ಚಂಬಲ್ ಸಿನಿಮಾ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಕಾರ
Team Udayavani, Feb 22, 2019, 6:22 AM IST
ಬೆಂಗಳೂರು: ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರ ಜೀವನಾಧಾರಿತ ಚಿತ್ರ ಎಂದು ಹೇಳಲಾಗಿರುವ ನಟ ನೀನಾಸಂ ಸತೀಶ್ ಅಭಿನಯದ “ಚಂಬಲ್’ ಕನ್ನಡ ಚಲನಚಿತ್ರ ಬಿಡುಗಡೆಗೆ ಹಾಗೂ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಡಿ.ಕೆ. ರವಿ ಅವರ ತಾಯಿ ಗೌರಮ್ಮ ಹಾಗೂ ತಂದೆ ಕರಿಯಪ್ಪ ಸಲ್ಲಿಸಿದ್ದ ಅರ್ಜಿಯು ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಚಿತ್ರದ ಕಥಾ ವಿಷಯ ಇಂತಹದ್ದೇ ಇದೆ ಅಥವಾ ವ್ಯಕ್ತಿಯೊಬ್ಬರ ಜೀವನಾಧಾರಿತವಾಗಿದೆ ಎಂಬ ಖಚಿತ ತೀರ್ಮಾನಕ್ಕೆ ಬರಲು ಈ ಹಂತ “ಅಪಕ್ವ’. ಅಲ್ಲದೇ 2018ರ ನ.30ರಂದು ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡಲಾಗಿದ್ದು, ಚಿತ್ರ ಬಿಡುಗಡೆಗೆ ಇನ್ನೊಂದು ದಿನವಷ್ಟೇ ಬಾಕಿ ಇದೆ. ಈ ಹಂತದಲ್ಲಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕೆಂಬ ಅರ್ಜಿದಾರರ ಮನವಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.
ಆದರೆ, ಚಿತ್ರದಲ್ಲಿ ತಮ್ಮ ಮಗನ ವ್ಯಕ್ತಿತ್ವಕ್ಕೆ ಧಕ್ಕೆಯಾಗುವಂಥ ಅಂಶಗಳನ್ನು ಸೇರಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿರುವ ಹಿನ್ನೆಲೆಯಲ್ಲಿ, ಮೊದಲ ಪ್ರದರ್ಶನದ ಬಳಿಕ ಸಂಪೂರ್ಣ ಚಿತ್ರದ ಡಿವಿಡಿ ಯನ್ನು ಸೋಮವಾರ (ಫೆ.25) ನ್ಯಾಯಾಲಯಕ್ಕೆ ಹಾಜರುಪಡಿಸಬೇಕೆಂದು ಚಿತ್ರ ತಂಡಕ್ಕೆ ನ್ಯಾಯಪೀಠ ಸೂಚಿಸಿತು. ಅಲ್ಲದೇ ಸೆನ್ಸಾರ್ ಮಂಡಳಿಯ ಪ್ರಮಾಣಪತ್ರ ನೀಡಿದ ವಿಚಾರವಾಗಿ ವಿಚಾರಣೆಯನ್ನು ಮುಕ್ತವಾಗಿಸಿರುವ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.