ಅಧಿಕಾರ ವಹಿಸಿಕೊಳ್ಳದಂತೆ ಕನ್ನಡಿಗರಿಂದ ತಡೆ
Team Udayavani, Feb 20, 2019, 1:00 AM IST
ಕಾಸರಗೋಡು: ಬಂದಡ್ಕ ಸರಕಾರಿ ಹೈಸ್ಕೂಲ್‌ನ ಕನ್ನಡ ಮಾಧ್ಯಮ ತರಗತಿಯ ಫಿಸಿಕಲ್ ಸಯನ್ಸ್ ವಿಭಾಗಕ್ಕೆ ಪೈವಳಿಕೆ ಶಾಲೆಯಿಂದ ವರ್ಗಾವಣೆ ಪಡೆದು ಬಂದ ಕನ್ನಡ ಅರಿಯದ ಮಲಯಾಳಿ ಅಧ್ಯಾಪಕ ಸುಹಿರಿ ಅವರನ್ನು ಶಾಲಾ ಪಿ.ಟಿ.ಎ., ವಿದ್ಯಾರ್ಥಿಗಳ ಹೆತ್ತವರು ಗಡಿನಾಡ ಕನ್ನಡ ಸಂಘದ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸದಂತೆ ತಡೆದರು.
ಪೈವಳಿಕೆ ಶಾಲೆಯ ಕನ್ನಡ ವಿದ್ಯಾರ್ಥಿಗಳಿಗೆ ಈ ಅಧ್ಯಾಪಕನನ್ನು ನೇಮಿಸಲಾಗಿತ್ತು. ಆದರೆ ಅಲ್ಲಿ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಜೆಯಲ್ಲಿ ತೆರಳಿದ್ದ ಅಧ್ಯಾಪಕ ಸುಹಿರಿಯನ್ನು ಬಂದಡ್ಕ ಶಾಲೆಗೆ ವರ್ಗಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಫೆ. 19ರಂದು ಬೆಳಗ್ಗೆ ಬಂದಡ್ಕ ಶಾಲೆಗೆ ಬಂದಿದ್ದ ಅಧ್ಯಾಪಕ ಸುಹಿರಿಯನ್ನು ಕನ್ನಡಿಗರು ಅಧಿಕಾರ ಸ್ವೀಕರಿಸದಂತೆ ತಡೆದರು.
ಈ ಸಂದರ್ಭದಲ್ಲಿ ಗಡಿನಾಡ ಕನ್ನಡ ಸಂಘ ಬಂದಡ್ಕ ಘಟಕದ ಅಧ್ಯಕ್ಷ ಪುರುಷೋತ್ತಮ ಬೊಡ್ಡನಕೊಚ್ಚಿ, ಪಿಟಿಎ ಉಪಾಧ್ಯಕ್ಷ ಚರಣ್ ಕುಮಾರ್, ಸಿರಿ ಚಂದನ ಯುವ ಬಳಗದ ರಾಜೇಶ್ ಎಸ್.ಪಿ., ಭವ್ಯಶ್ರೀ, ರಂಜಿತ್, ಮಹೇಂದ್ರ ಪಾಲಾರು, ತಾರಾ, ಕಸ್ತೂರಿ, ಸಂಜೀವ, ವಿನಯ, ರವೀಶ, ವಿದ್ಯಾರ್ಥಿಗಳ ಹೆತ್ತವರು, ವಿದ್ಯಾರ್ಥಿಗಳು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಊರವರು ಮೊದಲಾದವರಿದ್ದರು.
ಫೆ. 5ರಂದು ಬಂದಡ್ಕದ ಕನ್ನಡಿಗರು ಕನ್ನಡ ಹೋರಾಟ ಸಮಿತಿ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಆಡ್ಮಿನಿಸ್ಟ್ರೇಶನ್ ಅಸಿಸ್ಟೆಂಟ್ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಕನ್ನಡ ಅರಿಯದ ಮಲಯಾಳಿ ಅಧ್ಯಾಪಕನನ್ನು ನೇಮಿಸ ದಂತೆ ವಿನಂತಿಸಿದ್ದರು.
ಹುಸಿಯಾದ ಭರವಸೆ
ಮನವಿಗೆ ಸ್ಪಂದಿಸಿದ ಆಡ್ಮಿನಿಸ್ಟ್ರೇಶನ್ ಅಸಿಸ್ಟೆಂಟ್ ಮಲಯಾಳಿ ಅಧ್ಯಾಪಕನನ್ನು ಕಳುಹಿಸುವುದಿಲ್ಲ ಎಂದು ಭರವಸೆ ನೀಡಿದ್ದರು. ಅಲ್ಲದೆ ಈ ಶಾಲೆಯಲ್ಲಿ ಇದೀಗ ತಾತ್ಕಾಲಿಕವಾಗಿ ದುಡಿಯುತ್ತಿರುವ ಅಧ್ಯಾಪಕರನ್ನು ಮುಂದು ವರಿಸುವುದಾಗಿಯೂ ಹೇಳಿದ್ದರು.
ಆದರೂ ಮಂಗಳವಾರದಂದು ಸುಹಿರಿ ಬಂದಡ್ಕ ಶಾಲೆಯಲ್ಲಿ ಅಧಿಕಾರ ಸ್ವೀಕರಿಸಲು ಬಂದಿದ್ದರು. ಈ ಸಂದರ್ಭದಲ್ಲಿ ಪಿಟಿಎ, ಗಡಿನಾಡ ಕನ್ನಡ ಸಂಘದ ನೇತೃತ್ವದಲ್ಲಿ ಕನ್ನಡಿಗರು ಅಧಿಕಾರ ಸ್ವೀಕರಿಸದಂತೆ ತಡೆದಿದ್ದು, ಇದರಂತೆ ಅಧ್ಯಾಪಕ ವಾಪಸಾಗಿದ್ದಾರೆ.
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ..
ಭಾಷಾ ಅಲ್ಪಸಂಖ್ಯಾಕ ಪ್ರದೇಶ ಕಾಸರಗೋಡಿನಲ್ಲಿ ಕನ್ನಡಿಗರ ಸಂವಿಧಾನ ಬದ್ಧವಾದ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿರುವಂತೆಯೇ ಕನ್ನಡ ತಿಳಿಯದ ಮಲಯಾಳಿ ಅಧ್ಯಾಪಕರನ್ನು ಬಂದಡ್ಕ ಸರಕಾರಿ ಹೈಸ್ಕೂಲ್‌ನ ಕನ್ನಡ ಮಾಧ್ಯಮ ಫಿಸಿಕಲ್ ಸಯನ್ಸ್ ವಿಭಾಗಕ್ಕೆ ನೇಮಿಸದಂತೆ ಫೆ. 5ರಂದು ಜಿಲ್ಲಾಧಿಕಾರಿ ಡಾ| ಸಜಿತ್‌ಬಾಬು ಅವರಿಗೆ ಮನವಿ ಸಲ್ಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.