳನ್ನು ತಿಳಿಸಿದರು.
ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ ರಘೋಜಿ, ಐಟಿಐ ಕಾಲೇಜಿನ ಪ್ರಾಂಶುಪಾಲ ಪಾಂಚಾಳ, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.