ಕನ್ನಡ ಸಾಹಿತ್ಯದ ಬೆಳವಣಿಗೆಗೆ ಸರ್ವಜ್ಞರ ಕೊಡುಗೆ ಅಪಾರ
Team Udayavani, Feb 22, 2019, 12:30 AM IST
ಮಡಿಕೇರಿ: ಕನ್ನಡ ಸಾಹಿತ್ಯದ ಬೆಳವಣಿಗೆಗೆ ಸರ್ವಜ್ಞರ ಕೊಡುಗೆ ಅಪಾರ ವಾದದ್ದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಅಭಿಪ್ರಾಯಪಟ್ಟರು.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ನಡೆದ ಸರ್ವಜ್ಞ ಜಯಂತಿ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿರುವುದಕ್ಕೆ ಸರ್ವಜ್ಞರ ಕೊಡುಗೆಯೂ ಕಾರಣ. ಅವರು ರಚಿಸಿರುವ ವಚನಗಳಿಗೆ ಸಾರ್ವಕಾಲಿಕ ಮನ್ನಣೆ ದೊರಕಿರುವುದು ಅವರ ಜ್ಞಾನ ಭಂಡಾರಕ್ಕೆ ಹಿಡಿದ ಕೈಗನ್ನಡಿ ಯಾಗಿದೆ ಎಂದು ಶಾಸಕರಾದ ಅಪ್ಪಚ್ಚು ರಂಜನ್ ಅವರು ನುಡಿದರು.
ಛತ್ರಪತಿ ಶಿವಾಜಿ ಮಹಾರಾಜರು ಅಪ್ರತಿಮ ದೇಶ ಭಕ್ತರಾಗಿದ್ದು, ಯುದ್ಧ ಕಲೆ, ಹೋರಾಟ ಮನೋಭಾವ, ಚಿಕ್ಕಂದಿ ನಿಂದಲೇ ಮೈಗೂಡಿಸಿಕೊಂಡಿದ್ದರು ಎಂದು ಶಾಸಕರು ತಿಳಿಸಿದರು.
ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳಿಗೆ ಶಿವಾಜಿ ಅವರ ಜೀವನ ಮೌಲ್ಯವನ್ನು ತಿಳಿಸುವುದರ ಮೂಲಕ ಯುವ ಪೀಳಿ ಗೆಯಲ್ಲಿ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವಂತಾಗಬೇಕು ಎಂದು ಅವರು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ ಅವರು ಮಾತನಾಡಿ ಶಿವಾಜಿಯವರ ತಾಯಿ ಜೀಜಾಬಾಯಿ ಅವರು ಶಿವಾಜಿ ಅವರನ್ನು ಬೆಳಸಿದಂತೆ, ಪ್ರತಿಯೊಬ್ಬ ತಾಯಂದಿರು ತಮ್ಮ ಮಕ್ಕಳಿಗೆ ಶಿವಾಜಿಯ ಆದರ್ಶಗಳನ್ನು ತಿಳಿಸಿಕೊಡಬೇಕು ಎಂದು ತಿಳಿಸಿದರು
ಕವಿ ಸರ್ವಜ್ಞರು ತಮ್ಮ ತ್ರಿಪದಿಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದರು ಎಂದು ನುಡಿದರು.
ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಸಾಮಾನ್ಯ ಜನರಲ್ಲಿ ಇದ್ದಂತಹ ಕಂದಾಚಾರ, ಮೂಡನಂಬಿಕೆ ಇವುಗಳನ್ನು ದೂರಗೊಳಿಸಿದ ಮಹಾನ್ ವ್ಯಕ್ತಿ ಸರ್ವಜ್ಞ ಅವರ ಜ್ಞಾನ ಭಂಡಾರವನ್ನು ತಿಳಿಸಿದರು ಮೊಘಲರು ಮತ್ತು ನಿಜಾಮರ ವಿರುದ್ಧ ಹೋರಾಡಿದ ಧೀಮಂತ ವ್ಯಕ್ತಿ ಶಿವಾಜಿ. ಬಾಲ್ಯದಲ್ಲಿ ತನ್ನ ತಾಯಿಯಾದ ಜೀಜಾಬಾಯಿಯಿಂದ ವೀರರ ಧೀರರ ಕತೆಗಳಿಂದ ಪ್ರೇರೇಪಣೆ ಪಡೆದು ಬೆಳೆದರು ಎಂದು ಅವರು ತಿಳಿಸಿದರು.
ಮರಾಠ ಸಮಾಜದ ಜಿಲ್ಲಾಧ್ಯಕ್ಷ ರಾಜಾರಾವ್ ಕುಲಾಲ ಕುಂಬಾರ ಸಮಾಜದ ಮುಖಂಡ ನಾಣಯ್ಯ ತಹಶೀಲ್ದಾರ್ ಕುಸುಮ ಉಪಸ್ಥಿತರಿದ್ದರು.ದರ್ಶನ ಸ್ವಾಗತಿಸಿದರು, ಮಂಜುನಾಥ್ ನಿರೂಪಿಸಿದರು. ರಮೇಶ್ ವಂದಿಸಿದರು.
ಅಸಾಧಾರಣ ಕವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಬಿ.ಎಸ್.ಲೋಕೋಶ್ ಸಾಗರ್ ಅವರು ಮಾತನಾಡಿ ಬಸವ ಸಾರ ಮತ್ತು ಮಲ್ಲಮ್ಮ ಸರ್ವಜ್ಞರ ತಂದೆ-ತಾಯಿ. ಅಸಾಧಾರಣ ಕವಿಯಾದ ಸರ್ವಜ್ಞ ಅವರು ತ್ರಿಪದಿಗಳನ್ನು ರಚಿಸಿ ಕಣ್ಣಿಗೆ ಆಜನರಿಗೆ ಪರಿಚಯಿಸಿ ದೇಶಕ್ಕೆ ಜ್ಞಾನವನ್ನು ನೀಡಿದ ದಾರ್ಶನಿಕರು.
ಎರಡು ಸಾವಿರಕ್ಕೂ ಹೆಚ್ಚು ತ್ರಿಪದಿಗಳಮೂಲಕ ಸರ್ವಜ್ಞರು ಸಾರ್ವಕಾಲಿಕ ಸತ್ಯವನ್ನು ತಿಳಿಸಿದ್ದಾರೆ ಎಂದರು. ಇಂತಹ ಸಾಧಕರ ಬುನಾದಿಯಿಂದ ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಚಾರ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.