ಜವಾಬ್‌ ಪ್ರೀಮಿಯರ್‌ ಲೀಗ್‌ -2019 ಕ್ರಿಕೆಟ್‌ ಪಂದ್ಯಾಟ

Team Udayavani, Feb 19, 2019, 3:53 PM IST

1802mum03.jpg

ಮುಂಬಯಿ: ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ಜವಾಬ್‌ನ ಯುವ ವಿಭಾಗದ ಮುಂದಾಳತ್ವದಲ್ಲಿ ಜವಾಬ್‌ ಪ್ರೀಮಿಯರ್‌ ಲೀಗ್‌ ಟರ್ಫ್‌ ಕ್ರಿಕೆಟ್‌ ಚಾಂಪಿಯನ್‌ಶಿಪ್‌ ಪಂದ್ಯಾಟವು ಫೆ. 10ರಂದು ಜಾನಕಿ ದೇವಿ ಸ್ಕೂಲ್‌ ಕ್ರಿಕೆಟ್‌ ಟರ್ಫ್‌ನಲ್ಲಿ ಅದ್ದೂರಿಯಾಗಿ ಜರಗಿತು.

ಬೆಳಗ್ಗೆ 9ಕ್ಕೆ ಜವಾಬ್‌ನ ಅಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಂದ್ಯಾಟವನ್ನು  ಬಾಲಿವುಡ್‌ನ‌ ಪ್ರಸಿದ್ಧ  ಮಾರ್ಷಲ್‌ ಆರ್ಟ್ಸ್ ಕಲಾವಿದ  ಚೀತಾ ಯಜ್ಞೆàಶ್‌ ಶೆಟ್ಟಿ ಮತ್ತು ಮುಂಬಯಿ ಕ್ರಿಕೆಟ್‌ ಅಸೋಸಿಯೇಶನ್‌  ಆಡಳಿತ ಸಮಿತಿಯ ಸದಸ್ಯ ಮತ್ತು ಕಂಗನಾ ಲೀಗ್‌ನ ಕಾರ್ಯದರ್ಶಿ ನವೀನ್‌ ಶೆಟ್ಟಿ ಅವರು ದೀಪಪ್ರಜ್ವಲಿಸಿ  ಉದ್ಘಾಟಿಸಿ ಶುಭಹಾರೈಸಿದರು.

ಯುವ ವಿಭಾಗದ ಸಮನ್ವಯಕರಾದ ರಾಜೇಶ್‌ ಬಿ. ಶೆಟ್ಟಿ ಅವರೊಂದಿಗೆ ಜವಾಬ್‌ನ ಕ್ರೀಡಾ ಸಮಿತಿಯ ಅಧ್ಯಕ್ಷ ಪ್ರಭಾಕರ ಕೆ. ಶೆಟ್ಟಿ, ಉಪಾಧ್ಯಕ್ಷ ಪ್ರವೀಣ್‌ ಕುಮಾರ್‌ ಶೆಟ್ಟಿ, ಜವಾಬ್‌ ಪದಾಧಿಕಾರಿಗಳು, ವಿಶ್ವಸ್ತರು, ಮಾಜಿ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಸರಣಿಯ ಶ್ರೇಷ್ಠ ಆಟಗಾರರಾಗಿ ಜವಾಬ್‌ ತಂಡದ ನಾಯಕ ರೋಶನ್‌ ರಘು ಶೆಟ್ಟಿ ಅವರು ಆಯ್ಕೆಯಾದರು. ಮಹಿಳಾ ಶ್ರೇಷ್ಠ ಆಟಗಾರ್ತಿಯಾಗಿ ದೀಕ್ಷಾ ಶೆಟ್ಟಿ ಅವರು ಬಹುಮಾನ ಪಡೆದರು.

ಮುಂಬಯಿ ನಗರದ ವಿವಿಧ ಕ್ರೀಡಾಕೂಟಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ, ಕ್ರೀಡಾಕೂಟಕ್ಕೆ ಮೆರುಗು ನೀಡಿದ್ದು, ಒಟ್ಟು 11 ತಂಡಗಳು  ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಜವಾಬ್‌, ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ, ಬಂಟರ ಸಂಘ ಸಿಟಿ ಪ್ರಾದೇಶಿಕ ಸಮಿತಿ, ಬಂಟರ ಸಂಘ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿ, ಬಂಟರ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿ, ಬಂಟರ ಸಂಘ ಕಲ್ಯಾಣ್‌-ಭಿವಂಡಿ ಪ್ರಾದೇಶಿಕ ಸಮಿತಿ, ಬಂಟರ ಸಂಘ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿ, ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಪ್ರಾದೇಶಿಕ ಸಮಿತಿ, ಥಾಣೆ ಬಂಟ್ಸ್‌ ಅಸೋಸಿಯೇಶನ್‌, ಮುಲುಂಡ್‌ ಬಂಟ್ಸ್‌ ತಂಡಗಳು ಭಾಗವಹಿಸಿದ್ದವು.

ಸೆಮಿಫೈನಲ್‌ ಹಂತಕ್ಕೆ ಜವಾಬ್‌, ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ, ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿ, ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಪ್ರವೇಶಿಸಿತು. ಫೈನಲ್‌ನಲ್ಲಿ ಜವಾಬ್‌ ತಂಡ ಮತ್ತು ಮೀರಾ-ಭಾಯಂದರ್‌ ತಂಡಗಳು ಮುಖಾಮುಖೀಯಾ ಗಿದ್ದು, ಜಿದ್ದಾಜಿದ್ದಿನ ಹೋರಾಟ ದಲ್ಲಿ ಜವಾಬ್‌ ತಂಡವು ವಿಜಯ ವಾಗುವುದರೊಂದಿಗೆ ಜವಾಬ್‌ ಪ್ರೀಮಿಯರ್‌ ಲೀಗ್‌ ಚಾಂಪಿ ಯನ್‌ಶಿಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಬಂಟರ ಸಂಘ ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಯು ರನ್ನರ್ ಅಪ್‌ ಪ್ರಶಸ್ತಿಯನ್ನು ಪಡೆಯಿತು.

ಮಹಿಳೆಯರು, ಜವಾಬ್‌ ಪರಿವಾರದ ಸದಸ್ಯರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಆಟಗಾರರನ್ನು ಪ್ರೋತ್ಸಾಹಿಸಿದರು. ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಜವಾಬ್‌ನ ಪದಾಧಿಕಾರಿಗಳು, ವಿಶ್ವಸ್ಥರು, ಮಾಜಿ ಅಧ್ಯಕ್ಷರುಗಳು, ಇತರ ಗಣ್ಯರು ಉಪಸ್ಥಿತರಿದ್ದು ಕ್ರೀಡಾಳುಗಳಿಗೆ ಬಹುಮಾನ ವಿತರಣೆ ಮಾಡಿ ಶುಭಹಾರೈಸಿದರು. ಕ್ರೀಡಾಕೂಟದ ಯಶಸ್ಸಿಗೆ ಮಹಿಳಾ ಕಾರ್ಯಕರ್ತರಾದ ರೂಪಾ ಪ್ರಭಾಕರ ಶೆಟ್ಟಿ, ರಂಜನಿ ಪ್ರವೀಣ್‌ ಶೆಟ್ಟಿ, ರೇಷ್ಮಾ ರಘು ಶೆಟ್ಟಿ, ಸೌಮ್ಯಾ ಶೆಟ್ಟಿ ಅವರು ಸಹಕರಿಸಿದರು.
 
ಟಾಪ್ ನ್ಯೂಸ್

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.