ತುಳು ನಾಟಕ ವೀಕ್ಷಿಸಿದ ಸದಾನಂದಗೌಡ

Team Udayavani, Feb 18, 2019, 6:18 AM IST

rajakiya.jpg

ಬೆಂಗಳೂರು: ಸದಾ ರಾಜಕೀಯ ಜಂಜಾಟಗಳಲ್ಲಿ ಮುಳುಗಿರುವ ಕೇಂದ್ರ ಸಚಿವ ಸದಾನಂದ ಗೌಡ ಭಾನುವಾರ ಸಂಜೆ ಕೊಂಚ ಬಿಡುವು ಮಾಡಿಕೊಂಡು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತುಳು ಹಾಸ್ಯ ನಾಟಕ ವೀಕ್ಷಿಸಿದರು.

ಯಕ್ಷಗಾನ ಪ್ರೇಮಿ ಎ.ಪಿ.ಕಾರಂತ ಅವರು 60ರ ವಸಂತಕ್ಕೆ ಹೆಜ್ಜೆಯಿರಿಸಿದ ಅಂಗವಾಗಿ ಸಂಪಾಜೆ ರಂಗ ಸಂಗಮ ಅಭಿನಂದನಾ ಸಮಾರಂಭ ಹಮ್ಮಿಕೊಂಡಿತ್ತು. ಆ ಹಿನ್ನೆಲೆಯಲ್ಲಿ ತುಳು ಚಿತ್ರನಟ ಉಮೇಶ್‌ ಮಿಜಾರು ಅವರ ತಂಡ “ಪಾಂಡುನ ಅಲಕ್ಕ ಪೋಂಡು’ ತುಳು ಹಾಸ್ಯ ನಾಟಕವನ್ನು ಪ್ರದರ್ಶಿಸಿತು.

ಅರ್ಧಗಂಟೆಗೂ ಹೆಚ್ಚುಕಾಲ ನಾಟಕ ವೀಕ್ಷಿಸಿದ ಸದಾನಂದಗೌಡ ಅವರು ಹಾಸ್ಯ ಸನ್ನಿವೇಶಗಳನ್ನು ನೋಡಿ ಆನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯವಷ್ಟೇ ಅಲ್ಲ. ದೇಶ, ವಿದೇಶಗಳ ನಾನಾ ಭಾಗಗಳಲ್ಲಿ ತುಳು ಸಂಘಟನೆಗಳಿದ್ದು, ಅವುಗಳು ಸಂಸ್ಕೃತಿ ಮತ್ತು ಸಂಸ್ಕಾರವನ್ನು ಪಸರಿಸುವ ಕೆಲಸ ಮಾಡುತ್ತಿವೆ ಎಂದು ಪ್ರಶಂಸಿಸಿದರು.

ತುಳುನಾಡಿನ ಆಚಾರ-ವಿಚಾರಗಳಲ್ಲದೆ ಸಂಪ್ರದಾಯಗಳು ಕೂಡ ವಿಶೇಷತೆಗಳಿಂದ ಕೂಡಿವೆ. ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಉಳಿಸಿ ಬೆಳಸುವ ಕಾರ್ಯಗಳು ಹೀಗೇ ನಡೆಯಲಿ ಎಂದು ಆಶಿಸಿದರು.

ಭಯೋತ್ಪಾದನೆ ಸಹಿಸಲಾಗದು: ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ ಆತ್ಮಾಹುತಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ ಸದಾನಂದಗೌಡ, ಭಯೋತ್ಪಾದನೆ ಜತಗೆ ಭಯೋತ್ಪಾಧನೆಯ ಪೋಷಕರನ್ನು ಕೂಡ ಭಾರತ ಬೆಂಬಲಿಸುವುದಿಲ್ಲ. ಘಟನೆಯ ಬಗ್ಗೆ ಇಡಿ ದೇಶವೇ ಒಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನ ಹಾಗೂ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಸಮಾರಂಭದಲ್ಲಿ ಎ.ಪಿ.ಕಾರಂತ ದಂಪತಿಯನ್ನು ಸನ್ಮಾನಿಸಲಾಯಿತು. ತುಳುವೆರೆ ಚಾವಡಿ ಗೌರವಾಧ್ಯಕ್ಷ ಪುರುಷೋತ್ತಮ ಚೇಂಡ್ಲ, ರಾಜ್‌ಸಂಪಾಜೆ, ಹಿರಿಯ ಗಾಯಕ ಶಶಿಧರ್‌ ಕೋಟೆ, ಪಾಲಿಕೆ ಸದಸ್ಯ ರಾಜೇಂದ್ರಕುಮಾರ್‌, ಕೆ.ಪಿ.ಪುತ್ತುರಾಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.