ಬಿಎಸ್ಸೆನ್ನೆಲ್ ನೌಕರರ ಆಕ್ರೋಶ
Team Udayavani, Feb 19, 2019, 9:49 AM IST
ವಿಜಯಪುರ: ಕೇಂದ್ರ ಸರ್ಕಾರ ಸೌಮ್ಯದಲ್ಲಿರುವ ಬಿಎಸ್ಸೆನ್ನೆಲ್ ದೂರ ಸಂಪರ್ಕ ಸೇವಾ ಸಂಸ್ಥೆಯನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಬಿಎಸ್ಸೆನ್ನೆಲ್ ನೌಕರರು ಧರಣಿ ನಡೆಸಿದರು.
ಈಡೇರಿಕೆಗೆ ಆಗ್ರಹಿಸಿ ವಿಜಯಪುರ ಟೆಲಿಕಾಂ ನೌಕರರು ಮೂರು ದಿನ ಮುಷ್ಕರ ನಡೆಸಲಿದ್ದಾರೆ. ಸೋಮವಾರ ಬಿಎಸ್ಸೆನ್ನೆಲ್ ಪ್ರಧಾನ ಕಚೇರಿ ಎದುರು ಅಧಿಕಾರಿ ಮತ್ತು ಅಧಿಕಾರೇತರ ನೌಕರರ ಸಂಘಟನೆಗಳ ಒಕ್ಕೂಟ, ಆಲ್ ಯೂನಿಯನ್ಸ್ ಮತ್ತು ಅಸೋಸಿಯೇಷನ್ಸ್ ಆಫ್ ಬಿಎಸ್ಸೆನ್ನೆಲ್
ನೇತೃತ್ವದಲ್ಲಿ ನೌಕರರು ಧರಣಿ ನಡೆಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಅಧ್ಯಕ್ಷ ಎಸ್.ಆರ್. ನಾಯಕ ಮಾತನಾಡಿ, ಬಿಎಸ್ಸೆನ್ನೆಲ್ ಸಂಸ್ಥೆ ಹಿಂದಿನ ಹಾಗೂ ಇಂದಿನ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ತನ್ನ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿಯಲ್ಲಿದೆ.
ಸಂಸ್ಥೆಯಲ್ಲಿ ಸುಮಾರು 2 ಲಕ್ಷ ಕಾಯಂ ನೌಕರರು, 1 ಲಕ್ಷ ಗುತ್ತಿಗೆ ನೌಕರರು ಹಾಗೂ ಪರೋಕ್ಷವಾಗಿ ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಿದೆ. ಅನೇಕ ಕುಟುಂಬಗಳಿಗೆ ಬಿಎಸ್ಸೆನ್ನೆಲ್ ಜೀವನಾಧಾರವಾಗಿದೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದಾಗಿ ಇಂದು ಸಂಸ್ಥೆ ಅಸ್ತಿತ್ವ ಕಳೆದುಕೊಳ್ಳುವ ಹಂತಕ್ಕೆ ತಲುಪುತ್ತಿದೆ ಎಂದು ದೂರಿದರು.
ಬಿಎಸ್ಸೆನ್ನೆಲ್ ಸಂಸ್ಥೆಗೆ ಸೇರಿದ ಆಸ್ತಿ ಮತ್ತು ಖಾಲಿ ಭೂಮಿ ಹಾಗೂ ನಿವೇಶನಗಳಿದ್ದು ಒಂದು ಲೆಕ್ಕಾಚಾರದಂತೆ ಮಾರುಕಟ್ಟೆ ದರ 1,00,000 ಕೋಟಿ ರೂ.ಯಿದ್ದು, ಇದರ ಮೂಲಕ ನಾವು ನಮ್ಮ ಸಂಸ್ಥೆಗೆ ವಾರ್ಷಿಕ 10,000 ಕೋಟಿ ರೂ.ಗಳಿಂದ 12 ಸಾವಿರ ಕೋಟಿ ರೂ. ಆದಾಯ
ಗಳಿಸಬಹುದಾಗಿದೆ. ಈ ಆಸ್ತಿಗಳನ್ನು ಸದುಪಯೋಗಪಡಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಬಿಎಸ್ಸೆನ್ನೆಲ್‌ಗೆ ಕೂಡಲೇ ಕೇಂದ್ರ ಸರ್ಕಾರ 4ಜಿ ಸೇವೆಗಳನ್ನು ಒದಗಿಸಲು ಅನುಮತಿ ನೀಡಬೇಕು. ಕಳೆದ ವರ್ಷದ ಫೆಬ್ರವರಿ 24ರಂದು ಕೇಂದ್ರ ಸಂಪರ್ಕ ಮಂತ್ರಿಗಳು 4ಜಿ ತರಂಗಳನ್ನು ಸಂಸ್ಥೆಗೆ ಕೊಡಲು ದೂರ ಸಂಪರ್ಕ ಇಲಾಖಾ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಆದರೆ ಇಂದಿಗೂ ಕಾರ್ಯಗತವಾಗಿಲ್ಲ ಎಂದು ದೂರಿದರು.
ಬಿಎಸ್ಸೆನ್ನೆಲ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಬಿಎಸ್ಸೆನ್ನೆಲ್ ತನ್ನ ಜಾಲವನ್ನು ಅಭಿವೃದ್ಧಿಪಡಿಸಲು ಅತಿ ಅವಶ್ಯವಿರುವ ಮೂಲಭೂತ ಸಾಮಗ್ರಿ ಖರೀದಿಸಲು ಕೇಂದ್ರ ಸಕಾರ ಅನುಮತಿ ನೀಡಬೇಕು ಎಂದು ಒತ್ತಾಯಿಸಿದರು.
ವಿವಿಧ ಟೆಲಿಕಾಂ ನೌಕರರ ಸಂಘಟನೆ ಪ್ರಮುಖರಾದ ಎಸ್.ಎಲ್. ಕುಲಕರ್ಣಿ, ವಿ.ಆರ್. ತೆಲಗಾರ, ವಿ.ಡಿ. ನಾಯಕ, ಎಂ.ಜಿ. ಬಿಜ್ಜರಗಿ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.