ಕಳ್ಳಭಟ್ಟಿ ದುರಂತ: 30 ಸಾವು
Team Udayavani, Feb 23, 2019, 12:30 AM IST
ಗುವಾಹಟಿ: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿದ ಪರಿಣಾಮ 7 ಮಂದಿ ಮಹಿಳೆಯರು ಸೇರಿದಂತೆ ಕನಿಷ್ಠ 30 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಬಿಹಾರ ಮತ್ತು ಉತ್ತರಾಖಂಡದಲ್ಲಿ ಕಳ್ಳಭಟ್ಟಿ ದುರಂತವು ಹಲವರನ್ನು ಬಲಿತೆಗೆದುಕೊಂಡ ಬೆನ್ನಲ್ಲೇ ಅದೇ ಮಾದರಿಯ ಮತ್ತೂಂದು ಘಟನೆ ವರದಿಯಾಗಿದೆ. ಸಾಲಿಮಿರಾ ಟೀ ಎಸ್ಟೇಟ್ನಲ್ಲಿ ದುಡಿಯುತ್ತಿದ್ದ 100ಕ್ಕೂ ಹೆಚ್ಚು ಕಾರ್ಮಿಕರು ಕಳ್ಳಭಟ್ಟಿ ಸೇವಿಸಿದ್ದು, 30 ಮಂದಿ ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬಹುತೇಕ ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತನಿಖೆಗೆ ಸಿಎಂ ಸರ್ಬಾನಂದ ಸೊನೋವಾಲ್ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.