3ರಿಂದ 19 ಅಡಿಗೇರಿದ ಜಲ ಮಟ್ಟ
Team Udayavani, Feb 22, 2019, 1:00 AM IST
ಮೂಡುಬಿದಿರೆ: ಇಲ್ಲಿಗೆ ಸಮೀಪದ ಪಾಲಡ್ಕ ಎಂಬಲ್ಲಿನ ನಿವಾಸಿಯೊಬ್ಬರ ಮನೆಯ ಬಾವಿಯಲ್ಲಿ 3 ಅಡಿಗಳಷ್ಟಿದ್ದ ನೀರಿನ ಮಟ್ಟ ಬುಧವಾರ ಹಠಾತ್ 19 ಅಡಿಗಳಿಗೇರಿದೆ!
ಶ್ರೀ ಕೊಡಮಣಿತ್ತಾಯ ಕುಕ್ಕಿನಂತಾಯ ದೈವಸ್ಥಾನ ಮತ್ತು ಪಾಲಡ್ಕ ಚರ್ಚ್ ಸಮೀಪದ ಸತೂರ್ನಿ-ವೀಣಾ ಡಿ’ಸಿಲ್ವ ಅವರ ಮನೆಯ ಬಾವಿಯಲ್ಲಿ ಈ ವಿಸ್ಮಯ ಘಟಿಸಿದೆ. ದಂಪತಿ ಕೆಲವು ವರ್ಷಗಳ ಹಿಂದೆ ಜಾಗ ಖರೀದಿಸಿ, ಮನೆ ನಿರ್ಮಿಸಿದ್ದರು. ಎರಡು ವರ್ಷಗಳ ಹಿಂದೆ 40 ಅಡಿ ಆಳದ ತೆರೆದ ಬಾವಿಯನ್ನು ತೋಡಲಾಗಿತ್ತು. ಕಳೆದ ವರ್ಷ ಫೆಬ್ರವರಿಯಲ್ಲಿ ನೀರಿನ ಮಟ್ಟ 3 ರಿಂಗ್‌ಗಳಿಗಷ್ಟೇ ಸೀಮಿತವಾಗಿತ್ತು. ಈ ಬಾರಿಯೂ ಅಷ್ಟೇ ಇತ್ತು ಎಂದು ಸತೂರ್ನಿ ದಂಪತಿ ತಿಳಿಸಿದ್ದಾರೆ. ಸುತ್ತಮುತ್ತಲಿನ ಬಾವಿಗಳಲ್ಲೂ ನೀರಿನ ಮಟ್ಟ ಸಂಪೂರ್ಣ ಕುಸಿದಿದೆ. ಆದರೆ ಇದೊಂದು ಬಾವಿಯಲ್ಲಿ ಮಾತ್ರ ನೀರು ಏಕಾಏಕಿ ಏರಿಕೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಕಿಂಡಿ ಅಣೆಕಟ್ಟು ಪರಿಣಾಮ?
ಈ ಬಾವಿಯಿಂದ ಸುಮಾರು ಎರಡೂವರೆ ಕಿ.ಮೀ. ದೂರದಲ್ಲಿರುವ ಪುತ್ತಿಗೆ ಕಂಚಿಬೈಲು ಎರುಗುಂಡಿಯಲ್ಲಿ ಪಾಲಡ್ಕ ಚರ್ಚ್‌ನ ಧರ್ಮಗುರುಗಳು ಹಾಗೂ ಊರವರ ಮುತುವರ್ಜಿಯ ಫಲವಾಗಿ ಜನಪ್ರತಿನಿಧಿಗಳ ಪ್ರಯತ್ನ ದಿಂದ ರೂ. ಒಂದೂವರೆ ಕೋಟಿ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಿದೆ. ಈ ಕಿಂಡಿ ಅಣೆಕಟ್ಟಿನಿಂದಾಗಿ ಅಂತರ್ಜಲ ವೃದ್ಧಿಯಾಗಿರುವ ಪರಿಣಾಮ ಇದು ಎಂದು ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.