ಸುದ್ದಿಗೋಷ್ಠಿಯಲ್ಲೇ ಕೈ ಮುಖಂಡರ ವಾಗ್ವಾದ
Team Udayavani, Feb 23, 2019, 12:02 AM IST
ದಾವಣಗೆರೆ: ಯಾವುದೇ ಮುನ್ಸೂಚನೆ ಇಲ್ಲದೆ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂಬ ವಿಚಾರವಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲೇ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ಎಸ್.ಎಸ್. ಪ್ರಕಾಶಂ ಮತ್ತು ಜಿಲ್ಲಾ ಅಧ್ಯಕ್ಷ ಅಲ್ಲಾವಲಿ ಗಾಜಿಖಾನ್ ನಡುವೆ ಮಾತಿನ ಚಕಮಕಿ ನಡೆದಿದೆ.
ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ಎಸ್.ಎಸ್. ಪ್ರಕಾಶಂ ಮತ್ತು ಜಿಲ್ಲಾ ಅಧ್ಯಕ್ಷ ಅಲ್ಲಾವಲಿ ಗಾಜಿಖಾನ್ ಇಬ್ಬರು ಜಂಟಿ ಸುದ್ದಿಗೋಷ್ಠಿಗೆ ಆಗಮಿಸಿದ್ದರು. ಪ್ರಕಾಶಂ ದಾವಣಗೆರೆ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನ ಜಿಲ್ಲಾ ಅಧ್ಯಕ್ಷರನ್ನಾಗಿ ಕೆ.ಸಿ.ಲಿಂಗರಾಜ್ರನ್ನು ನೇಮಕ ಮಾಡಿರುವ ವಿಷಯ ಪ್ರಸ್ತಾಪಿಸುತ್ತಿದ್ದಂತೆಯೇ ಅಲ್ಲಾವಲಿ ಗಾಜಿಖಾನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. “ನಾನು ಜಿಲ್ಲಾಧ್ಯಕ್ಷ ಇಲ್ಲೇ ಇದ್ದೇನೆ. ನೀವು ಮತ್ತೂಬ್ಬರನ್ನು ಆಯ್ಕೆ ಮಾಡಿರುವ ಬಗ್ಗೆ ಹೇಳುತ್ತಿದ್ದೀರಲ್ಲ. ಇದು ಸರಿಯಲ್ಲ. ಒಪ್ಪುವುದಿಲ್ಲ ಎಂದು ಹೇಳಿದರು.
ಕುಳಿತಕೊಳ್ಳಪ್ಪ, ಅದೆಲ್ಲಾ ಹೇಳುವ ಅಧಿಕಾರ ನಿನಗೆ ಇಲ್ಲ ಎಂದಾಗ ನಿಮಗೂ ಅಧಿಕಾರ ಇಲ್ಲ. ನನಗೆ
ಒಂದು ಮಾತು ತಿಳಿಸದೆ ಏಕಾಏಕಿ ಜಿಲ್ಲಾ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲಾಗಿದೆ ಎಂದು ಗಾಜಿಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.