15 ಹುಲ್ಲಿನ ಬಣವೆ ಬೆಂಕಿಗಾಹುತಿ
Team Udayavani, Feb 18, 2019, 7:27 AM IST
ತುರುವೇಕೆರೆ: ತಾಲೂಕಿನ ಸಂಗಲಾಪುರ ಗ್ರಾಮದಲ್ಲಿ ಬೆಂಕಿಗೆ ಆಹುತಿಯಾದ 15 ಹುಲ್ಲಿನ ಬಣವೆಗಳ ಮಾಲಿಕರಿಗೆ ಜಿಲ್ಲಾಧಿಕಾರಿಗಳು ಅಲ್ಪ ಪರಿಹಾರ ನೀಡಿ ಕೈತೊಳೆದುಕೊಳ್ಳುವ ಬದಲು ಬಣವೆ ಪ್ರಮಾಣ ಅಂದಾಜಿಸಿ ತಲಾ ಮೂರು ಟ್ರ್ಯಾಕ್ಟರ್ ಮೇವು ಪೂರೈಸಬೇಕು ಎಂದು ಶಾಸಕ ಜಯರಾಂ ಒತ್ತಾಯಿಸಿದರು.
ಘಟನೆ ಸ್ಥಳಕ್ಕೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದು ಮಾತನಾಡಿದ ಶಾಸಕರು, ಇದೊಂದು ದುರುದ್ದೇಶಪೂರಿತ ಕೃತ್ಯ. ನಾಗರಿಕ ಸಮಾಜದಲ್ಲಿರುವ ಕೆಲ ಕೆಟ್ಟ ಮನಸ್ಸಿನವರು ಮಾಡಿರುವ ಹೀನಾಯ ಕೃತ್ಯ. ಮೂಕ ಪ್ರಾಣಿಗಳ ಮೇವನ್ನು ಸುಟ್ಟುಹಾಕಿರುವುದು ಖಂಡನೀಯ. ಕೂಡಲೇ ಜಿಲ್ಲಾಡಳಿತ ಮೇವು ಪೂರೈಕೆಗೆ ಮುಂದಾಗಬೇಕು ಎಂದು ಹೇಳಿದರು.
ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸ್ ಇಲಾಖೆ ಮುಂದಾಗಿದ್ದು, 25 ಸ್ಪೈ ಕ್ಯಾಮರಾಗಳನ್ನು ಗ್ರಾಮದ ಸುತ್ತಮುತ್ತ ಅಳವಡಿಸಲಾಗಿದೆ. ಈಗಾಗಲೇ ಇಬ್ಬರ ಬಗ್ಗೆ ಗುಮಾನಿಯಿದೆ. ಸೂಕ್ತ ಸಾಕ್ಷಿಗಳು ದೊರಕಿದ ನಂತರ ಬಂಧಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಚನ್ನಕೇಶವ ಹಾಗೂ ಭೈರವ ದೇವಸ್ಥಾನಕ್ಕೆ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. ತಹಶೀಲ್ದಾರ್ ನಯೀಮ್ ಉನ್ನೀಸಾ, ಸಿಪಿಐ ಮಹಮದ್ ಸಲೀಂ, ಪಿಎಸ್‌ಐ ರಾಜು, ಎಪಿಎಂಸಿ ಸದಸ್ಯ ವಿ.ಟಿ.ವೆಂಕಟರಾಮ್, ಮುನಿಯೂರು ಪಿಎಸಿಎಸ್ ಅಧ್ಯಕ್ಷ ರಾಜು, ಮುಖಂಡರಾದ ಸೋಮಣ್ಣ, ಹುಚ್ಚೇಗೌಡ, ಚಿದಾನಂದ್, ಮಿಥುನ್‌ಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.