ಮನೆ ಹಸ್ತಾಂತರ ಪ್ರಕ್ರಿಯೆ ತುರ್ತಾಗಿ ಪೂರ್ಣಗೊಳಿಸಿ : ಅನೀಸ್
Team Udayavani, Feb 23, 2019, 12:30 AM IST
ಮಡಿಕೇರಿ:ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆಗಳನ್ನು ಸಂಬಂಧಪಟ್ಟ ಅರ್ಹ ಫಲಾನುಭವಿಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಒದಗಿಸಲಾಗುತ್ತಿರುವ ಮೂಲಸೌಕರ್ಯಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ಮನೆಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಬಾಕಿ ಉಳಿದಿರುವ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಸೂಚಿಸಿದರು.
ಐಟಿಡಿಪಿ ಅಧಿಕಾರಿ ಶಿವಕುಮಾರ್ ಅವರು ಈಗಾಗಲೇ ಬಸವನಹಳ್ಳಿಯಲ್ಲಿ 138 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 34 ಮನೆಗಳ ಕಾಮಗಾರಿ ಬಾಕಿ ಇದೆ. ಹಾಗೆಯೇ ಬ್ಯಾಡಗೊಟ್ಟದಲ್ಲಿ 132 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 21 ಮನೆಗಳ ಕಾಮಗಾರಿ ಬಾಕಿ ಇದೆ ಎಂದು ಅವರು ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ಜವರೇಗೌಡ, ತಹಶೀಲ್ದಾರ್ ಗೋವಿಂದ ರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲಿÂàಕರಣ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರೇವಣ್ಣರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಇತರರು ಹಾಜರಿದ್ದರು
ವಾರದ ಅವಧಿ
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಂತಿಮ ಹಂತದಲ್ಲಿರುವಂತಹ ಕಾಮಗಾರಿ ಗಳನ್ನು ತುರ್ತಾಗಿ ಒಂದು ವಾರದೊ ಳಗೆ ಪೂರ್ಣಗೊಳಿಸಬೇಕು ಮತ್ತು ಕೆಆರ್‌ಐಡಿಸಿಎಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲಿಕರಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗೆ ತಿಳಿಸಿದರು. ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಮನೆ ಪಡೆದುಕೊಳ್ಳುತ್ತಿ ರುವ ಅರ್ಹ ಫಲಾನುಭವಿಗಳಿಗೆ ವಿಶೇಷ ಶಿಬಿರ ಆಯೋಜಿಸಿ ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಖಾತೆ ಹೊಂದುವಂತೆ ಉಪ ವಿಭಾಗಾಧಿಕಾರಿತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.