ಸರ್ವಜ್ಞನ ವಚನಗಳಲ್ಲಿ ಮಾನವತೆಯ ಸಂದೇಶ: ಪೂಂಜ
Team Udayavani, Feb 21, 2019, 6:16 AM IST
ಬೆಳ್ತಂಗಡಿ : ಸರ್ವಜ್ಞನ ವಚನಗಳು ಮಾನವತೆಯ ಸಂದೇಶ ನೀಡುವುದರೊಂದಿಗೆ ಜನಸಾಮಾನ್ಯರ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರಯತ್ನವನ್ನೂ ಮಾಡಿವೆ. ಅವರ ಸಂದೇಶಗಳು ಇಂದಿಗೂ ಪ್ರಸ್ತುತವಾಗಿದ್ದು, ಸಮಾಜಕ್ಕೆ ಮಾರ್ಗ ದರ್ಶಕವಾಗಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.
ಬುಧವಾರ ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಬೆಳ್ತಂಗಡಿ ತಾ| ಆಡಳಿತದ ವತಿಯಿಂದ ತಾ| ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಸಹಯೋಗದಲ್ಲಿ ನಡೆದ ಸರ್ವಜ್ಞ ಜಯಂತಿ ಆಚರಣೆ-2019 ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಅಧ್ಯಕ್ಷೆ ದಿವ್ಯ ಜ್ಯೋತಿ ಮಾತನಾಡಿ, ಸರಕಾರ ಸಾಧಕರ ಜಯಂತಿ ಆಚರಿಸುವುದರ ಜತೆಗೆ ಅವರು ಹುಟ್ಟಿದ ಸಮುದಾಯದ ಬೆಳವಣಿಗೆಗೂ ಕೊಡುಗೆ ನೀಡುತ್ತಿದೆ ಎಂದರು.
ರಾಜ್ಯ ಕುಂಬಾರರ ಮಹಾ ಸಂಘದ ಸಂಘಟನ ಕಾರ್ಯದರ್ಶಿ ಎಚ್. ಪದ್ಮಕುಮಾರ್ ಉಪನ್ಯಾಸ ನೀಡಿ, ಸರ್ವಜ್ಞ ಅವರು ಸಮಾಜದ ಜಾತಿ ವ್ಯವಸ್ಥೆ, ವರ್ಣಭೇದ ನೀತಿಯನ್ನು ದೂರ ಮಾಡುವ ನಿಟ್ಟಿನಲ್ಲಿ ಸರಳ ಕನ್ನಡದ ಮೂಲಕ ಸಾಹಿತ್ಯ ರಚಿಸಿ, ಸಾಕಷ್ಟು ಬದಲಾವಣೆಗೂ ಕಾರಣವಾಗಿದ್ದರು ಎಂದರು. ಬಂದಾರಿನ ರಾಷ್ಟ್ರ ಮಟ್ಟದ ಕ್ರೀಡಾಪಟು ಚಿತ್ರಾ ಅವರನ್ನು ಸಮ್ಮಾನಿಸಲಾಯಿತು. ಹುತಾತ್ಮ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು.
ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ತಾ.ಪಂ. ಉಪಾಧ್ಯಕ್ಷೆ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ. ಸೆಬಾಸ್ಟಿನ್, ಸದಸ್ಯರಾದ ಗೋಪಿನಾಥ್ ನಾಯಕ್, ಕೃಷ್ಣಯ್ಯ ಆಚಾರ್ಯ, ವಸಂತಿ, ನ.ಪಂ. ಸದಸ್ಯ ಜನಾರ್ದನ್, ಕುವೆಟ್ಟು ಗ್ರಾ.ಪಂ. ಅಧ್ಯಕ್ಷ ಅಶೋಕ್ ಕೋಟ್ಯಾನ್, ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ ಉಪಸ್ಥಿತರಿದ್ದರು.
ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್ ಬಿ. ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಸುಭಾಸ್ ಜಾಧವ್ ವಂದಿಸಿದರು. ಬಂದಾರು ಗ್ರಾ.ಪಂ. ಅಧ್ಯಕ್ಷ ಉದಯಕುಮಾರ್ ಬಿ.ಕೆ. ಕಾರ್ಯಕ್ರಮ ನಿರೂಪಿಸಿದರು.
ಕುಲಾಲ ಭವನಕ್ಕೆ ನಿಧಿ
ಸ್ಥಳೀಯ ಕುಲಾಲ ಭವನಕ್ಕೆ ತನ್ನ ಶಾಸಕ ನಿಧಿಯಿಂದ 5 ಲಕ್ಷ ರೂ. ಅನುದಾನ ಮೀಸಲಿಡಲಾಗಿದ್ದು, ಸಂಸದರ ನಿಧಿಯಿಂದಲೂ ಅನುದಾನ ದೊರಕಿಸಿ ಕೊಡುವ ಪ್ರಯತ್ನ ಮಾಡುವೆ.
- ಹರೀಶ್ ಪೂಂಜ, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.