ಬೋಟ್ ಪತ್ತೆ ಚುರುಕುಗೊಳಿಸಲು ಆಗ್ರಹ
Team Udayavani, Feb 23, 2019, 12:30 AM IST
ಮಲ್ಪೆ: ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟ್ ಮತ್ತು ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕು, ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ರಕ್ಷಣಾ ಕಾರ್ಯಾಚರಣೆಯನು ಇನ್ನಷ್ಟು ಚುರುಕುಗೊಳಿಸುವಂತೆ ಅಖೀಲ ಭಾರತ ಮೀನುಗಾರರ ವೇದಿಕೆ ಗುರುವಾರ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ ಮತ್ತು ಅನಂತ ಕುಮಾರ್ ಹೆಗಡೆ ಅವರನ್ನು ಭೇಟಿ ಮಾಡಿ ಆಗ್ರಹಿಸಿದೆ.
ಅಖೀಲ ಭಾರತ ಮೀನುಗಾರರ ವೇದಿಕೆಯ ನೇತೃತ್ವದಲ್ಲಿ ಕೇಂದ್ರ ಸರಕಾರಕ್ಕೆ ವಿವಿಧ ಬೇಡಿಕೆಗಳ ಬಗ್ಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, ಬಜೆಟ್‌ನಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಿ 750 ಕೋ. ರೂ. ಅನುದಾನವನ್ನು ಒದಗಿಸಿರುವ ಹಿನ್ನೆಲೆಯಲ್ಲಿ ಅಮಿತ್ ಷಾ ಅವರಿಗೆ ಬೆಳ್ಳಿಯ ದೋಣಿ ನೀಡಿ ಸಮ್ಮಾನಿಸಲಾಯಿತು.
ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಸಿ.ಟಿ. ರವಿ, ಲಾಲಾಜಿ ಆರ್. ಮೆಂಡನ್, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಮೀನುಗಾರರ ವೇದಿಕೆ ಪ್ರತಿನಿಧಿಗಳಾದ ಕರುಣಾಕರ ಸಾಲ್ಯಾನ್, ದಯಾನಂದ ಕೆ. ಸುವರ್ಣ, ಗೋಪಾಲ ಆರ್ ಕೆ., ನಿತ್ಯಾನಂದ ಕೋಟ್ಯಾನ್ ಉಪಸ್ಥಿತರಿದ್ದರು.
ಎಸ್ಪಿಗೆ ಮನವಿ
ಮೀನುಗಾರರ ನಾಪತ್ತೆ ಪ್ರಕರಣವನ್ನು ಶೀಘ್ರವಾಗಿ ತನಿಖೆ ನಡೆಸಿ ಮೀನುಗಾರರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲೆಯ ನೂತನ ಎಸ್ಪಿ ನಿಶಾ ಜೇಮ್ಸ್ ಅವರಲ್ಲಿ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.