ಕೈಗಾರಿಕಾ ಟೌನ್‌ಶಿಪ್ ರಚಿಸಲು ಪ್ರಸ್ತಾವನೆ
Team Udayavani, Feb 19, 2019, 12:22 PM IST
ಶಿವಮೊಗ್ಗ: ಮಾಚೇನಹಳ್ಳಿ ನಿದಿಗೆ ಕೈಗಾರಿಕಾ ಟೌನ್ ಶಿಪ್ ರಚನೆ ಮಾಡಲು ನಿದಿಗೆ ಗ್ರಾಪಂನವರು ನಿರಾಕ್ಷೇಪಣಾ ಪತ್ರ ಸಲ್ಲಿಸಿದ್ದು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಏಕ ಗವಾಕ್ಷಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮಾಚೇನಹಳ್ಳಿ ನಿದಿಗೆ ಕೈಗಾರಿಕಾ ಪ್ರದೇಶದ ಒಟ್ಟು 800 ಎಕರೆ ಪ್ರದೇಶದಲ್ಲಿ ಟೌನ್‌ಶಿಪ್ ರಚನೆಯಿಂದ ಈ ಭಾಗದ ಕೈಗಾರಿಕೆಗಳ ಬೆಳವಣೆಗೆಗೆ ಉತ್ತೇಜನ ದೊರೆಯಲಿದೆ. ಈ ಕುರಿತು ಪ್ರಸ್ತಾವನೆ ಪೌರಾಡಳಿತ ಇಲಾಖೆಗೆ ಸಲ್ಲಿಸುವ ಮೂಲಕ ಆದಷ್ಟು ಬೇಗನೆ ಟೌನ್‌ಶಿಪ್ ರಚನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಅತಿಕ್ರಮಣ ತೆರವುಗೊಳಿಸಿ ಜೆಸಿಬಿ ಬಳಸಿ ಗಡಿ ಗುರುತಿಸುವ ಕಾರ್ಯ ಮಾಡಬೇಕು. ಸರ್ವೇ ಸಂಖ್ಯೆ 120ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿರುವ 604 ಎಕರೆ ಜಮೀನಿನ ಪೈಕಿ ಖಾಸಗಿಯವರಿಗೆ ಸೇರಿದ 21 ಎಕರೆ ಜಮೀನು ಈಗಾಗಲೇ ಕೆಐಎಡಿಬಿಯವರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಸರ್ಕಾರಕ್ಕೆ ಸೇರಿರುವ 582 ಎಕರೆ ಜಮೀನು ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.
ಇದನ್ನು ಹಸ್ತಾಂತರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಉಪವಿಭಾಗಾಧಿಕಾರಿ ಅವರಿಗೆ ಸೂಚಿಸಿದರು.
ಸಿದ್ಲಿಪುರ ಕೈಗಾರಿಕಾ ವಸಾಹತು ಪ್ರದೇಶಕ್ಕೆ ಸಾಗರ ರಸ್ತೆಯಿಂದ ಮುಖ್ಯ ರಸ್ತೆ ಅಭಿವೃದ್ಧಿಪಡಿಸಲು ಸ್ವಾಧೀನಪಡಿಸಿಕೊಳ್ಳಬಹುದಾದ ಭೂಮಿ ಗುರುತಿಸಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಕೆಎಸ್‌ಎಸ್‌ಐಡಿಸಿ ಅಧಿಕಾರಿಗಳಿಗೆ ತಿಳಿಸಿದರು.
ಕೈಗಾರಿಕಾ ಪ್ರದೇಶದಲ್ಲಿರುವ ಅಟೋ ಕಾಂಪ್ಲೆಕ್ಸ್ ನಲ್ಲಿ ಶೌಚಾಲಯ ನಿರ್ಮಿಸಬೇಕು. ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅವರಿಗೆ ಡಿಸಿ ಸೂಚನೆ ನೀಡಿದರು. ಇದೇ ರೀತಿ ಸಮರ್ಪಕ ವಿದ್ಯುತ್ ಸಂಪರ್ಕ ಕಲ್ಪಿಸಲು ಮಹಾನಗರ ಪಾಲಿಕೆ ಕ್ರಮಕೈಗೊಳ್ಳಬೇಕು ಎಂದರು. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ ಹೆಗಡೆ ಮಾತನಾಡಿ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶವನ್ನು ರಾಜ್ಯದಲ್ಲೇ ಮಾದರಿ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿಪಡಿಸಬೇಕಾಗಿದೆ.
ಇಲ್ಲಿ ಘನ ತ್ಯಾಜ್ಯ ಸೂಕ್ತ ವಿಲೇವಾರಿಗೆ 10 ಎಕರೆ ಜಮೀನು ಒದಗಿಸಲು ಈ ಹಿಂದೆ ಅನುಮೋದನೆ ನೀಡಲಾಗಿದ್ದು, ಇನ್ನೂ ಜಮೀನು ಹಸ್ತಾಂತರಿಸಿಲ್ಲ. ಕೈಗಾರಿಕಾ ಪ್ರದೇಶದಲ್ಲಿ ಕಾಲುದಾರಿ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಭದ್ರಾವತಿ ನಗರ ಸಭೆಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.
ಜಿಪಂ ಸಿಇಒ ಶಿವರಾಮೇಗೌಡ, ಶಿವಮೊಗ್ಗ ಉಪ ವಿಭಾಗಾ ಧಿಕಾರಿ ಪ್ರಕಾಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್, ಉಪ ನಿರ್ದೇಶಕ ಶಿವಪ್ರಸಾದ್, ಕೆಎಸ್‌ಎಸ್‌ಐಡಿಸಿ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಶಿವಕುಮಾರ್, ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಜೆ.ಆರ್. ವಾಸುದೇವ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.