ಹಾಸನ ಡೀಸಿ ರೋಹಿಣಿ ಎತ್ತಂಗಡಿ
Team Udayavani, Feb 23, 2019, 1:40 AM IST
ಬೆಂಗಳೂರು/ಹಾಸನ: ಅಂತೂ, ಇಂತೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಅಲ್ಪಸಂಖ್ಯಾತರ ಇಲಾಖೆ ನಿರ್ದೇಶನಾಲಯದ ನಿರ್ದೇಶಕರಾಗಿದ್ದ ಅಕ್ರಂ ಪಾಶಾ ಅವರನ್ನು ನಿಯೋಜಿಸಲಾಗಿದೆ.
ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ನಿಧಿ
ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ಒತ್ತಡ
ಇತ್ತಾದರೂ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಇದೇ ಸಂದರ್ಭದಲ್ಲಿ ಡಾ.ಎಂ.ವಿ.ವೆಂಕಟೇಶ್ ಅವರನ್ನು ರಾಷ್ಟ್ರೀಯ ತೋಟಗಾರಿಕಾ ಮಿಷನ್ ನಿರ್ದೇ
ಶಕರನ್ನಾಗಿ, ಕೃಷ್ಣ ಬಾಜಪೇಯಿ ಅವರನ್ನು ಹಾವೇರಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಮತ್ತೆ ನ್ಯಾಯಾಲಯದ ಮೆಟ್ಟಿಲೇರಲು ಚಿಂತನೆ?
ಈ ಮಧ್ಯೆ, ಹಾಸನದಲ್ಲೇ ಇದ್ದರೂ ನೂತನ ಜಿಲ್ಲಾಧಿಕಾರಿಯವರಿಗೆ ಕಾರ್ಯಭಾರ ವಹಿಸಿ ಕೊಡಲು ರೋಹಿಣಿ ಸಿಂಧೂರಿ ಅವರು ಕಚೇರಿಗೆ ಬರಲಿಲ್ಲ. ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ
ಅವರಿಂದ ಅಕ್ರಂ ಪಾಷಾ ಅವರು ಕಾರ್ಯಭಾರ ವಹಿಸಿಕೊಂಡರು. ಅಲ್ಲದೆ, ಅವಧಿ ಪೂರ್ವ ವರ್ಗಾ
ವಣೆಯನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿಯವರು ಮತ್ತೆ ನ್ಯಾಯಾಲಯದ ಮೆಟ್ಟಿಲೇರಲಿದ್ದಾರೆ ಎಂದು
ಅಧಿಕಾರಿಗಳ ವಲಯದಲ್ಲಿ ಚರ್ಚೆ ಅರಂಭವಾಗಿದೆ. ಒಂದು ಹುದ್ದೆಯಲ್ಲಿ ಐಎಎಸ್ ಅಧಿಕಾರಿಗಳನ್ನು ಕನಿಷ್ಠ 2 ವರ್ಷದ ಅವಧಿಗಿಂತ ಮೊದಲು ವರ್ಗ ಮಾಡಬಾರದೆಂಬ ನಿಯಮ ಆಧರಿಸಿ ನ್ಯಾಯಾಲಯದಲ್ಲಿ ಹೋರಾಟ ಮಾಡಿ ಹಾಸನ ಜಿಲ್ಲಾಧಿಕಾರಿ ಹುದ್ದೆಗೆ ಬಂದಿದ್ದ ರೋಹಿಣಿ
ಸಿಂಧೂರಿ, ಈಗ ಮತ್ತೆ ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಹಾಗಾಗಿಯೇ ನೂತನ ಜಿಲ್ಲಾಧಿಕಾರಿಯವರಿಗೆ ಕಾರ್ಯಭಾರ ವಹಿಸಲು ಅವರು ನಿರಾಕರಿಸಿದ್ದಾರೆಂಬ ವದಂತಿ ಹರಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.