ಚರ್ಚೆ ಮೂಲಕ ಟಿಕೆಟ್ ಹಂಚಿಕೆ ಸಮಸ್ಯೆ ಪರಿಹಾರ
Team Udayavani, Feb 22, 2019, 1:14 AM IST
ಗದಗ: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕನಿಷ್ಠ 12 ಕ್ಷೇತ್ರಗಳನ್ನು ಬಿಟ್ಟು ಕೊಡಬೇಕೆಂದು ಜೆಡಿಎಸ್ ಬೇಡಿಕೆ ಇಟ್ಟಿದೆ. ಸಮ್ಮಿಶ್ರ ಸರ್ಕಾರದಲ್ಲಿ ಕೊಡು ಕೊಳ್ಳುವಿಕೆ ಸಾಮಾನ್ಯವಾಗಿದ್ದು, ಯಾವುದನ್ನೂ ನಿದಿìಷ್ಟವಾಗಿ ಹೇಳ ಲಾಗದು ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆಯಲ್ಲಿ ಹಾಲಿ ಸಂಸದರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗುತ್ತದೆ. ಎಚ್.ಡಿ. ದೇವೇಗೌಡ, ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಸೇರಿ ಅನೇಕ ಹಿರಿಯರು ಚರ್ಚೆ ಮೂಲಕ ನಿರ್ಧರಿಸಲಿದ್ದಾರೆ ಎಂದರು.
ಎಂ.ಬಿ.ಪಾಟೀಲ ದಾರಿ ತಪ್ಪಿ ಗೃಹ ಸಚಿವರಾಗಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ನಾನು ದಾರಿ ತಪ್ಪಿ ಗೃಹ ಸಚಿವನಾಗಿಲ್ಲ. ಸಂವಿಧಾನ ವನ್ನೇ ಬದಲಾಯಿಸಬೇಕೆಂದು ಮಾತನಾಡುತ್ತಿರುವ ಅನಂತಕುಮಾರ ಹೆಗಡೆ ದಾರಿ ತಪ್ಪಿದ್ದಾರೆ. ಕಾರವಾರದ ಜನರು ಅನಂತಕುಮಾರ್ ಅವರನ್ನೇ ಬದಲಾಯಿಸಬೇಕು ಎನ್ನುವ ಮೂಲಕ ತಿರುಗೇಟು ನೀಡಿದರು.
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಹಾಗೂ ಧಾರ್ಮಿಕ ಸೇವೆಯಲ್ಲಿ ತೊಡಗಿರುವ ಡಾ. ವೀರೇಂದ್ರ ಹೆಗ್ಗಡೆ ಅವರು ಮೌಲ್ಯಯುತ ಚಿಂತನೆಗಳಿಂದ ಸಮಾಜದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಆದರೆ, ಹೆಗಡೆ ಎಂಬ ಪದಕ್ಕೆ ಅನಂತಕುಮಾರ ಹೆಗಡೆ ಅಪವಾದ. ಅವರಿಗೆ ಅಭಿವೃದಿಟಛಿ ವಿಷಯಗಳು ಬೇಕಿಲ್ಲ. ನಾವು ಮಾಡಿರುವ ಅಭಿವೃದ್ದಿ ಕಾರ್ಯಗಳಲ್ಲಿ ಶೇ.5ರಷ್ಟೂ ಮಾಡಿಲ್ಲ. ಈ ಕುರಿತು ಬಹಿರಂಗ ಚರ್ಚೆಗೆ ಬರಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.