ನನ್ನನ್ನು ಯಾರೂ ಅಪಹರಿಸಿಲ್ಲ; ಅಕ್ರಮ ಬಂಧನದಲ್ಲಿಟ್ಟಿಲ್ಲ
Team Udayavani, Feb 21, 2019, 1:09 AM IST
ಬೆಂಗಳೂರು: “ನನ್ನನ್ನು ಯಾರೂ, ಯಾವತ್ತೂ ಅಪಹರಣ ಮಾಡಿಲ್ಲ ಹಾಗೂ ಯಾರೂ ಅಕ್ರಮ ಬಂಧನದಲ್ಲಿ ಇರಿಸಿಲ್ಲ’ ಎಂದು ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿರುವ ಅಥಣಿ ಶಾಸಕ ಮಹೇಶ್ ಕುಮಠಳ್ಳಿ, ನಾನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಕ್ರಮ ಬಂಧನಲ್ಲಿದ್ದೆ ಎನ್ನುವುದು ಸಂಪೂರ್ಣ ಸುಳ್ಳು ಎಂದು ಹೇಳಿಕೊಂಡಿದ್ದಾರೆ.
ಶಾಸಕ ಮಹೇಶ್ ಕುಮಠಳ್ಳಿ ಅವರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಅಕ್ರಮ
ಬಂಧನದಲ್ಲಿ ಇಟ್ಟುಕೊಂಡಿದ್ದು, ಅವರನ್ನು ಪತ್ತೆ ಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅಥಣಿಯ ವಕೀಲ ಪ್ರಮೋದ ದಯಾನಂದ ಹಿರೇಮನಿ ಎಂಬುವರು ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಕೆ.ಎನ್.ಫಣೀಂದ್ರ ಹಾಗೂ ನ್ಯಾ.ಕೆ.ನಟರಾಜನ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಖುದ್ದು ಹಾಜರಿದ್ದರು.ಶಾಸಕರ ಪರ ವಕೀಲ ಡಿ.ಎಸ್.ಜೀವನ್‌ಕುಮಾರ್ ನ್ಯಾಯಪೀಠಕ್ಕೆ ಶಾಸಕರ ಅಫಿಡವಿಟ್ ಸಲ್ಲಿಸಿದರು. ಇದರಲ್ಲಿ “ಪ್ರಕರಣದಲ್ಲಿ ಅರ್ಜಿದಾರರು ಹೇಳಿರುವಂತೆ ನನ್ನನ್ನು ಯಾರೂ ಬಂಧನದಲ್ಲಿ ಇಟ್ಟಿಲ್ಲ. ಫೆ.13 ಮತ್ತು 14ರಂದು ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡಿದ್ದೇನೆ’ ಎಂದು ಮಹೇಶ್ ಕುಮಠಳ್ಳಿ ಹೇಳಿದ್ದಾರೆ. ಈ ಪ್ರಮಾಣಪತ್ರ ದಾಖಲಿಸಿ ಕೊಂಡ ನ್ಯಾಯಪೀಠ, ಶಾಸಕ ಮಹೇಶ್, ರಮೇಶ್ ಜಾರಕಿಹೊಳಿ ಇವರಿಬ್ಬರಿಗೆ ಸೀಮಿತವಾಗಿ ಅನ್ವಯವಾಗುವಂತೆ ಅರ್ಜಿಯನ್ನು ವಜಾಗೊಳಿಸಿ, ಪ್ರಕರಣದ ವಿಚಾರಣೆ ಬಾಕಿ ಇಟ್ಟುಕೊಂಡು ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.