ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ವಿದ್ಯೆ ಕಲಿಸಿ


Team Udayavani, Feb 20, 2019, 7:30 AM IST

kannad.jpg

ಚಾಮರಾಜನಗರ: ಕರ್ನಾಟಕದಲ್ಲಿ ಶಿಕ್ಷಣ ಮಾಧ್ಯಮವಾಗಿ ಕನ್ನಡವನ್ನು ಉಳಿಸಿಕೊಳ್ಳುವ ಮಹತ್ವದ ಹೊಣೆ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಲಕ್ಷ್ಮೀಪತಿ ಹೇಳಿದರು. 

ನಗರದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನಡೆದ 9 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೇ ದಿನದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡಭಾಷೆಯಲ್ಲಿ 125 ಕ್ಕೆ 125 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಉಚಿತವಾಗಿ ಪಾಠ ಬೋಧಿಸಿದ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂಗ್ಲಿಷ್‌ ಮೋಹ ಬೇಡ: ಕರ್ನಾಟಕದಲ್ಲಿ ಪೋಷಕರು ಇಂಗ್ಲಿಷ್‌ ವ್ಯಾಮೋಹಕ್ಕೆ ಒಳಗಾಗಿ ತಮ್ಮ ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮ ಶಾಲೆಗಳಿಗೆ ದಾಖಲಿಸುತ್ತಿದ್ದು, ಇದರಿಂದ ಕನ್ನಡ ಶಾಲೆಗಳಲ್ಲಿ ಹಾಜರಾತಿ ತುಂಬಾ ಕಡಿಮೆಯಾಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಆಯಾ ರಾಜ್ಯದ ಭಾಷೆಯನ್ನೇ ಶಿಕ್ಷಣ ಮಾಧ್ಯಮವನ್ನಾಗಿ ಆರಿಸಿಕೊಂಡಿವೆ. ಆದರೆ, ಕರ್ನಾಟಕದಲ್ಲಿ ನಮ್ಮ ಮಾತೃಭಾಷೆಯನ್ನು ಮರೆತು ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಲು ಹಾತೊರೆಯುತ್ತಿರುವುದು ವಿಷಾದನೀಯ ಎಂದರು.

ವ್ಯಾಪರೀಕರಣ ತಡೆಯಿರಿ: ಕನ್ನಡ ಮಾಧ್ಯಮವನ್ನು ಉಳಿಸಲು  ನಮ್ಮ ಮಠಮಾನ್ಯಗಳು ತಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಮಾಧ್ಯಮದಲ್ಲೇ ಶಿಕ್ಷಣಕೊಡಬೇಕು, ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟಬೇಕು ಎಂದು ಕೋರಿದರು.

ಸಾನ್ನಿಧ್ಯ ವಹಿಸಿದ್ದ ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಾದಿ ಶರಣರು ಜನರಲ್ಲಿ ವಚನಸಾಹಿತ್ಯದ ಪರಿಕಲ್ಪನೆ ಮೂಡಿಸಿದರು. ಶರಣರು, ವಚನಗಳ ಮೂಲಕ ಅಂತರಂಗದ ಭಾವನೆಯನ್ನು ಜನಮಾನಸದಲ್ಲಿ ಬಿತ್ತುವ ಕೆಲಸ ಮಾಡಿದರು. ತಮ್ಮ ವಚನಗಳ ಮೂಲಕ ಸಮಾಜದ ಬದಲಾವಣೆಗೆ ಕಾರಣೀಭೂತರಾಗಿದ್ದಾರೆ. ಕನ್ನಡ ಸಾಹಿತ್ಯವು ಮನಸ್ಸನ್ನು ಮುದಗೊಳಿಸುತ್ತದೆ ಎಂದರು.
 
ಕಸಾಪ ಸೇವೆ: ಇಂದಿನ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯಾಸಕ್ತ ಮನಸ್ಸುಗಳನ್ನು ಒಂದುಗೂಡಿಸುವ ಪುಣ್ಯಕಾರ್ಯ ಮಾಡುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸೇವೆ ಶ್ಲಾಘನೀಯ. ಕನ್ನಡ ಸಾಹಿತ್ಯವನ್ನು ಅಭ್ಯಾಸ ಮಾಡಿ ಅಲ್ಲಿರುವ ವಿಚಾರಗಳನ್ನು ತಿಳಿಯುವ ಮೂಲಕ ಅದನ್ನು ಹೆಮ್ಮರವಾಗಿ ಬೆಳೆಸಬೇಕಿದೆ ಎಂದರು.

ಸನ್ಮಾನ: ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 125 ಕ್ಕೆ 125 ಅಂಕಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಕಸಾಪ ಸಾಹಿತ್ಯ ಪರೀಕ್ಷೆಗಳಿಗೆ ಉಚಿತವಾಗಿ ಬೋಧಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮೀಪತಿ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಮಲ್ಲಪ್ಪ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ನೇತ್ರಾವತಿ,ಕಸಾಪ ಪದಾಧಿಕಾರಿಗಳು ಉಪಸ್ಥಿತರಿದ್ದರು.

5 ವರ್ಷ ಶ್ರಮಪಟ್ಟರೆ 50 ವರ್ಷ ಸುಖ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷತೆ ವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹನೂರುಚನ್ನಪ್ಪ ಮಾತನಾಡಿ, ವಿದ್ಯಾರ್ಥಿಗಳು ಐದು ವರ್ಷ ಕಷ್ಟಪಟ್ಟು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಮುಂದಿನ 50 ವರ್ಷ ಸುಖವಾಗಿರಬಹುದು.

ಯಾವುದೇ ಕಾರ್ಯದಲ್ಲಾದರೂ, ಶ್ರಮಪಡಲೇಬೇಕು. ದ್ವೇಷದಿಂದ ನಾವು ಯಾವ ಸಾಧನೆ ಮಾಡಲು ಸಾಧ್ಯವಿಲ್ಲ. ಪ್ರೀತಿಯಿಂದ ಮಾತ್ರ ಸಾಧ್ಯ. ಮಕ್ಕಳು ಶಿಕ್ಷಣದ ಜತೆಗೆ ಮೌಲ್ಯವನ್ನು ಬೆಳೆಸಿಕೊಂಡಾಗ ದೊಡ್ಡ ವ್ಯಕ್ತಿಯಾಗಲು ಸಾಧ್ಯ ಎಂದು ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gundlupete

Gundlupete: ಹೆಣ್ಣಾನೆ ಮೃತದೇಹ ಪತ್ತೆ: ಆಂಥಾಕ್ಸ್ ಕಾಯಿಲೆ ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

12

Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.