15 ವರ್ಷಗಳಲ್ಲಿ ಭಾರತ ಆಗಲಿದೆ 3ನೇ ಅತಿದೊಡ್ಡ ಅರ್ಥ ವ್ಯವಸ್ಥೆ
Team Udayavani, Feb 22, 2019, 12:30 AM IST
ಸಿಯೋಲ್: ಮುಂದಿನ 15 ವರ್ಷಗಳಲ್ಲಿ ವಿಶ್ವದ ಪ್ರಮುಖ ಮೂರನೇ ಆರ್ಥಿಕತೆಯಾಗಿರಲಿದೆ ಎಂದು 2 ದಿನಗಳ ಉತ್ತರ ಕೊರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಭಾರತವು 3.5 ಲಕ್ಷ ಕೋಟಿ ರೂ. ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಅವರು ಹೇಳಿದ್ದಾರೆ. ಸಿಯೋಲ್ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಸುಧಾರಿಸುವುದಕ್ಕಾಗಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದರ ಫಲವಾಗಿ ಭಾರತ ಅತ್ಯಂತ ವೇಗವಾಗಿ ಪ್ರಗತಿ ಕಾಣುತ್ತಿದೆ ಎಂದಿದ್ದಾರೆ. ಎರಡು ದಿನಗಳ ಪ್ರವಾಸಕ್ಕಾಗಿ ದಕ್ಷಿಣ ಕೊರಿಯಾಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜಾಯೆ ಇನ್ ಜೊತೆ ಶುಕ್ರವಾರ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಸಿಯೋಲ್ ಶಾಂತಿ ಪುರಸ್ಕಾರವನ್ನೂ ಮೋದಿ ಸ್ವೀಕರಿಸಲಿದ್ದಾರೆ.
ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ: ದಕ್ಷಿಣ ಕೊರಿಯಾದ ಪ್ರತಿಷ್ಠಿತ ಯೋನ್ಸೆ„ ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧಿ ಪುತ್ಥಳಿಯನ್ನು ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಮೂನ್ ಅನಾವರಣಗೊಳಿಸಿದ್ದಾರೆ. ಈ ವೇಳೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಕೂಡ ಹಾಜರಿದ್ದರು. ಗಾಂಧಿ ಚಿಂತನೆಗಳು ಏಷ್ಯಾ ಹಾಗೂ ಇತರ ಭಾಗಗಳಿಗೂ ಪಸರಿಸಬೇಕು ಎಂದು ದ.ಕೊರಿಯಾ ಅಧ್ಯಕ್ಷ ಮೂನ್ ಜಾಯೆ ಇನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.