ದೇಶದ ಸಂಸ್ಕೃತಿ ಉಳಿಸಿ-ಬೆಳೆಸಿ
Team Udayavani, Feb 21, 2019, 12:07 PM IST
ಯಾದಗಿರಿ: ನಮ್ಮ ದೇಶದ ಕಲೆ, ಸಂಸ್ಕೃತಿ, ಸಂಪ್ರದಾಯಗಳನ್ನು ಅಳವಡಿಸಿಕೊಂಡು ಉಳಿಸಿ, ಬೆಳೆಸುವ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 2018-19ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನ ಮೇಳದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಹಾಕಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ ಕುಳಗೇರಿ ಮಾತನಾಡಿ, ಯುವಜನ ಮೇಳಗಳಲ್ಲಿ ಸಾಂಪ್ರದಾಯಿಕ ಕಲೆ, ಭಾರತೀಯ ಸಂಸ್ಕೃತಿ ಅನಾವರಣವಾಗಲಿದೆ. ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಪ್ರಥಮ ಸ್ಥಾನ ಪಡೆದವರನ್ನು ಬೀದರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಯುವಜನ ಮೇಳಕ್ಕೆ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ಪ್ರಕಾಶ ಅಂಗಡಿ ಅವರ ಸಗರನಾಡು ಯುವಕ ಸಂಘಕ್ಕೆ ಉತ್ತಮ ಯುವ ಸಂಘಟನೆ ಪ್ರಶಸ್ತಿ ಹಾಗೂ ಆನಂದ ರಾಠೊಡ ಅವರಿಗೆ ಜಿಲ್ಲಾ ಉತ್ತಮ ಯುವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಜಿಲ್ಲೆಯ ಜನಪದ ನೃತ್ಯ, ಕೋಲಾಟ, ಡೊಳ್ಳು ಕುಣಿತ, ಬಯಲಾಟ, ಭಜನೆ ಪದ, ಹಾಗೂ ಇನ್ನಿತರ ಕಲಾ ತಂಡಗಳು ಯುವಜನ ಮೇಳದಲ್ಲಿ ಭಾಗವಹಿಸಿದ್ದವು. ಸೂಗಪ್ಪ ಪಾಟೀಲ, ಪ್ರಕಾಶ ಅಂಗಡಿ, ಉಪನ್ಯಾಸಕ ರುದ್ರಗೌಡ ಉಪಸ್ಥಿತರಿದ್ದರು. ಮಲ್ಲಯ್ಯ ಸ್ವಾಮಿ ಇಟಗಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.