ಲೋಕದ ಅಂಕುಡೊಂಕು ತಿದ್ದಿದ ಮಹಾಕವಿ ಸರ್ವಜ್ಞ
Team Udayavani, Feb 22, 2019, 12:06 PM IST
ಶಿವಮೊಗ್ಗ: ಸಾಮಾನ್ಯ ಜನರೊಂದಿಗೆ ಸಾಮಾನ್ಯರಂತೆ ಬೆರೆತು ಲೋಕದ ಅಂಕುಡೊಂಕುಗಳನ್ನು ತಿದ್ದಿದ ಮಹಾಕವಿ ಸರ್ವಜ್ಞ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕುಂಬಾರರ ಸಂಘ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಸಾಹಿತ್ಯವನ್ನು ಓದಿ ಅರ್ಥೈಸಿಕೊಳ್ಳಬಹುದು ಆದರೆ ನೆನಪಿನಲ್ಲಿಡುವುದು ಕಷ್ಟ. ಆದರೆ ಸರ್ವಜ್ಞನ ವಚನಗಳು ಸಾಮಾನ್ಯ ಜನರು ಸಹ ಅರ್ಥೈಸಿಕೊಂಡು ನೆನಪಿನಲ್ಲಿ ಉಳಿಸಿಕೊಂಡಿದ್ದಾರೆ. ಸರ್ವಜ್ಞನ ವಚನಗಳಲ್ಲಿ ಮೂಡದ ಯಾವ ವಿಚಾರಧಾರೆಗಳು ಸಿಗುವುದಿಲ್ಲ ಆತ ಸಂಪೂರ್ಣ ಜ್ಞಾನಿಯಾಗಿದ್ದ ಎಂದರು. ಸರ್ವಜ್ಞ ಹೇಗೆ ಜ್ಞಾನದ ಮಹತ್ತರ ಘಟ್ಟ ಏರಿದ ಎಂಬುದು ಸ್ಪಷ್ಟವಾಗಿ ನಿಲುಕುವುದಿಲ್ಲ. ಆದರೆ ಆತನೇ ವಚನವೊಂದರಲ್ಲಿ ತಿಳಿಸಿರುವಂತೆ ಸರ್ವರಿಂದ ಒಂದೊಂದು ನುಡಿ ಕಲಿತು ಸರ್ವಜ್ಞನಾದವನು ಎಂದು ಹೇಳಿರುವುದನ್ನು ಈ ಸಂದರ್ಭದಲ್ಲಿ ನೆನಪಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಕತ್ತಿಗೆ ಗಂಗಾಧರಪ್ಪ, ಸಮಾಜದ ಉನ್ನತಿಗೆ ಶ್ರಮಿಸಿದ ಮಹಾನ್ ವ್ಯಕ್ತಿಗಳಲ್ಲಿ ಸರ್ವಜ್ಞ ಪ್ರಮುಖನಾದವನು. ಆತನ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಗುವ ಅಗತ್ಯ ಇದೆ ಎಂದರು.
ಉಪನ್ಯಾಸ ನೀಡಿದ ಇನ್ನೋರ್ವ ಉಪನ್ಯಾಸಕ ಬಸವರಾಜ ಎಂ., ಬಸವಣ್ಣ, ಸರ್ವಜ್ಞ ಮುಂತಾದ ಸಾಮಾಜಿಕ ಚಳುವಳಿಗಾರರನ್ನು ಮೇಲ್ವರ್ಗದಿಂದ ಬಂದವರು ಎಂದು ಕತೆ ಕಟ್ಟಲಾಗಿದೆ. ಆದರೆ ಅವರ್ಯಾರು ಮೇಲ್ಜಾತಿಯವರಲ್ಲ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಎಸ್.ಪಿ ಶೇಷಾದ್ರಿ ವಹಿಸಿದ್ದರು. ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಚಂದ್ರಶೇಖರಪ್ಪ, ತಾಲೂಕು ಕುಂಬಾರರ ಸಂಘದ ಅಧ್ಯಕ್ಷ ಎಸ್. ಮಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ನಾಯಕ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
MUST WATCH
ಹೊಸ ಸೇರ್ಪಡೆ
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.