ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ
Team Udayavani, Feb 20, 2019, 12:30 AM IST
ಚೆನ್ನೈ: ಮಹಾರಾಷ್ಟ್ರದಲ್ಲಿ ಶಿವಸೇನಾ ಜತೆ ಚುನಾವಣಾ ಮೈತ್ರಿ ಮಾಡಿಕೊಂಡ ಬಳಿಕ ಬಿಜೆಪಿ ತಮಿಳುನಾಡಿನಲ್ಲಿ ಎಐಎಡಿಎಂಕೆ ಜತೆಗೆ ಸ್ಥಾನ ಹೊಂದಾಣಿಕೆ ಅಂತಿಮಗೊಳಿಸಿದೆ. ಒಟ್ಟು 39 ಸ್ಥಾನಗಳ ಪೈಕಿ ಬಿಜೆಪಿಗೆ 5, ಮಾಜಿ ಸಚಿವ ಅನುಮಣಿ ರಾಮದಾಸ್ ನೇತೃತ್ವದ ಪಟ್ಟಾಳಿ ಮಕ್ಕಳ್ ಕಚ್ಚಿ ಪಕ್ಷಕ್ಕೆ 7 ಸ್ಥಾನ ಮತ್ತು 1 ರಾಜ್ಯಸಭಾ ಸ್ಥಾನ ನೀಡುವ ಬಗ್ಗೆ ಮಾತುಕತೆ ಪೂರ್ತಿಯಾಗಿದೆ. ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್, ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿ ಸ್ವಾಮಿ, ಡಿಸಿಎಂ ಓ.ಪನ್ನೀರ್‌ಸೆಲ್ವಂ ಮೈತ್ರಿಯ ಬಗ್ಗೆ ಮಂಗಳವಾರ ಪ್ರಕಟಿಸಿದ್ದಾರೆ. ತಮಿಳುನಾಡಿನಲ್ಲಿ ಇದೊಂದು ದೊಡ್ಡ ಮೈತ್ರಿಕೂಟ ವಾಗಲಿದೆ ಮತ್ತು ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಲಿದೆ ಎಂಬ ವಿಶ್ವಾಸವನ್ನೂ ಮುಖಂಡರು ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನ ಉತ್ತರ ಮತ್ತು ಪಶ್ಚಿಮ ಭಾಗದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ವಣ್ಣಿಯಾರ್ ಸಮು ದಾಯದವರ ಮತಗಳನ್ನು ಗುರಿಯಾಗಿರಿಸಿಕೊಂಡು ಪಿಎಂಕೆಯನ್ನು ಎಐಎಡಿಎಂಕೆ-ಬಿಜೆಪಿ ಮೈತ್ರಿ ಕೂಟಕ್ಕೆ ಸೇರಿಸಿಕೊಳ್ಳಲಾಗಿದೆ. 2016ರಲ್ಲಿ ಎಐಎಡಿಎಂಕೆ ನಾಯಕಿ ಜಯಲಲಿತಾ ನಿಧನರಾದ ಬಳಿಕ ತಮಿಳುನಾಡಿನ ಆಡಳಿತ ಪಕ್ಷಕ್ಕೆ ಮೊದಲ ಚುನಾವಣಾ ಅಗ್ನಿ ಪರೀಕ್ಷೆ ಯಾಗಲಿದೆ. 2014ರಲ್ಲಿ ಜಯ ಲಲಿತಾ ನೇತೃತ್ವದಲ್ಲಿ ಎಐಎಡಿಎಂಕೆ 39 ಸ್ಥಾನಗಳ ಪೈಕಿ 37ರಲ್ಲಿ ಜಯಗಳಿಸಿತ್ತು. ಅದರಲ್ಲಿ ಪಿಎಂಕೆ, ಬಿಜೆಪಿ ತಲಾ 7 ಸ್ಥಾನಗಳಲ್ಲಿ ಸ್ಪರ್ಧಿಸಿ ಒಂದೊಂದರಲ್ಲಿ ಜಯ ಸಾಧಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.