ವಿದ್ಯಾರ್ಥಿಗಳಿಗೆ ಸಂಸದೀಯ ವ್ಯವಸ್ಥೆ ಅರಿವಿನ ಅಗತ್ಯ
Team Udayavani, Feb 22, 2019, 7:25 AM IST
ಹಾಸನ: ಪಠ್ಯದ ಶಿಕ್ಷಣದ ಜೊತೆಗೆ ಶಾಲಾ ಹಂತದಲ್ಲೇ ಮಕ್ಕಳಿಗೆ ಸಂಸದೀಯ ವ್ಯವಸ್ಥೆ ಹಾಗೂ ರಾಜಕೀಯದ ಬಗ್ಗೆ ತಿಳುವಳಿಕೆ ಇರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್ ತಿಮ್ಮಣ್ಣಚಾರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಗ್ರಾಸ್ ರೂಟ್ಸ್ ರಿಸರ್ಚ್ ಆ್ಯಂಡ್ ಅಡ್ವಕಸಿ ಮೂವ್‌ಮೆಂಟ್, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಪಂಚಾಯತಿ ಹೊಯ್ಸಳ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಂಸತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ಅಡಿಯಲ್ಲಿ ಸಂಸದೀಯ ವ್ಯವಸ್ಥೆಯನ್ನು ರೂಪಿಸಲಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ, ವಿಧಾನ ಸಭೆ, ವಿಧಾನ ಪರಿಷತ್‌ಗಳಿಗೆ ಆಯ್ಕೆಯ ವಿಧಾನ ಮಕ್ಕಳು ತಿಳಿದಿರಬೇಕು ಎಂಬ ಕಾರಣಕ್ಕಾಗಿ ಮಕ್ಕಳ ಸಂಸತ್ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಜಾಪ್ರಭುತ್ವ ಸಾರ್ವತ್ರಿಕ ವೇದಿಕೆ: ಗ್ರಾಸ್ ರೂಟ್ಸ್ ರಿಸರ್ಚ್ ಆ್ಯಂಡ್ ಅಡ್ವಕಸಿ ಮೂವ್‌ಮೆಂಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಬಸವರಾಜು ಮಾತನಾಡಿ ಪ್ರಜಾಪ್ರಭುತ್ವ ಒಂದು ಸಾರ್ವತ್ರಿಕ ವೇದಿಕೆ. ದೇಶದ ಈ ವ್ಯವಸ್ಥೆಯ ಬಗ್ಗೆ ಆಡಳಿತ ನಾಯಕನ ಜೊತೆಗೆ ಪ್ರಜೆಯ ಪಾತ್ರ ಏನು ಎಂಬುದನ್ನು ಸಾರ್ವಜನಿಕರು ತಿಳಿದಿರಬೇಕು ಎಂದು ಹೇಳಿದರು.
ಸುಗಮ ಶಿಕ್ಷಾ ಮುಖ್ಯಸ್ಥೆ ಉಷಾ ಮಾತನಾಡಿ, ಸರ್ಕಾರಿ ಶಾಲೆಗಳು ಆಂಗ್ಲ ಭಾಷೆ ಹಾಗೂ ತಾಂತ್ರಿಕ ಶಿಕ್ಷಣ ವ್ಯವಸ್ಥೆ ಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಗ ಮಾತ್ರ ಸರ್ಕಾರಿ ಶಾಲೆಗಳ ಮೇಲೆ ಆಸಕ್ತಿ ಸಾರ್ವಜನಿಕ ಅಥವಾ ಗ್ರಾಮೀಣ ಪ್ರದೇಶದ ಜನರಿಗೆ ಆಸಕ್ತಿ ಮೂಡುತ್ತದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಕೆ ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ಎ.ಎನ್.ಪ್ರಕಾಶ್‌ಗೌಡ, ಅಪರ ಜಿಲ್ಲಾಧಿಕಾರಿ ಎಂ ಎಲ್.ವೈಶಾಲಿ, ಉಪಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್. ಮಂಜುನಾಥ್, ವಕೀಲರ ಸಂಘದ ಅಧ್ಯಕ್ಷ ಜಿ.ಪಿ. ಶಂಕರ್ ಭಾಗವಸಿದ್ದರು.
ಗಮನ ಸೆಳೆದ ಮಕ್ಕಳ ಸಂಸತ್: ಹಾಸನ ತಾಲೂಕಿನ ಬಿ.ಕಾಟೀಹಳ್ಳಿ, ಬೂವನಹಳ್ಳಿ, ದೇವೆಗೌಡ ನಗರ, ಹನುಮಂತಪುರ, ದೊಡ್ಡ ಮಂಡಿಗನಹಳ್ಳಿ ಹಾಗೂ ಸಿದ್ದಯ್ಯನಗರ 7 ಶಾಲೆಗಳಿಂದ ಸುಮಾರು 140 ವಿದ್ಯಾರ್ಥಿಗಳು, ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು.
ವಿದ್ಯಾಥಿನಿಯೊಬ್ಬರು ಸ್ಪೀಕರ್ ಆಗಿ ಸಭೆಯನ್ನು ನಿರ್ವಸಿದರು. ಯುವ ಪ್ರತಿಭಾವಂತ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಾಗಿ, ವಿಧ ಸಚಿವರಾಗಿ ಪಾಲ್ಗೊಂಡು ತಮ್ಮ ಇಲಾಖೆಗಳಿಗೆ ಸಂಬಂಧಿಸಿಂತೆ ಪ್ರಶ್ನೆಗಳಿಗೆ ಉತ್ತರಿಸಿ ಅಭಿಪ್ರಾಯ ಪಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BGT 2024-25: ಅಡಿಲೇಡ್ ಟೆಸ್ಟ್ ನಿಂದ ಹೊರಬಿದ್ದ ಆಸ್ಟ್ರೇಲಿಯಾದ ಪ್ರಮುಖ ವೇಗಿ
Bengaluru: ಮರಕ್ಕೆ ಬೈಕ್ ಡಿಕ್ಕಿ : 2 ವಿದ್ಯಾರ್ಥಿಗಳು ಸಾವು
Bengaluru Crime: ಅತಿಯಾಗಿ ಮೊಬೈಲ್ ಬಳಸಿದಕ್ಕೆ ಪ್ರೇಯಸಿ ಹತ್ಯೆ?
Naa Ninna Bidalare Review: ಬಿಟ್ಟೆನೆಂದರೂ ಬಿಡದೀ ಮಾಯೆ!
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.