ಸ್ಕೈವಾಕ್ ವಿವಾದ: ಬಿಬಿಎಂಪಿಗೆ ನೋಟಿಸ್
Team Udayavani, Feb 22, 2019, 6:22 AM IST
ಬೆಂಗಳೂರು: ಇಂದಿರಾನಗರ 100 ಅಡಿ ರಸ್ತೆ ಸಮೀಪದ ದೂಪನಹಳ್ಳಿ ಬಳಿ ನಿರ್ಮಿಸುತ್ತಿರುವ “ಸ್ಕೈವಾಕ್’ (ಪಾದಚಾರಿ ಮೇಲ್ಸೇತುವೆ) ಕಾಮಗಾರಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿದೆ.
ಸ್ಕೈವಾಕ್ ಕಾಮಗಾರಿಗೆ 2018ರ ಮಾ.14ರಂದು ಬಿಬಿಎಂಪಿ ನೀಡಿರುವ ಕಾರ್ಯಾದೇಶ ಪ್ರಶ್ನಿಸಿ ಇಂದಿರಾನಗರದ ಜಗದೀಶ್ ಸಂತೋಷ್, ಅರಿಫುಲ್ಲಾ ರವೂಫ್ ಖಾನ್ ಸೇರಿ 16 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯಪೀಠ, ಪ್ರತಿವಾದಿಗಳಾದ ಬಿಬಿಎಂಪಿ ಆಯುಕ್ತರು, ರಸ್ತೆ ಮೂಲಸೌಕರ್ಯ ವಿಶೇಷ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಸ್ಕೈವಾಕ್ ಕಾಮಗಾರಿ ಗುತ್ತಿಗೆ ಪಡೆದಿರುವ ಖಾಸಗಿ ಕಂಪೆನಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ಮುಂದೂಡಿತು.
ಸದ್ಯ ಸ್ಕೈವಾಕ್ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳದಿಂದ 100 ಮೀ. ಅಂತರದಲ್ಲೇ ಮತ್ತೂಂದು ಸ್ಕೈವಾಕ್ ಇದೆ. ಹಾಗಾಗಿ ಹೊಸ ಮೇಲ್ಸೇತುವೆ ಅಗತ್ಯವಿಲ್ಲ. ಅದರ ಬದಲಿಗೆ ಇಂದಿರಾನಗರ 12ನೇ ಮುಖ್ಯರಸ್ತೆಯಲ್ಲಿ ಶಾಲೆಯಿದ್ದು, ಅಲ್ಲಿ ನಿರ್ಮಿಸಿದರೆ ಅನುಕೂಲವಾಗುತ್ತದೆ.
ಈ ಬಗ್ಗೆ ಬಿಬಿಎಂಪಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ, ಮನವಿ ಪರಿಗಣಿಸಿಲ್ಲ. ಆದ್ದರಿಂದ ಕಾಮಗಾರಿ ಆದೇಶ ರದ್ದುಗೊಳಿಸಬೇಕು. ಅಲ್ಲದೇ ಅರ್ಜಿ ಇತ್ಯರ್ಥವಾಗುವವರೆಗೆ ಕಾಮಗಾರಿ ಮುಂದುವರಿಸದಂತೆ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್ ಗೆದ್ದ ವಿಜ್ಞಾನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.